Just In
- 13 min ago
ಅನಾವರಣವಾಯ್ತು 2021ರ ಹ್ಯುಂಡೈ ಸೊನಾಟಾ ಎನ್ ಲೈನ್ ಪರ್ಫಾಮೆನ್ಸ್ ಕಾರು
- 2 hrs ago
ಕಾರುಗಳ ರಫ್ತಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಮಾರುತಿ ಸುಜುಕಿ
- 4 hrs ago
ವಾರದ ಪ್ರಮುಖ ಸುದ್ದಿ: ಹೊಸ ಸಫಾರಿ ಬಿಡುಗಡೆ, ಟೋಲ್ ಸಂಗ್ರಹ ಹೆಚ್ಚಳ, ಇಳಿಕೆಯಾಗುತ್ತಾ ಪೆಟ್ರೋಲ್ ದರ?
- 14 hrs ago
ಬಿಡುಗಡೆಯಾಗಲಿರುವ ಓಲಾ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು?
Don't Miss!
- News
ನೊಂದ ಮಹಿಳೆಯಿಂದ ಪೊಲೀಸ್ ಸ್ಟೇಷನ್ ನಿಂದಲೇ ಫೇಸ್ ಬುಕ್ ಲೈವ್ !
- Movies
ಉಪೇಂದ್ರ ನಟನೆಯ ಕಬ್ಜ ಚಿತ್ರಕ್ಕೆ ಎಂಟ್ರಿ ಕೊಟ್ಟ 'ಕುರುಕ್ಷೇತ್ರ'ದ ಭೀಮ
- Sports
ಆರು ನಗರಗಳಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆ: ಅಹ್ಮದಾಬಾದ್ನಲ್ಲಿ ಫೈನಲ್: ವರದಿ
- Finance
ಭಾರತದಲ್ಲಿ ನೋಕಿಯಾ ಪವರ್ ಈಯರ್ಬಡ್ಸ್ ಲೈಟ್ಸ್ ಮಾರಾಟ
- Lifestyle
ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಈ ಜನಪ್ರಿಯ ಕಾರುಗಳನ್ನು ಖರೀದಿಸಲು ಗ್ರಾಹಕರು ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು..!
ಹೊಸ ವಾಹನವನ್ನು ಖರೀದಿಸುವ ಮುನ್ನ ಸಾಮಾನ್ಯವಾಗಿ ಗ್ರಾಹಕರು ಇಂತಿಷ್ಟು ಮುಂಗಡ ಹಣ ಪಾವತಿ ಮಾಡಿ ಕಾಯ್ದಿರಿಸಿದ ನಂತರ ವಿತರಣೆಗೆ ಕಾಯಲೇಬೇಕಾಗುತ್ತದೆ. ವಿತರಣೆಯ ಅವಧಿಯು ವಿವಿಧ ವಾಹನ ಮಾದರಿಗಳಿಗೆ ಅನುಗುಣವಾಗಿ ನಿರ್ಧಾರವಾಗಿದ್ದು, ಕೆಲವೇ ವಾಹನಗಳಿಗೆ ಬುಕ್ಕಿಂಗ್ ನಂತರ ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾಗಲಿದ್ದರೆ ಇನ್ನು ಕೆಲವೇ ವಾಹನಗಳಿಗೆ ವರ್ಷಾನುಗಟ್ಟಲೆ ಕಾಯಬೇಕಾಗುತ್ತದೆ.

ಹೌದು, ಗ್ರಾಹಕರು ಹೊಸ ವಾಹನಗಳ ಖರೀದಿಗಾಗಿ ಬುಕ್ಕಿಂಗ್ ಮಾಡಿದ ನಂತರ ಕೆಲವು ವಾಹನಗಳ ವಿತರಣೆಗೆ ಅತಿ ಹೆಚ್ಚು ಕಾಯಲೇಬೇಕಾದ ಅನಿವಾರ್ಯತೆಗಳಿದ್ದು, ಅತಿ ಹೆಚ್ಚು ಕಾಯುವಿಕೆ ಪಟ್ಟಿಯಲ್ಲಿ ಹಲವಾರು ಜನಪ್ರಿಯ ಕಾರುಗಳು ಮೊದಲ ಪಟ್ಟಿಯಲ್ಲಿವೆ. ಕಾಯುವಿಕೆ ಅವಧಿಯು ಉತ್ಪಾದನಾ ಪ್ರಮಾಣ ಅವಲಂಭಿಸಿದ್ದು, ಅತಿ ಹೆಚ್ಚು ಕಾಯಲೇಬೇಕಾದ ಕೆಲವು ಕಾರುಗಳ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

01. ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ
ಇ, ಇಎಕ್ಸ್, ಎಸ್, ಎಸ್‌ಎಕ್ಸ್ ಮತ್ತು ಎಸ್‌ಎಕ್ಸ್ (ಒ) ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ನ್ಯೂ ಜನರೇಷನ್ ಹ್ಯುಂಡೈ ಕ್ರೆಟಾ ಕಾರು ಮಾದರಿಯಲ್ಲಿ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯ ಖರೀದಿಗೆ ಹೆಚ್ಚಿನ ಬೇಡಿಕೆಯಿದ್ದು, ಟಾಪ್ ಎಂಡ್ ಮಾದರಿಗಳು ಬುಕ್ಕಿಂಗ್ ಮಾಡಿದ ನಂತರ ಅತಿ ಕಡಿಮೆ ಅವಧಿಯಲ್ಲಿ ವಿತರಣೆಯಾದಲ್ಲಿ ಬೆಸ್ ವೆರಿಯೆಂಟ್‌ಗಾಗಿ ಕನಿಷ್ಠ ಹತ್ತು ತಿಂಗಳಿನಿಂದ ಒಂದು ವರ್ಷಗಳ ಕಾಲ ಕಾಯಬೇಕಿದೆ.

ಕ್ರೆಟಾ ಕಂಪ್ಯಾಕ್ಟ್ ಎಸ್‌ಯವಿ ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.99 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.17.53 ಲಕ್ಷ ಬೆಲೆ ಹೊಂದಿದ್ದು, ಆರಂಭಿಕ ಇ ಡೀಸೆಲ್ ಮ್ಯಾನುವಲ್ ಆವೃತ್ತಿಯು ರೂ.10.31 ಲಕ್ಷ ಬೆಲೆಯೊಂದಿಗೆ ಹೆಚ್ಚಿನ ಬೇಡಿಕೆ ಹೊಂದಿದ್ದರೂ ಲಾಭಾಂಶದ ದೃಷ್ಠಿಯಿಂದ ಕಂಪನಿಯು ಹೈ ಎಂಡ್ ಮಾದರಿಗಳನ್ನು ಅತಿ ಕಡಿಮೆ ಅವಧಿಯಲ್ಲಿ ವಿತರಿಸುತ್ತವೆ.

02. ನಿಸ್ಸಾನ್ ಮ್ಯಾಗ್ನೈಟ್
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಗೊಂಡ ಎರಡು ತಿಂಗಳ ಅವಧಿಯಲ್ಲಿ ಸುಮಾರು 40 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಉತ್ಪಾದನೆಯ ಆಧಾರದ ಮೇಲೆ ಮತ್ತು ವೆರಿಯೆಂಟ್‌ಗಳಿಗೆ ಅನುಗುಣವಾಗಿ ಈ ಕಾರನ್ನು ಖರೀದಿಸಲು ಬುಕ್ಕಿಂಗ್ ನಂತರ ಕನಿಷ್ಠ 4 ತಿಂಗಳಿನಿಂದ 10 ತಿಂಗಳು ಕಾಯಬೇಕಿದೆ.

ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಕಾರು ಮಾದರಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ತನ್ನತ್ತ ಸೆಳೆಯುತ್ತಿದೆ.

03. ನ್ಯೂ ಜನರೇಷನ್ ಮಹೀಂದ್ರಾ ಥಾರ್
ಮಹೀಂದ್ರಾ ಕಂಪನಿಯು ಕಳೆದ ಅಕ್ಟೋಬರ್ ಮೊದಲ ವಾರದಲ್ಲಿ ತನ್ನ ಬಹುನೀರಿಕ್ಷಿತ ಥಾರ್ ಎಸ್‌ಯುವಿ ಕಾರು ಮಾದರಿಯನ್ನು ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಿತ್ತು. ಹೊಸ ಕಾರು ಇದುವರೆಗೆ ಬರೋಬ್ಬರಿ ಸುಮಾರು 39 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ದಿನಂಪ್ರತಿ 200ರಿಂದ 250 ಗ್ರಾಹಕರು ಸರಾಸರಿಯಾಗಿ ಹೊಸ ಕಾರಿಗೆ ಬುಕ್ಕಿಂಗ್ ದಾಖಲಿಸುತ್ತಿದ್ದಾರೆ.

ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಹೊಸ ಥಾರ್ ಕಾರಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿರುವ ಮಹೀಂದ್ರಾ ಕಂಪನಿಯು ಕಳೆದ ಡಿಸೆಂಬರ್ ಅವಧಿಯಲ್ಲೇ ಸುಮಾರು 7 ಸಾವಿರ ಯುನಿಟ್ ಕಾರುಗಳಿಗೆ ಬುಕ್ಕಿಂಗ್ ಪಡೆದುಕೊಂಡಿತ್ತು. ಬೇಡಿಕೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಸಿಕ್ ಕಾರು ಘಟಕದಲ್ಲಿ ಉತ್ಪಾದನಾ ಪ್ರಮಾಣವನ್ನು ಸಹ ಹೆಚ್ಚಳ ಮಾಡಲಾಗಿದ್ದರೂ ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಸದ್ಯ ಕನಿಷ್ಠ 5 ತಿಂಗಳಿನಿಂದ 8 ತಿಂಗಳ ತನಕ ಕಾಯಲೇಬೇಕಿದೆ.

04. ಕಿಯಾ ಸೊನೆಟ್
ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಕಿಯಾ ಸೊನೆಟ್ ಆವೃತ್ತಿಯು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಬಿಡುಗಡೆಯಾದ ಕೆಲ ತಿಂಗಳ ಅವಧಿಯಲ್ಲೇ ಬರೋಬ್ಬರಿ 90 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ.

ಬುಕ್ಕಿಂಗ್ ಆಧಾರದ ಮೇಲೆ ಸೊನೆಟ್ ಕಾರಿನ ವಿತರಣೆಯನ್ನು ತೀವ್ರಗೊಳಿಸಿರುವ ಕಿಯಾ ಮೋಟಾರ್ಸ್ ಕಂಪನಿಯು ಇದುವರೆಗೆ ಸುಮಾರು 40 ಸಾವಿರ ಯುನಿಟ್ ವಿತರಣೆ ಮಾಡಿದ್ದು, ಇನ್ನುಳಿದ ಗ್ರಾಹಕರಿಗೂ ಶೀಘ್ರದಲ್ಲೇ ಹೊಸ ಕಾರು ವಿತರಣೆ ಮಾಡುವ ಸಿದ್ದತೆಯಲ್ಲಿದೆ. ಉತ್ಪಾದನೆಯ ಆಧಾರದ ಮೇಲೆ ವೆರಿಯೆಂಟ್ ಮತ್ತು ಪ್ರದೇಶಗಳಿಗೆ ಅನುಗುಣವಾಗಿ ಹೊಸ ಕಾರಿನ ವಿತರಣೆಯ ಅವಧಿ ನಿರ್ಧಾರವಾಗಲಿದ್ದು, ಸೊನೆಟ್ ಕಾರಿಗೆ ಇಂದು ಬುಕ್ಕಿಂಗ್ ಮಾಡಿದ್ದಲ್ಲಿ ಕನಿಷ್ಠ ಒಂದೂವರೆ ತಿಂಗಳಿನಿಂದ ಗರಿಷ್ಠ ನಾಲ್ಕು ತಿಂಗಳು ಕಾಯಲೇಬೇಕಿದೆ.

05. ಕಿಯಾ ಸೆಲ್ಟೊಸ್ ಎಸ್‌ಯುವಿ
2019ರ ಅಗಸ್ಟ್ ಅವಧಿಯಲ್ಲಿ ಮೊದಲ ಬಾರಿಗೆ ಬಿಡುಗಡೆಗೊಂಡಿದ್ದ ಕಿಯಾ ಸೆಲ್ಟೊಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಪ್ರೀಮಿಯಂ ಸೌಲಭ್ಯಗಳು ಮತ್ತು ಆಕರ್ಷಕ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಇದುವರೆಗೆ ಸುಮಾರು 1.50 ಲಕ್ಷ ಯುನಿಟ್ ಮಾರಾಟಗೊಂಡಿದೆ. ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಪ್ರಮಾಣವನ್ನು ತಿಂಗಳಿನಿಂದ ತಿಂಗಳಿಗೆ ಹೆಚ್ಚುತ್ತಲೇ ಇದ್ದು, ಡೀಸೆಲ್ ಟಾಪ್ ಎಂಡ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದೆ.

ಸೆಲ್ಟೊಸ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬುಕ್ಕಿಂಗ್ ನಂತರ ಕನಿಷ್ಠ 1 ತಿಂಗಳಿನಿಂದ ಗರಿಷ್ಠ 4 ತಿಂಗಳು ಕಾಯಲೇಬೇಕಿದ್ದು, ಸೆಲ್ಟೊಸ್ ಜಿಟಿಎಕ್ಸ್ ಮಾದರಿಗಳು ಬುಕ್ಕಿಂಗ್ ನಂತರ ವೇಗವಾಗಿ ವಿತರಣೆಯಾಗಲಿದ್ದು, ಹೆಚ್‌ಟಿಎಕ್ಸ್ ಮಾದರಿಗಳಿಗೆ ಹೆಚ್ಚು ಕಾಯಬೇಕಾಗುತ್ತದೆ.

06. ಮಾರುತಿ ಸುಜುಕಿ ಎರ್ಟಿಗಾ
ಎಂಪಿವಿ ಕಾರುಗಳ ಮಾರಾಟದಲ್ಲಿ ಸದ್ಯ ಮುಂಚೂಣಿಯಲ್ಲಿರು ಮಾರುತಿ ಸುಜುಕಿ ನಿರ್ಮಾಣದ ಎರ್ಟಿಗಾ ಕಾರು ಮಾದರಿಯು ಟಾಪ್ 10 ಕಾರು ಮಾರಾಟದಲ್ಲಿ ಸ್ಥಾನಪಡೆದುಕೊಂಡಿದ್ದು, ಪ್ರತಿ ತಿಂಗಳು 8 ಸಾವಿರದಿಂದ 10 ಸಾವಿರ ಯುನಿಟ್ ಮಾರಾಟ ಹೊಂದಿದೆ. ಈ ಕಾರು ಖರೀದಿಸಲು ಗ್ರಾಹಕರು ಕನಿಷ್ಠ 6 ವಾರಗಳಿಂದ 8 ವಾರಗಳ ಕಾಲ ಕಾಯಬೇಕಾಗುತ್ತದೆ.

07. ಟೊಯೊಟಾ ಫಾರ್ಚೂನರ್
2021ರ ಫಾರ್ಚೂನರ್ ಹೊಸ ಕಾರು ಬಿಡುಗಡೆಯಾದ ಮೊದಲ ತಿಂಗಳ ಅವಧಿಯಲ್ಲೇ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಹೊಸ ಕಾರು ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡಿದೆ. ವಾರ್ಷಿಕವಾಗಿ 1 ಸಾವಿರದಿಂದ 1,200 ಯುನಿಟ್ ಮಾರಾಟ ಶ್ರೇಣಿ ಹೊಂದಿರುವ ಫಾರ್ಚೂನರ್ ಕಾರು ಮಾದರಿಯು 2021ರ ಆವೃತ್ತಿಯೊಂದಿಗೆ ಬರೋಬ್ಬರಿ 5 ಸಾವಿರ ಬುಕ್ಕಿಂಗ್ ಪಡೆದುಕೊಂಡಿದ್ದು, ಈ ಕಾರು ಖರೀದಿಸಲು ಕನಿಷ್ಠ ನಾಲ್ಕು ವಾರಗಳಿಂದ 20 ವಾರಗಳ ಕಾಲ ಕಾಯಬೇಕಿದೆ.