ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಕರೋನಾ ವೈರಸ್ ಪರಿಣಾಮ ಹಲವಾರು ಏರಿಳಿತಗಳನ್ನು ಎದುರಿಸುತ್ತಿರುವ ಭಾರತೀಯ ಆಟೋ ಉದ್ಯಮವು ಸುಧಾರಣೆಯ ಹಂತದಲ್ಲೇ ಮತ್ತೆ ಲಾಕ್‌ಡೌನ್ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದು, ಇದರ ನಡುವೆ ಕಳೆದ ತಿಂಗಳು ಏಪ್ರಿಲ್‌ನಲ್ಲಿ ಹಲವಾರು ಹೊಸ ವಾಹನಗಳು ಮಾರುಕಟ್ಟೆ ಪ್ರವೇಶಿಸಿವೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಕೋವಿಡ್ ಪರಿಣಾಮ ಕಳೆದ ವರ್ಷ ಹೊಸ ವಾಹನಗಳ ಮಾರಾಟ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ತದನಂತರದ ಕಳೆದ ವರ್ಷದ ಕೊನೆಯಲ್ಲಿ ಮತ್ತು ಈ ವರ್ಷದ ಆರಂಭದಲ್ಲಿ ವಾಹನ ಮಾರಾಟ ಪ್ರಕ್ರಿಯೆ ತುಸು ಚೇತರಿಸಿಕೊಂಡಿತ್ತು. ಹೊಸ ವಾಹನಗಳ ಮಾರಾಟವು ಹೆಚ್ಚುತ್ತಿದ್ದ ಸಂದರ್ಭದಲ್ಲೇ ಕೋವಿಡ್ 2ನೇ ಅಲೆ ಹೆಚ್ಚಳವಾಗಿದ್ದು, ಕಳೆದ ತಿಂಗಳು ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ತಮ್ಮ ಹೊಸ ಕಾರುಗಳ ಮಾರಾಟಕ್ಕೆ ಚಾಲನೆ ನೀಡಿದ್ದು, ಬಿಡುಗಡೆಯಾದ ಕಾರುಗಳ ಮಾಹಿತಿ ಇಲ್ಲಿದೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಸಿಟ್ರನ್ ಹೊಸ ಸಿ5 ಏರ್‌ಕ್ರಾಸ್ ಕಾರು ಮಾದರಿಯು ಮಧ್ಯಮ ಕ್ರಮಾಂಕದ ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಬಿಡುಗಡೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 29.90 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 31.90 ಲಕ್ಷ ಬೆಲೆ ಹೊಂದಿದೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಫೀಲ್ ಮತ್ತು ಶೈನ್ ಎನ್ನುವ ಎರಡು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿರುವ ಹೊಸ ಕಾರು 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮೂಲಕ 177-ಬಿಎಚ್‌ಪಿ ಮತ್ತು 400ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಹ್ಯುಂಡೈ ಟ್ಯುಸಾನ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುವ ತವಕದಲ್ಲಿದೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

2021ರ ಬಿಎಂಡಬ್ಲ್ಯು 6 ಸೀರಿಸ್ ಜಿಟಿ

ಬಿಎಂಡಬ್ಲ್ಯು ಇಂಡಿಯಾ ಕಂಪನಿಯು ತನ್ನ ಬಹುನಿರೀಕ್ಷಿತ 6-ಸೀರಿಸ್ ಜಿಟಿ ಫೇಸ್‌ಲಿಫ್ಟ್ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಫೀಚರ್ಸ್‌ಗಳು ಮತ್ತು ಆಕರ್ಷಕ ವಿನ್ಯಾಸ ಹೊಂದಿರುವ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ.67.90 ಲಕ್ಷದಿಂದ ರೂ.77.90 ಲಕ್ಷ ಬೆಲೆಯೊಂದಿಗೆ ಹೊಸ ಕಾರಿನಲ್ಲಿ ಮೂರು ಎಂಜಿನ್ ಆಯ್ಕೆಗಳ ನೀಡಲಾಗಿದೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

2.0-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋ ಚಾರ್ಜ್ಡ್ ಪೆಟ್ರೋಲ್, 2.0-ಲೀಟರ್ ಟ್ವಿನ್-ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಮತ್ತು 3.0-ಲೀಟರ್ ಡೀಸೆಲ್ ಟ್ವಿನ್-ಟರ್ಬೋಚಾರ್ಜ್ಡ್ ಎಂಜಿನ್ ಆಯ್ಕೆ ಹೊಂದಿದ್ದು, 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಪೊಲೊ ಕಂಫರ್ಟ್‌ಲೈನ್ ಟಿಎಸ್ಐ ವರ್ಷನ್ ಬಿಡುಗಡೆ

ಫೋಕ್ಸ್‌ವ್ಯಾಗನ್ ಪೊಲೊ ಹ್ಯಾಚ್‌ಬ್ಯಾಕ್ ಕಾರಿನ ಕಂಫರ್ಟ್‌ಲೈನ್ ಟಿಎಸ್ಐ ಮಾದರಿಯನ್ನು ಸ್ಥಗಿತಗೊಳ್ಳಲಿರುವ ಟರ್ಬೊ ಮಾದರಿಯನ್ನು ಆಧರಿಸಿ ಬಿಡುಗಡೆ ಮಾಡಿದ್ದು, ಸ್ಟ್ಯಾಂಡರ್ಡ್ ಕಂಪರ್ಟ್‌ಲೈನ್ ಮಾದರಿಗಿಂತಲೂ ಹೊಸ ಆವೃತ್ತಿಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಹೊಸ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.41 ಲಕ್ಷ ಬೆಲೆ ನಿಗದಿಪಡಿಸಲಾಗಿದ್ದು, ಹೊಸ ಕಾರಿನ ಬೆಲೆಯು ಸ್ಟ್ಯಾಂಡರ್ಡ್ ಕಂಪರ್ಟ್‌ಲೈನ್ ಮಾದರಿಗಿಂತಲೂ ತುಸು ದುಬಾರಿಯಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಹೊಸ ಕಾರುಗಳಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವ ಫೀಚರ್ಸ್ ಒಳಗೊಂಡಂತೆ ಹೆಚ್ಚುವರಿ ಪ್ರೀಮಿಯಂ ಸೌಲಭ್ಯಗಳನ್ನು ನೀಡಲಾಗಿದ್ದು, ಕಂಪನಿಯು ಮೊದಲ ಬಾರಿಗೆ ಕಂಪರ್ಟ್‌ಲೈನ್ ಮಾದರಿಯಲ್ಲಿ ಟಿಎಸ್ಐ ಎಂಜಿನ್ ಆಯ್ಕೆ ನೀಡಿದೆ.

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

2021ರ ರೆನಾಲ್ಟ್ ಟ್ರೈಬರ್

ಬಜೆಟ್ ಬೆಲೆಯ ಎಂಪಿವಿ ಕಾರು ಮಾದರಿಯಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಗ್ರಾಹಕರ ಆಕರ್ಷಣೆಗೆ ಕಾರಣವಾಗಿರುವ ರೆನಾಲ್ಟ್ ಟ್ರೈಬರ್ ಮಾದರಿಯು ಇದೀಗ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.30 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 7.65 ಲಕ್ಷ ಬೆಲೆ ಪಡೆದುಕೊಂಡಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಕೆಲವು ಪ್ರಮುಖ ಬದಲಾವಣೆಗಳೊಂದಿಗೆ 2021ರ ಮಾದರಿಯು ಗ್ರಾಹಕರ ಕೈಸೇರುತ್ತಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಕಳೆದ ತಿಂಗಳು ಏಪ್ರಿಲ್‌ನಲ್ಲಿ ಬಿಡುಗಡೆಯಾದ ಹೊಸ ಕಾರುಗಳಿವು..!

ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‍ಎಕ್ಸ್‌ಟಿ, ಆರ್‌ಎಕ್ಸ್‌ಜೆಡ್ ಆವೃತ್ತಿಗಳನ್ನು ಹೊಂದಿರುವ ಹೊಸ ಕಾರುಗಳಲ್ಲಿ ಬೆಸ್ ವೆರಿಯೆಂಟ್ ಹೊರತುಪಡಿಸಿ ಇನ್ನುಳಿದ ಮಾದರಿಗಳು ಮ್ಯಾನುವಲ್ ಮತ್ತು ಸಿವಿಟ್ ಗೇರ್‌ಬಾಕ್ಸ್ ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ರಿಯರ್ ವ್ಯೂ ಮಿರರ್ ಒಳಗೊಂಡ ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಬ್ಲ್ಯಾಕ್ ಔಟ್ ಥೀಮ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ನೀಡಲಾಗಿದೆ.

Most Read Articles

Kannada
English summary
New Cars Launched In April 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X