ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಫೋರ್ಸ್ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಬಿಎಸ್-6 ಗೂರ್ಖಾ ಎಸ್‌ಯುವಿ ಕಾರು ಮಾದರಿಯನ್ನು ಭಾರತದಲ್ಲಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಆಫ್ ರೋಡ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲು ಸಿದ್ದವಾಗುತ್ತಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಂಜಿನ್ ಪ್ರೇರಿತ ಬಿಎಸ್ 6 ಗೂರ್ಖಾ ಕಾರು ಮಾದರಿಯನ್ನು ಕಳೆದ ವರ್ಷವೇ ಬಿಡುಗಡೆಗೊಳಿಸಬೇಕಿದ್ದ ಫೋರ್ಸ್ ಮೋಟಾರ್ಸ್ ಕಂಪನಿಯು ಕೋವಿಡ್ ಪರಿಸ್ಥಿತಿಯಿಂದಾದ ಹೊಸ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಾ ಬಂದಿದೆ. ಸದ್ಯದ ಪರಿಸ್ಥಿತಿಯಲ್ಲೂ ಹೊಸ ಕಾರು ಬಿಡುಗಡೆಗೆ ಪೂರಕವಾದ ಮಾರುಕಟ್ಟೆ ಇಲ್ಲವಾದರೂ ಹೊಸ ನೀರಿಕ್ಷೆಯೊಂದಿಗೆ ಬಿಎಸ್-6 ಮಾದರಿಯನ್ನು ರಸ್ತೆಗಿಳಿಸುತ್ತಿದ್ದು, ಹೊಸ ಕಾರು ಜುಲೈ ಕೊನೆಯಲ್ಲಿ ಇಲ್ಲವೇ ಅಗಸ್ಟ್ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ನವೀಕೃತ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಕಡ್ಡಾಯವಾಗಿ ಜಾರಿಗೆ ಬಂದಿರುವ ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಹೊರ ಮತ್ತು ಒಳ ವಿನ್ಯಾಸದಲ್ಲಿ ಸಾಕಷ್ಟು ಸುಧಾರಣೆಗೊಂಡಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಬಿಎಸ್-6 ಎಮಿಷನ್ ನಿಯಮದೊಂದಿಗೆ ಉನ್ನತೀಕರಣಗೊಂಡಿರುವ ಫೋರ್ಸ್ ಗೂರ್ಖಾ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಹೊಂದಿರಲಿದ್ದು, ಆಫ್ ರೋಡ್ ಕೌಶಲ್ಯತೆಗೆ ಪೂರಕವಾದ ತಾಂತ್ರಿಕ ಅಂಶಗಳನ್ನು ಹೊಂದಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಮಿಷನ್ ನಿಯಮದಿಂದಾಗಿ ಹೊಸ ಕಾರಿನ ಎಂಜಿನ್‌ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್ ರೋಡ್ ಪ್ರಿಯರನ್ನು ಸೆಳೆಯಲಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹೊಸ ಕಾರಿನ ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಗಮನಸೆಳೆಯಲಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇದರ ಜೊತೆಗೆ ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಕಾರಿನ ಪರ್ಫಾಮೆನ್ಸ್‌ಗೆ ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಉತ್ತಮ ಹೊರವಿನ್ಯಾಸದೊಂದಿಗೆ ಪ್ರೀಮಿಯಂ ಮಾದರಿಯಾಗಿ ಮಿಂಚಲಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಮತ್ತು ವಿವಿಧ ಬಣ್ಣದ ಆಯ್ಕೆಗಳನ್ನು ನೀಡಲಾಗಿದೆ.

ಬಿಎಸ್-6 ಫೋರ್ಸ್ ಗೂರ್ಖಾ ಆಫ್ ರೋಡ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ.

More from DriveSpark

Article Published On: Friday, June 11, 2021, 8:45 [IST]
English summary
New Force Gurkha India Launch Timeline Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+