ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ಕೋವಿಡ್ 2ನೇ ಅಲೆ ಪರಿಣಾಮ ಭಾರೀ ಪ್ರಮಾಣದ ನಷ್ಟ ಅನುಭವಿಸಿದ್ದ ಭಾರತೀಯ ಆಟೋ ಉದ್ಯಮವು ಇದೀಗ ಸಾಕಷ್ಟು ಸುಧಾರಣೆ ಕಂಡಿದ್ದು, ವೈರಸ್ ಪರಿಣಾಮ ಬಿಡುಗಡೆ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದ ಆಟೋ ಕಂಪನಿಗಳು ಹೊಸ ವಾಹನಗಳ ಬಿಡುಗಡೆಯನ್ನು ಇದೀಗ ನಿಧಾನವಾಗಿ ಹೆಚ್ಚಿಸಿವೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ವೈರಸ್‌ನಿಂದ ಆರ್ಥಿಕ ಚಟುವಟಿಕೆಗಳು ನಿಧಾನವಾಗಿದ್ದರೂ ಸೋಂಕಿನ ಭೀತಿಯಿಂದಾಗಿ ಸ್ವಂತ ವಾಹನಗಳ ಬಳಕೆಯೂ ಹೆಚ್ಚುತ್ತಿರುವುದೇ ಹೊಸ ವಾಹನ ಮಾರಾಟದಲ್ಲಿ ತ್ವರಿತ ಹೆಚ್ಚಳ ಕಂಡುಬರುತ್ತಿದ್ದು, ಅಗಸ್ಟ್ ತಿಂಗಳಿನಲ್ಲಿ ವಿವಿಧ ಕಾರು ಉತ್ಪಾದನಾ ಕಂಪನಿಗಳು ತಮ್ಮ ಬಹುನೀರಿಕ್ಷಿತ ಕಾರುಗಳನ್ನು ರಸ್ತೆಗಿಳಿಸಿವೆ. ಹಾಗಾದ್ರೆ ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾದ ಹೊಸ ಕಾರುಗಳ ವಿಶೇಷತೆ ಏನು? ಬೆಲೆ ಎಷ್ಟು? ಮತ್ತು ಎಂಜಿನ್ ಮಾಹಿತಿಯನ್ನು ಇಲ್ಲಿ ತಿಳಿಯೋಣ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Tata Tiago NRG

Tata Motors ಕಂಪನಿಯು ತನ್ನ ಜನಪ್ರಿಯ Tiago ಕಾರಿನ NRG ಆವೃತ್ತಿಯನ್ನು ಹೊಸ ವಿನ್ಯಾಸದಲ್ಲಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.57 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.7.09 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ಹೊಸ Tiago NRG ಮಾದರಿಯು ಆಕರ್ಷಕ ವಿನ್ಯಾಸದೊಂದಿಗೆ 15-ಇಂಚಿನ ಅಲಾಯ್ ವ್ಹೀಲ್, ರೂಫ್ ರೈಲ್ಸ್ ಮತ್ತು ಬ್ಲ್ಯಾಕ್ ಔಟ್ ರೂಫ್, ಡ್ಯುಯಲ್ ಪಾತ್ ಸಸ್ಷೆಷನ್, 181 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಜೊತೆಗೆ ಬಾಡಿ ಕ್ಲಾಡಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Maruti Suzuki Wagon Extra Edition

Maruti Suzuki ಕಂಪನಿಯು Wagon Extra Edition ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.13 ಲಕ್ಷಗಳಾಗಿದೆ. Wagon Extra Edition ಬೆಲೆಯು ಸ್ಟ್ಯಾಂಡರ್ಡ್ ವಿಎಕ್ಸ್‌ಐ ರೂಪಾಂತರಕ್ಕಿಂತ ಸುಮಾರು ರೂ.1,000 ದುಬಾರಿಯಾಗಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ಹೊಸ Wagon Extra Edition ಮುಂಭಾಗ ಮತ್ತು ಹಿಂಭಾಗದಲ್ಲಿ ಬಂಪರ್ ಪ್ರೊಟೆಕ್ಟರ್‌ಗಳು, ವ್ಹೀಲ್ ಆರ್ಚ್ ಕ್ಲಾಡಿಂಗ್, ಸೈಡ್ ಸ್ಕರ್ಟ್‌ಗಳು, ಬಾಡಿ ಸೈಡ್ ಮೋಲ್ಡಿಂಗ್‌ಗಳು ಮತ್ತು ಕ್ರೋಮ್ ನೀಡಲಾಗಿದೆ. ಹಾಗೆಯೇ ಹೊಸ ಕಾರಿನ ಒಳಭಾಗದಲ್ಲಿ ಚಾರ್ಜರ್ ಎಕ್ಸ್‌ಟೆಂಡರ್, ಟ್ರಂಕ್ ಆರ್ಗನೈಸರ್ ಮತ್ತು ಡಿಜಿಟಲ್ ಏರ್ ಇನ್ಫ್ಲೇಟರ್ ಹೊಂದಿದ್ದು, 1.0 ಲೀಟರ್ 3-ಸಿಲಿಂಡರ್ ಎಂಜಿನ್ ಮತ್ತು 1.2 ಲೀಟರ್ 4-ಸಿಲಿಂಡರ್ ಕೆ-ಸೀರೀಸ್ ಪೆಟ್ರೋಲ್ ಎಂಜಿನ್‌ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Renault Kiger RXT (O)

ಹತ್ತನೇ ವರ್ಷದ ಸಂಭ್ರಮಕ್ಕಾಗಿ Renault ಕಂಪನಿಯು Kiger ಕಾರಿನಲ್ಲಿ RXT (O) ವೆರಿಯೆಂಟ್ ಬಿಡುಗಡೆ ಮಾಡಿದ್ದು, ಮಧ್ಯಮ ಕ್ರಮಾಂಕದಲ್ಲಿ ಬಿಡುಗಡೆಯಾಗಿರುವ ಹೊಸ ವೆರಿಯೆಂಟ್ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.7.37 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Kiger ಆ್ಯನಿವರ್ಸರಿ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೊಸ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಬೆಲೆಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ರೂ. 15 ಸಾವಿರದಷ್ಟು ದುಬಾರಿಯಾಗಿದೆ. ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಸ್ಪೆಷಲ್ ಎಡಿಷನ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಜೊತೆಗೆ 8-ಇಂಚಿನ ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಮತ್ತು 2.5 ಅಡ್ವಾನ್ಸ್ ಏರ್‌ಫಿಲ್ಟರ್ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

MG Gloster Savvy 7 Seater

MG Motor ಕಂಪನಿಯು ತನ್ನ ಐಷಾರಾಮಿ ಎಸ್‌ಯುವಿ ಕಾರು ಮಾದರಿಯಾದ Gloster ಕಾರಿನಲ್ಲಿ ಹೊಸದಾಗಿ Savvy 7 ಸೀಟರ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 37.28 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ಫುಲ್ ಸೈಜ್ ಎಸ್‌ಯುವಿ ಮಾದರಿಯಾಗಿರುವ Gloster ಕಾರಿನಲ್ಲಿ ಸೂಪರ್, ಸ್ಮಾರ್ಟ್, ಶಾರ್ಪ್ ಮತ್ತು ಸ್ಯಾವಿ ಎನ್ನುವ ನಾಲ್ಕು ಪ್ರಮುಖ ವೆರಿಯೆಂಟ್‌ಗಳು ಮಾರಾಟಗೊಳ್ಳುತ್ತಿದ್ದು, ವಿವಿಧ ವೆರಿಯೆಂಟ್‌ಗಳಲ್ಲಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯವನ್ನು ನೀಡಲಾಗುತ್ತಿದೆ. ಆದರೆ ಟಾಪ್ ಎಂಡ್ ಮಾದರಿಯಾದ ಸ್ಯಾವಿ ವೆರಿಯೆಂಟ್‌ನಲ್ಲಿ ಕೇವಲ 6 ಸೀಟರ್ ಮಾದರಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿತ್ತು. ಇದೀಗ 7 ಸೀಟರ್ ಸಹ ಲಭ್ಯವಿದ್ದು, ಹೊಸ ಕಾರಿನಲ್ಲಿ 2.0-ಲೀಟರ್ ಟರ್ಬೊ ಡೀಸೆಲ್ ಮತ್ತು 2.0-ಲೀಟರ್ ಟ್ವಿನ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Tata Safari And Harrier XTA+

Tata Harrier XTA+ ಮತ್ತು Safari XTA+ ಆವೃತ್ತಿಗಳು XMA ಮತ್ತು XZA ನಡುವಿನ ಸ್ಥಾನ ಪಡೆದುಕೊಂಡಿದ್ದು, ಆಟೋಮ್ಯಾಟಿಕ್ ಆವೃತ್ತಿಯಾಗಿರುವ ಹೊಸ ವೆರಿಯೆಂಟ್‌ಗಳು ಪನೊರಮಿಕ್ ಸನ್‌ರೂಫ್ ಅನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಂಡಿವೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Harrier XTA+ ವೆರಿಯೆಂಟ್ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19.14 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಮಾದರಿಯು ರೂ. 19.34 ಲಕ್ಷ ಬೆಲೆ ಹೊಂದಿದ್ದು, Safari XTA+ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ. 20.08 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

MG Hector Shine

MG Motor ಕಂಪನಿಯು Shine ವೆರಿಯೆಂಟ್ ಅನ್ನು ಹೊಸ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸಿ ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.51 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 16.49 ಲಕ್ಷಕ್ಕೆ ಖರೀದಿಗೆ ಲಭ್ಯವಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

MG ಕಂಪನಿಯು ಹೊಸ Hector Shine ಬಿಡುಗಡೆಗೂ ಮುನ್ನ ಹೈ ಎಂಡ್ ಸ್ಮಾರ್ಟ್ ವೆರಿಯೆಂಟ್‌ನಲ್ಲಿ ಮಾತ್ರ ನೀಡಲಾಗುತ್ತಿದ್ದ ಪ್ರಮುಖ ತಾಂತ್ರಿಕ ಅಂಶಗಳನ್ನು ಇದೀಗ ಹೊಸ ವೆರಿಯೆಂಟ್‌ನಲ್ಲೂ ನೀಡಲಾಗುತ್ತಿದ್ದು, ಹೊಸ ಮಾದರಿಯಲ್ಲಿ ಇದೀಗ ಸ್ಟ್ಯಾಂಡರ್ಡ್ ಆಗಿ ಎಲೆಕ್ಟ್ರಿಕ್ ಸನ್‌ರೂಫ್ ಮತ್ತು ಹೊಸದಾಗಿ ಒಂದು ಬಣ್ಣದ ಆಯ್ಕೆಯನ್ನು ನೀಡಲಾಗಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

2021 Honda Amaze Facelift

2021 Honda Amaze ಕಾರ್ ಅನ್ನು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.32 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.15 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿರುವ ಹೊಸ Amaze ಕಾರಿನಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಸಿಟಿ ಸೆಡಾನ್ ಮಾದರಿಯಲ್ಲಿ ಹೊರ ನೋಟದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

V8 ಎಂಜಿನ್ ಪ್ರೇರಿತ Land Rover Defender SUV

Jaguar Land Rover ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಹೊಚ್ಚ ಹೊಸ v8 ಎಂಜಿನ್ ಪ್ರೇರಿತ Defender SUV ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 1.82 ಕೋಟಿ ಬೆಲೆ ಹೊಂದಿವೆ. V8 ಎಂಜಿನ್ ಹೊಂದಿರುವ ಟಾಪ್ ಎಂಡ್ ಮಾದರಿಗಳನ್ನು ಸಹ ಬಿಡುಗಡೆ ಮಾಡಿದ್ದು, ಹೊಸ ಕಾರು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಮತ್ತು ಪವರ್‌ಫುಲ್ ಎಂಜಿನ್ ಆಯ್ಕೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Defender SUV ಮಾದರಿಯನ್ನು Defender 90 ಮತ್ತು Defender 110 ಮಾದರಿಗಳಲ್ಲಿ ಮಾರಾಟ ಮಾಡುತ್ತಿದ್ದು, 5.0-ಲೀಟರ್(4998 ಸಿಸಿ) ಪೆಟ್ರೋಲ್ ಎಂಜಿನ್ ಹೊಂದಿದೆ. ಆಲ್ ವ್ಹೀಲ್ ಡ್ರೈವ್ ಟೆಕ್ನಾಲಜಿಯೊಂದಿಗೆ 525-ಬಿಎಚ್‌ಪಿ ಮತ್ತು 625-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, V8 ಮಾದರಿಗಳಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳನ್ನು ನೀಡಲಾಗಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Mahindra Bolero Neo N10(0)

Mahindra ಕಂಪನಿಯು TUV300 ಸ್ಥಗಿತಗೊಳಿಸಿ ಹೊಸದಾಗಿ Bolero Neo ಆವೃತ್ತಿಯನ್ನು ಬಿಡುಗಡೆಗೊಳಿಸಿ ಮಾರಾಟ ಮಾಡುತ್ತಿದ್ದು, ಕಂಪನಿಯು ಹೊಸ ಕಾರಿನ ಟಾಪ್ ಎಂಡ್ ಮಾದರಿಯ ಬೆಲೆ ಮಾಹಿತಿಯನ್ನು ಇದೀಗ ಹಂಚಿಕೊಂಡಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Bolero Neo ಬಿಡುಗಡೆಯ ಸಂದರ್ಭದಲ್ಲಿ ಹೊಸ ಕಾರಿನ N10(0) ವೆರಿಯೆಂಟ್ ಬೆಲೆಯ ಮಾಹಿತಿಯನ್ನು ಕಾರಣಾಂತರಗಳಿಂದ ತಡವಾಗಿ ಹಂಚಿಕೊಳ್ಳುವುದಾಗಿ ಹೇಳಿದ್ದ Mahindra ಕಂಪನಿಯು ಇದೀಗ ಬೆಲೆ ಮಾಹಿತಿ ಪ್ರಕಟಿಸಿದ್ದು, ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿರುವ Bolero Neo N10(0) ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10.69 ಲಕ್ಷ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Mercedes AMG GLE 63 S Coupe

Mercedes-Benz ಕಂಪನಿಯು ಭಾರತದಲ್ಲಿನ ತನ್ನ AMG ಸರಣಿಯಲ್ಲಿ ಹೊಸದಾಗಿ AMG GLE 63 S Coupe ಎಸ್‌ಯುವಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಪ್ಯಾನ್ ಇಂಡಿಯಾ ಎಕ್ಸ್‌ಶೋರೂಂ ಪ್ರಕಾರ ರೂ. 2.07 ಕೋಟಿ ಬೆಲೆ ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ಹೊಸ ಕಾರುಗಳಲ್ಲಿ ಕಂಪನಿಯು V8 4.0-ಲೀಟರ್ ಟ್ವಿನ್-ಟರ್ಬೊ ಪೆಟ್ರೋಲ್ ಎಂಜಿನ್ ಬಳಕೆ ಮಾಡಿದ್ದು, ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಹೊಸ ಕಾರು 9-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 612-ಬಿಎಚ್‌ಪಿ ಮತ್ತು 850-ಎನ್ಎಂ ಟಾರ್ಕ್ ಉತ್ಪಾದಿಸಲಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Hyundai i20 N line ಅನಾವರಣ

Hyundai ಕಂಪನಿಯು ಪರ್ಫಾಮೆನ್ಸ್ ಪ್ರಿಯರಾಗಿ ತನ್ನ ಪ್ರಮುಖ ಕಾರು ಮಾದರಿಗಳಲ್ಲಿ N line ಆವೃತ್ತಿಗಳ ಮಾರಾಟವನ್ನು ಹೊಂದಿದ್ದು, ಕಂಪನಿಯು ಮೊದಲ ಬಾರಿಗೆ ಹೊಸ ಆವೃತ್ತಿಗಳ ಮಾರಾಟವನ್ನು ಭಾರತಕ್ಕೂ ಪರಿಚಯಿಸುತ್ತಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

i20 N line ವರ್ಷನ್ ಅನಾವರಣಗೊಳಿಸಿರುವ Hyundai ಕಂಪನಿಯು ಹೊಸ ಕಾರಿನ ಖರೀದಿಗೆ ರೂ.25 ಸಾವಿರ ಮುಂಗಡದೊಂದಿಗೆ ಅಧಿಕೃತ ಬುಕ್ಕಿಂಗ್ ಆರಂಭಿಸಿದ್ದು, ಹೊಸ ಕಾರು ಮುಂದಿನ ತಿಂಗಳು ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ. ಹೊಸ ಕಾರಿನಲ್ಲಿ ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ 1.0-ಲೀಟರ್ ಟರ್ಬೊ ಎಂಜಿನ್‌ನೊಂದಿಗೆ ಮೂರು ವೆರಿಯೆಂಟ್‌‌ಗಳಲ್ಲಿ ಖರೀದಿ ಮಾಡಬಹುದಾಗಿದ್ದು, N6 iMT, N8 iMT ಮತ್ತು N8 DCT ಆವೃತ್ತಿಗಳನ್ನು ಹೊಂದಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Mahindra XUV700 ಅನಾವರಣ

Mahinndra ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಹೊಸ ಕಾರು ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಪಡೆದುಕೊಂಡಿದೆ. ಇದರಲ್ಲಿ ಎಂಎಕ್ಸ್ ಸೀರಿಸ್ ಮಾದರಿಗಳು 5 ಸೀಟರ್‌ನೊಂದಿಗೆ ಬಿಡುಗಡೆಯಾಗಲಿದ್ದರೆ ಆಂಡ್ರಿನೊಎಕ್ಸ್ ಸೀರಿಸ್‌ ಕಾರುಗಳು 7 ಸೀಟರ್ ಸೌಲಭ್ಯದೊಂದಿಗೆ ತುಸು ಐಷಾರಾಮಿ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

Mahindra ಕಂಪನಿಯು 5 ಸೀಟರ್ ಹೊಂದಿರುವ ಎಂಎಕ್ಸ್ ಸೀರಿಸ್ ಹೊಂದಿರುವ ಎಕ್ಸ್‌ಯುವಿ700 ಮಾದರಿಯ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.99 ಲಕ್ಷ ಬೆಲೆಗೆ ನಿಗದಿಪಡಿಸಿದ್ದು, 7 ಸೀಟರ್ ಸೌಲಭ್ಯದ ಆಂಡ್ರಿನೊಎಕ್ಸ್ ಸೀರಿಸ್‌ ಬೆಲೆಯನ್ನು ಮುಂದಿನ ತಿಂಗಳು ಬಹಿರಂಗಪಡಿಸಲಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

MG Astor ಅನಾವರಣ

MG Motor ಕಂಪನಿಯು ಭಾರತದಲ್ಲಿ ವಿವಿಧ ಕಾರು ಮಾದರಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ತನ್ನ ಬಹುನೀರಿಕ್ಷಿತ Astor ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿರುವ ಪ್ರಮುಖ ಹತ್ತು ಕಾರುಗಳಿವು!

ಹೊಸ Astor ಕಾರು ಕಂಪ್ಯಾಕ್ಟ್ ಎಸ್‌ಯುವಿಯು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ಹೊಂದಿರುವ ಭಾರತದ ಮೊದಲ ಕಾರು ಮಾದರಿಯಾಗಿ ಗ್ರಾಹಕರಿಗೆ ವಿಭಿನ್ನವಾದ ಚಾಲನಾ ಅನುಭವ ನೀಡಲಿದ್ದು, ಸ್ಟ್ಯಾಂಡರ್ಡ್ Hector ಮಾದರಿಗಿಂತಲೂ ಕೆಳ ದರ್ಜೆಯ ಕಾರು ಮಾದರಿಯಾಗಿ ಮಾರಾಟಗೊಳ್ಳಲಿರುವ ಹೊಸ ಕಾರು 1.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಮುಂಬರುವ ಕೆಲವೇ ತಿಂಗಳುಗಳಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
English summary
New cars launched in india in august 2021 tiago nrg gloster savvy and more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X