ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಫೋರ್ಸ್ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಬಿಎಸ್-6 ಎಂಜಿನ್ ಪ್ರೇರಿತ ಗೂರ್ಖಾ ಆಫ್-ರೋಡ್ ಎಸ್‌ಯುವಿ ಕಾರು ಆವೃತ್ತಿಯನ್ನು ಬಿಡುಗಡೆ ಮಾಡುವ ಅಂತಿಮ ಸಿದ್ದತೆಯಲ್ಲಿದ್ದು, ಹೊಸ ಆಫ್ ರೋಡ್ ಕಾರು ಮಾದರಿಯು ವಿವಿಧ ಬಣ್ಣಗಳ ಆಯ್ಕೆಯೊಂದಿಗೆ ಪ್ರೀಮಿಯಂ ಫೀಚರ್ಸ್ ಹೊಂದಿರಲಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ದೆಹಲಿ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡಿದ್ದ ನ್ಯೂ ಜನರೇಷನ್ ಫೋರ್ಸ್ ಗೂರ್ಖಾ ಹೊಸ ಆವೃತ್ತಿಯು ಕಳೆದ ವರ್ಷದ ಜೂನ್ ಅಥವಾ ಜುಲೈ ವೇಳೆಗೆ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್‌ನಿಂದಾಗಿ ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದ ಪರಿಣಾಮ ಬಿಡುಗಡೆ ಪ್ರಕ್ರಿಯೆ ವಿಳಂಬವಾಗಿದ್ದು, ಇದೀಗ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಮೂಲಕ ಉತ್ಪಾದನಾ ಪ್ರಕ್ರಿಯೆಗೆ ಚಾಲನೆ ನೀಡುತ್ತಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

2021ರ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಹೊಸ ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ನ್ಯೂ ಜನರೇಷನ್ ಗೂರ್ಖಾ ಎಸ್‌ಯುವಿಯನ್ನು ಫೋರ್ಸ್ ಮೋಟಾರ್ಸ್ ಕಂಪನಿಯು ಬಿಎಸ್-6 ಎಮಿಷನ್ ನಿಯಮದೊಂದಿಗೆ ಉನ್ನತೀಕರಿಸಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಹೊಸ ಎಮಿಷನ್ ನಿಯಮದಿಂದಾಗಿ ಹೊಸ ಎಂಜಿನ್‌ ಆಯ್ಕೆಯಲ್ಲಿ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳು ಮತ್ತು ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದ್ದು, ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸೆಗ್ಮೆಂಟ್ ಫಸ್ಟ್ ಫೀಚರ್ಸ್‌ನೊಂದಿಗೆ ಆಫ್ ರೋಡ್ ಕೌಶಲ್ಯದಲ್ಲಿ ಗಮನಸೆಳೆಯಲಿದೆ.

ಬಿಎಸ್-6 ಗೂರ್ಖಾ ಕಾರು ಮಾದರಿಯು ಆಫ್ ರೋಡ್ ಚಾಲನೆಗೆ ಪೂರಕವಾದ ಹಲವು ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಬೆಲೆ ವಿಚಾರದಲ್ಲೂ ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಆಕರ್ಷಕವಾಗಿರಲಿದೆ. ಹೊಸ ಎಮಿಷನ್ ನಿಯಮದಿಂದಾಗಿ ಗೂರ್ಖಾ ಹೊಸ ಕಾರು ಮಾದರಿಯ ಎಂಜಿನ್‌ ಮಾತ್ರವಲ್ಲದೇ ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕ ಸುರಕ್ಷತೆಯಲ್ಲೂ ಸಾಕಷ್ಟು ಬದಲಾವಣೆ ಹೊಂದಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಹಾಗೆಯೇ ಹೊರ ಮತ್ತು ಒಳಭಾಗದ ತಾಂತ್ರಿಕ ಅಂಶಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ವಿಶೇಷವಾಗಿ ವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಬಂಪರ್ ಮೇಲೆ ನೀಡಲಾಗಿರುವ ಹೆಡ್‌ಲ್ಯಾಂಪ್ ಕ್ಲಸ್ಟರ್ ಗಮನಸೆಳೆಯಲಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಇದರ ಜೊತೆಗೆ ಬಲಿಷ್ಠವಾದ ಬಾಡಿ ಕ್ಲ್ಯಾಡಿಂಗ್ ಸೌಲಭ್ಯವು ಆಫ್ ರೋಡ್ ಕಾರಿನ ಪರ್ಫಾಮೆನ್ಸ್‌ಗೆ ಸಾಕಷ್ಟು ಸಹಕಾರಿಯಾಗಿದ್ದು, ಹೊಸ ಕಾರು ಹಳೆಯ ಮಾದರಿಗಿಂತಲೂ ಉತ್ತಮ ಹೊರವಿನ್ಯಾಸದೊಂದಿಗೆ ಪ್ರೀಮಿಯಂ ಮಾದರಿಯಾಗಿ ಮಿಂಚಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಹೊಸ ಕಾರಿನಲ್ಲಿ ಸ್ಪೋರ್ಟಿ ಸ್ಟೈಲ್ ಹೆಚ್ಚಿಸುವುದಕ್ಕಾಗಿ 16-ಇಂಚಿನ ಅಲಾಯ್ ವೀಲ್ಹ್, 245/70 ವಿನ್ಯಾಸದ ಟೈರ್ ನೀಡಲಾಗಿದ್ದು, ಒಳಭಾಗದ ವಿನ್ಯಾಸದಲ್ಲೂ ಭಾರೀ ಬದಲಾವಣೆಯೊಂದಿಗೆ ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ.

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಡ್ಯಾಶ್‌ಬೋರ್ಡ್‌ನಲ್ಲಿ ಈ ಬಾರಿ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಹೊಸದಾದ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಮಲ್ಟಿ ಇನ್‌ಫಾರ್ಮೆಷನ್ ಡಿಸ್‌ಪ್ಲೇ, ಪ್ರತ್ಯೇಕವಾದ ಆಸನ ಸೌಲಭ್ಯಗಳು, ಹೊಸದಾದ ಎಸಿ ವೆಂಟ್ಸ್ ಮತ್ತು ವಿವಿಧ ಬಣ್ಣದ ಆಯ್ಕೆಗಳನ್ನು ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಫೋರ್ಸ್ ಗೂರ್ಖಾ ಎಸ್‌ಯುವಿ

ಇದರೊಂದಿಗೆ ಹೊಸ ಆಫ್ ರೋಡ್ ಕಾರಿನಲ್ಲಿ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಚಾರ್ಸಿ ಬದಲಾವಣೆ ಸೇರಿದಂತೆ ಹಲವು ಸ್ಟ್ಯಾಂಡರ್ಡ್ ಸೆಫ್ಟಿ ಫೀಚರ್ಸ್‌ಗಳನ್ನು ಹೊಸ ಗೂರ್ಖಾದಲ್ಲಿ ನೀಡಲಾಗಿದೆ. ಹೊಸ ಕಾರು ಈ ವರ್ಷದ ನವೆಂಬರ್ ಅಂತ್ಯದೊಳಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಬೆಲೆ ಕೂಡಾ ಬಿಎಸ್-4 ಆವೃತ್ತಿಗಿಂತಲೂ ತುಸು ದುಬಾರಿಯಾಗಲಿದೆ.

Most Read Articles

Kannada
English summary
2021 Force Gurkha Spotted Testing Interior Accessories Revealed. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X