ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಗುಜರಾತ್ ಸರ್ಕಾರವು ತನ್ನ ಹೊಸ ಎಲೆಕ್ಟ್ರಿಕ್ ವೆಹಿಕಲ್ ನೀತಿಯನ್ನು ಮಂಗಳವಾರ ಪ್ರಕಟಿಸಿದೆ. ಈ ನೀತಿಯು ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ಪ್ರಕ್ರಿಯೆಯನ್ನು ವೇಗಗೊಳಿಸಲಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಹೊಸ ಇವಿ ನೀತಿಯಡಿ ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಎರಡು ಲಕ್ಷ ಎಲೆಕ್ಟ್ರಿಕ್ ವಾಹನಗಳಿಗೆ ರೂ.870 ಕೋಟಿ ಸಹಾಯಧನ ನೀಡಲಾಗುವುದು.ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಪ್ರತಿ ಕಿವ್ಯಾ ಆಧಾರದ ಮೇಲೆ ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಸಹಾಯಧನ ನೀಡುತ್ತದೆ ಎಂದು ಹೇಳಿದ್ದಾರೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಹೊಸ ಇವಿ ನೀತಿಯಡಿಯಲ್ಲಿ, ಖರೀದಿದಾರರಿಗೆ ಪ್ರೋತ್ಸಾಹ ನೀಡುವ ಮೂಲಕ ಬ್ಯಾಟರಿ ಚಾಲಿತ ವಾಹನಗಳ ಬೇಡಿಕೆಯನ್ನು ಹೆಚ್ಚಿಸುವ ಉದ್ದೇಶವನ್ನು ಗುಜರಾತ್ ರಾಜ್ಯ ಸರ್ಕಾರವು ಹೊಂದಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಈ ನೀತಿಯು ಇವಿ ಚಾರ್ಜಿಂಗ್ ಮೂಲಸೌಕರ್ಯ ಅಭಿವರ್ಧಕರಿಗೆ ಬಂಡವಾಳ ಪ್ರೋತ್ಸಾಹಕವಾಗಿದೆ. ಇವಿ ನೀತಿಯಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ರೂ.20,000ವರೆಗೆ ಸಬ್ಸಿಡಿ ನೀಡಿದರೆ, ಎಲೆಕ್ಟ್ರಿಕ್ ಕಾರುಗಳಿಗೆ ರೂ.1.50 ಲಕ್ಷಗಳವರೆಗೆ ಸಹಾಯಧನ ನೀಡಲಾಗುವುದು.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಈ ಸಬ್ಸಿಡಿಯು ಕೇಂದ್ರ ಸರ್ಕಾರ ಒದಗಿಸುವ ಫೇಮ್ 2 ಸಬ್ಸಿಡಿಗೆ ಹೆಚ್ಚುವರಿಯಾಗಿ ಲಭ್ಯವಿರಲಿದೆ. ಈ ನೀತಿಯಡಿಯಲ್ಲಿ ರಾಜ್ಯದಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಕಂಪನಿಗಳಿಗೆ ಬಂಡವಾಳ ಹೂಡಿಕೆಯಲ್ಲಿ 25%ನಷ್ಟು ಸಬ್ಸಿಡಿ ನೀಡಲಾಗುವುದು.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಈ ಮೊತ್ತವು ಗರಿಷ್ಠ ರೂ.10 ಲಕ್ಷಗಳವರೆಗೆ ಇರಲಿದೆ. ಈ ಸಬ್ಸಿಡಿ ಪಡೆಯಲು ಕಂಪನಿಯು ಕನಿಷ್ಠ 250 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಬೇಕಾಗುತ್ತದೆ. ಹೊಸ ಇವಿ ನೀತಿಯು ರಾಜ್ಯದ ರಸ್ತೆಗಳಲ್ಲಿ ಕನಿಷ್ಠ 1.25 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನ, 75,000 ಇ-ರಿಕ್ಷಾ ಹಾಗೂ 25,000 ಎಲೆಕ್ಟ್ರಿಕ್ ಕಾರುಗಳನ್ನು ರಸ್ತೆಗಿಳಿಸಲು ನೆರವಾಗುತ್ತದೆ ಎಂಬ ಆಶಾ ಭಾವನೆಯನ್ನು ಗುಜರಾತ್ ಸರ್ಕಾರವು ಹೊಂದಿದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಗುಜರಾತ್ ಸರ್ಕಾರವು ಘೋಷಿಸಿರುವ ಹೊಸ ಇವಿ ನೀತಿಯಲ್ಲಿರುವ ಕೆಲವು ಗಮನಾರ್ಹ ಅಂಶಗಳು ಹೀಗಿವೆ:

ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು.

ಗುಜರಾತ್ ಅನ್ನು ಇ-ವಾಹನ ಹಾಗೂ ವಿವಿಧ ಸಂಬಂಧಿತ ಸಾಮಗ್ರಿಗಳ ಕೇಂದ್ರವಾಗಿಸುವುದು.

ವಾಯುಮಾಲಿನ್ಯ ಸಮಸ್ಯೆಯನ್ನು ಪರಿಹರಿಸುವುದು.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ರಾಜ್ಯಾದ್ಯಂತ 250 ಹೊಸ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಗುಜರಾತ್'ನಲ್ಲಿ ಈಗಾಗಲೇ 278ಕ್ಕೂ ಹೆಚ್ಚು ಚಾರ್ಜಿಂಗ್ ಕೇಂದ್ರಗಳು ಅಸ್ತಿತ್ವದಲ್ಲಿವೆ. ವಸತಿ ಹಾಗೂ ವಾಣಿಜ್ಯ ಮೂಲಸೌಕರ್ಯಗಳಲ್ಲಿಯೂ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಾಗುವುದು.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಪೆಟ್ರೋಲ್ ಬಂಕ್'ಗಳಲ್ಲಿ ಇವಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ತೆರೆಯಲಾಗುವುದು. ಎಲೆಕ್ಟ್ರಿಕ್ ವಾಹನ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಹಾಗೂ ಹೂಡಿಕೆದಾರರಿಗೆ ಪ್ರೋತ್ಸಾಹ ನೀಡಲಾಗುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಗುಜರಾತ್ ಆರ್‌ಟಿಒದಲ್ಲಿ ನೋಂದಣಿಯಾಗುವ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಎಲೆಕ್ಟ್ರಿಕ್ ವಾಹನಗಳಿಂದ ಗುಜರಾತ್'ನಲ್ಲಿ ಕನಿಷ್ಠ ಆರು ಟನ್ ಕಾರ್ಬನ್ ಡೈ ಆಕ್ಸೈಡ್ ಹೊರಸೂಸುವಿಕೆ ಕಡಿಮೆಯಾಗುತ್ತದೆ.

ಹೊಸ ಎಲೆಕ್ಟ್ರಿಕ್ ವಾಹನ ನೀತಿ ಘೋಷಿಸಿದ ಗುಜರಾತ್ ಸರ್ಕಾರ

ಸಬ್ಸಿಡಿಯನ್ನು ನೇರವಾಗಿ ಡಿಬಿಟಿ ಮೂಲಕ ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಜೂನ್ 5ರಂದು ನಡೆದ ವಿಶ್ವ ಪರಿಸರ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿರವರು ಕೆವಾಡಿಯಾವನ್ನು ಎಲೆಕ್ಟ್ರಿಕ್ ವೆಹಿಕಲ್ ಸಿಟಿಯಾಗಿ ಅಭಿವೃದ್ಧಿಪಡಿಸುವುದಾಗಿ ಘೋಷಿಸಿದ್ದರು.

Most Read Articles

Kannada
English summary
New EV policy in Gujarat to give subsidy up to Rs.1.50 lakhs. Read in Kannada.
Story first published: Tuesday, June 22, 2021, 20:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X