ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಇತ್ತೀಚೆಗೆ ಬಿಡುಗಡೆಯಾಗುತ್ತಿರುವ ಹೊಸ ಕಾರು ಮಾದರಿಗಳು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕೂಡಾ ಹೊಸ ಕಾರು ಖರೀದಿದಾರರನ್ನು ಸೆಳೆಯುತ್ತಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯದಲ್ಲಿ ಹಲವಾರು ವಿಭಿನ್ನ ತಾಂತ್ರಿಕ ಸೌಲಭ್ಯಗಳನ್ನು ಒಳಗೊಂಡಿದ್ದು, ಇವು ಕಾರು ಚಾಲನೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ಮೂಲಕ ಕಾರು ಪ್ರಯಾಣವನ್ನು ಮತ್ತಷ್ಟು ಅರಾಮಗೊಳಿಸುತ್ತವೆ. ಈ ಮೊದಲು ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಕೇವಲ ಐಷಾರಾಮಿ ಕಾರುಗಳಲ್ಲಿ ಮಾತ್ರ ಅಳವಡಿಸುತ್ತಿದ್ದ ಕಾರು ಕಂಪನಿಗಳು ಇದೀಗ ಮಧ್ಯಮ ಕ್ರಮಾಂಕದ ಕಾರುಗಳಲ್ಲೂ ಆಯ್ಕೆ ರೂಪದಲ್ಲಿ ನೀಡುತ್ತಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಎಡಿಎಎಸ್ ಆಯ್ಕೆ ಹೊಂದಿರುವ ಕಾರುಗಳು ಸಾಮಾನ್ಯ ಕಾರು ಮಾದರಿಗಳಿಂತಲೂ ತುಸು ದುಬಾರಿಯಾಗಿದ್ದರೂ ಸಹ ಮಧ್ಯಮ ಗಾತ್ರದ ಕಾರುಗಳಲ್ಲೂ ಜೋಡಣೆ ಮಾಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಕಾರುಗಳು ಐಷಾರಾಮಿ ಕಾರುಗಳ ಮಾದರಿಯಲ್ಲಿ ಕಾರ್ಯನಿರ್ವಹಣೆ ಹೊಂದಿರುತ್ತವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಜೊತೆಗೆ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ಸಹ ಇತ್ತೀಚಿನ ಹೊಸ ಕಾರು ಮಾದರಿಗಳಲ್ಲಿ ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡುತ್ತಿದ್ದು, ಹೊಸ ಎಡಿಎಎಸ್ ಹೊಂದಿರುವ ಮಧ್ಯಮ ಕ್ರಮಾಂಕದ ಪ್ರಮುಖ ಕಾರುಗಳ ಮಾಹಿತಿಯನ್ನು ಇಲ್ಲಿ ಚರ್ಚಿಸಲಾಗಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಎಂಜಿ ಆಸ್ಟರ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ

ಸ್ಟೈಲ್, ಸೂಪರ್, ಸ್ಮಾರ್ಟ್, ಸ್ಯಾವಿ ಮತ್ತು ಶಾರ್ಪ್ ವೆರಿಯೆಂಟ್‌ಗಳೊಂದಿಗೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಪಡೆದುಕೊಂಡಿರುವ ಎಂಜಿ ಆಸ್ಟರ್ ಕಾರು ಮಾದರಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಪಡೆದುಕೊಂಡಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.9.78 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.78 ಲಕ್ಷ ಬೆಲೆ ಹೊಂದಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಆಸ್ಟರ್ ಕಾರಿನಲ್ಲಿ ವಿವಿಧ ತಾಂತ್ರಿಕ ಸೌಲಭ್ಯಗಳೊಂದಿಗೆ 360 ಡಿಗ್ರಿ ಕ್ಯಾಮೆರಾ ಜೊತೆಗೆ ಅಟೋನಮಸ್ ಲೆವಲ್ 2 ಪ್ಯಾಕೇಜ್‌ನಲ್ಲಿ ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಹೆಡ್‌ಲ್ಯಾಂಪ್ ಕಂಟ್ರೋಲ್, ಲೈನ್ ಡಿಪಾರ್ಚರ್ ವಾರ್ನಿಂಗ್, ಲೈನ್ ಡಿಪಾರ್ಚರ್ ಪ್ರಿವೆಷನ್, ಲೈನ್ ಕೀಪ್ ಅಸಿಸ್ಟ್ ಸೌಲಭ್ಯಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಇದಲ್ಲದೇ ಹೈ ಎಂಡ್ ಮಾದರಿಗಾಗಿ ಫಾರ್ವಡ್ ಕೂಲಿಷನ್ ವಾರ್ನಿಂಗ್, ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಸ್ಪೀಡ್ ಅಸಿಸ್ಟ್ ಸಿಸ್ಟಂ ಇನ್ಫಾರ್ಮೆಷನ್ ಮೋಡ್, ಸ್ಪೀಡ್ ಅಸಿಸ್ಟ್ ಸಿಸ್ಟಂ, ಬ್ಲೈಡ್ ಸ್ಪಾಟ್, ಲೈನ್ ಚೆಂಜ್ ಅಸಿಸ್ಟ್, ರಿಯರ್ ಕ್ರಾಸ್ ಟ್ರಾಫಿಕ್ ಅಲರ್ಟ್ ಸಿಸ್ಟಂ ಸೌಲಭ್ಯಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಮಹೀಂದ್ರಾ ಎಕ್ಸ್‌ಯುವಿ700

ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿರುವ ಎಕ್ಸ್‌ಯುವಿ700 ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಹೊಸ ಕಾರಿನಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ವಿವಿಧ ಸೇಫ್ಟಿ ಫೀಚರ್ಸ್ ಗಳೊಂದಿಗೆ ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಎಂಜಿ ಗ್ಲೊಸ್ಟರ್

ಎಂಜಿ ಮೋಟಾರ್ ಕಂಪನಿಯು ಎಡಿಎಎಸ್ ಸೌಲಭ್ಯವನ್ನು ಆಸ್ಟರ್ ಮಾದರಿಯಲ್ಲಿ ನೀಡುವುದಕ್ಕೂ ಈ ಹಿಂದಿನ ಗ್ಲೊಸ್ಟರ್ ಎಸ್‌ಯುವಿಯಲ್ಲೂ ಜೋಡಣೆ ಮಾಡಿತ್ತು. ಹೊಸ ಗ್ಲೊಸ್ಟರ್ ಎಸ್‌ಯುವಿಯಲ್ಲಿರುವ ಲೆವಲ್ 1 ಆಟೋನಮಸ್ ಎಡಿಎಎಸ್ ಸೌಲಭ್ಯದಲ್ಲಿ ಆಟೋಮ್ಯಾಟಿಕ್ ಪಾರ್ಕಿಂಗ್ ಅಸಿಸ್ಟ್ (ಎಪಿಎ), ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (ಎಇಬಿ), ಫಾರ್ವರ್ಡ್ ಕೂಲಿಷನ್ ವಾರ್ನಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್ ಹಾಗೂ ಲೇನ್ ಎಕ್ಸಿಟ್ ವಾರ್ನಿಂಗ್ ಸೌಲಭ್ಯ ಹೊಂದಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಫುಲ್ ಸೈಜ್ ಎಸ್‌ಯುವಿ ಮಾದರಿಯಾಗಿರುವ ಗ್ಲೊಸ್ಟರ್‌ ಕಾರಿನಲ್ಲಿ ಸೂಪರ್, ಸ್ಮಾರ್ಟ್, ಶಾರ್ಪ್ ಮತ್ತು ಸ್ಯಾವಿ ಎನ್ನುವ ನಾಲ್ಕು ಪ್ರಮುಖ ವೆರಿಯೆಂಟ್‌ಗಳು ಮಾರಾಟಗೊಳ್ಳುತ್ತಿದ್ದು, ವಿವಿಧ ವೆರಿಯೆಂಟ್‌ಗಳಲ್ಲಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನು ನೀಡಲಾಗುತ್ತಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಹೊಂದಿರುವ ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿವು..

ಹೊಸ ಕಾರಿನಲ್ಲಿ 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 160-ಬಿಹೆಚ್‌ಪಿ, 375-ಎನ್ಎಂ ಟಾರ್ಕ್ ಉತ್ಪಾದಿಸಲಿದ್ದರೆ, ಟಾಪ್-ಎಂಡ್ ಮಾದರಿಯಲ್ಲಿರುವ 2.0-ಲೀಟರ್ ಟ್ವಿನ್-ಟರ್ಬೊ ಎಂಜಿನ್ ಮಾದರಿಯು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 216-ಬಿಹೆಚ್‌ಪಿ, 480-ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

Most Read Articles

Kannada
English summary
New cars in india come with advanced driver assistance systems details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X