Just In
Don't Miss!
- Lifestyle
ರಾತ್ರಿ ವೇಳೆ ಬೇಳೆಕಾಳು ತಿನ್ನಬೇಕೋ ಬೇಡವೋ, ಆಯುರ್ವೇದ ಏನು ಹೇಳುತ್ತದೆ?
- Finance
ಮಾರ್ಚ್ 04ರ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ
- Sports
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್, Live ಸ್ಕೋರ್, ಪ್ಲೇಯಿಂಗ್ XI
- News
ಮಗಳ ಶಿರಚ್ಛೇದ ಮಾಡಿ, ರುಂಡದೊಂದಿಗೆ ಪೊಲೀಸರಿಗೆ ಶರಣಾದ ತಂದೆ
- Movies
ಮೊದಲ ವಾರವೇ ಹೊರಹೋಗ್ತಾರಾ ಶುಭಾ ಪೂಂಜಾ: ನಾಮಿನೇಟ್ ಆಗಿದ್ದು ಹೇಗೆ?
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿಯ ಟೀಸರ್ ಬಿಡುಗಡೆ
ಹೋಂಡಾ ಇಂಡಿಯಾ ಕಂಪನಿಯು ತನ್ನ ಸಿವಿಕ್ ಮತ್ತು ಸಿಅರ್-ವಿ ಕಾರುಗಳನ್ನು ಭಾರತದಲ್ಲಿ ಸ್ಥಗಿತಗೊಳಿಸಲಾಗಿದೆ. ಹೋಂಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಹೊಸ ಮಾರುಕಟ್ಟೆ ತಂತ್ರವನ್ನು ರೂಪಿಸುತ್ತಿದೆ.

ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಪೈಪೋಟಿಯಿಂದ ಕೂಡಿರುವುದು ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗವಾಗಿದೆ. ಇದೇ ವಿಭಾಗಕ್ಕೆ ಹೊಸ ಹೆಚ್‌ಆರ್-ವಿ ಮಾದರಿಯನ್ನು ಬಿಡುಗಡೆಗೊಳಿಸಲಿದೆ ಎಂದು ವರದಿಗಳಾಗಿದೆ. ಭಾರತದಲ್ಲಿ ಕಾಂಪ್ಯಾಕ್ಟ್ ಎಸ್‍ಯುವಿ ವಿಭಾಗ ಜನಪ್ರಿಯ ಕಾರು ತಯಾರಕ ಕಂಪನಿಗಳು ಹೆಚ್ಚಿನ ಪ್ರಾಮುಖ್ಯಯತೆಯನ್ನು ನೀಡುತ್ತಿದೆ. ಇನ್ನು ಹೋಂಡಾ ಕಂಪನಿಯು ಮೂರನೇ ತಲೆಮಾರಿನ ಹೆಚ್‌ಆರ್-ವಿ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.

ಹೊಸ ಹೆಚ್‌ಆರ್-ವಿ ಎಸ್‍ಯುವಿಯನ್ನು ಜಾಗತಿಕವಾಗಿ ಅನಾವರಣಗೊಳಿಸುವ ಮೊದಲು ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಜಪಾನ್ ಸೇರಿದಂತೆ ಕೆಲವು ಮಾರುಕಟ್ಟೆಗಳಲ್ಲಿ ಹೆಚ್‌ಆರ್-ವಿ ಎಸ್‍ಯುವಿಯನ್ನು ವೆಜೆಲ್ ಎಂದೂ ಕರೆಯಲಾಗುತ್ತದೆ. ಈ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿಯು ಕೂಡ ಬಿಡುಗಡೆಯಾಗಲಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಎರಡನೇ ತಲೆಮಾರಿನ ಹೆಚ್‌ಆರ್-ವಿ ಸುಮಾರು ಏಳು ವರ್ಷಗಳಿಗಿಂತಲೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಈ ಎಸ್‍ಯುವಿಯು ಇದೀಗ ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡಲು ಗಣನೀಯ ನವೀಕರಣವನ್ನು ಪಡೆಯುತ್ತದೆ.

ಹೊಸ ಹೆಚ್‌ಆರ್-ವಿ ಎಸ್‍ಯುವಿಯು ಮುಂಭಾಗದ ಗ್ರಿಲ್ ಮತ್ತು ಹೆಡ್‌ಲ್ಯಾಂಪ್‌ಗಳನ್ನು ಹೊಂದಿದ್ದು, ಇದು ನಯವಾದ ಮತ್ತು ಎಲ್ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಇನ್ನು ಹೊಸ ಎಲ್ಇಡಿ ಪಾಗ್ ಲ್ಯಾಂಪ್ ಮತ್ತು ನವೀಕರಿಸಿದ ಬಂಪರ್ ಹೊಂದಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಜೊತೆಗೆ ಹೊಸ ಮೂರು-ಸ್ಪೋಕ್ ಸ್ಟೀಯರಿಂಗ್ ವ್ಹೀಲ್ ಹೊಂದಿದ್ದು, ಇದು ಸಾಕಷ್ಟು ಸ್ಪೋರ್ಟಿ ಆಗಿ ಕಾಣುತ್ತದೆ. ಇನ್ನು ಈ ಕಾರು ‘ಪ್ಲ್ಯಾಟಿನಮ್ ವೈಟ್ ಪರ್ಲ್' ಎಂಬ ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡಿದೆ.

ಈ ಕಾರಿನ ಸ್ಟೀರಿಂಗ್ ವೀಲ್‌ನ ಹಿಂದೆ ಪ್ಯಾಡಲ್ ಶಿಫ್ಟರ್‌ಗಳನ್ನು ನೀಡುತ್ತದೆ. ಇದು ಇಕಾನ್ ಮೋಡ್ (ಇಂಧನ ದಕ್ಷತೆಯನ್ನು ಸುಧಾರಿಸಲು), ಪುಶ್-ಬಟನ್ ಸ್ಟಾರ್ಟ್, ಕ್ರೂಸ್ ಕಂಟ್ರೋಲ್, ಹಿಲ್-ಹೋಲ್ಡ್ ಅಸಿಸ್ಟ್, ಹೋಂಡಾ ಲೇನ್‌ವಾಚ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು ಆರು ಏರ್‌ಬ್ಯಾಗ್‌ಗಳನ್ನು ಸಹ ಪಡೆಯುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಈ ಹೊಸ ಹೆಚ್‌ಆರ್-ವಿ ಮಾದರಿ 4,400 ಎಂಎಂ ಉದ್ದ, 1,790 ಎಂಎಂ ಅಗಲ ಮತ್ತು 1,590 ಎಂಎಂ ಎತ್ತರವನ್ನು ಹೊಂದಿರಲಿದೆ. ಇನ್ನು 2,660 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿರಲಿದೆ. ಈ ಹೊಸ ಹೆಚ್‌ಆರ್-ವಿ ಮಾದರಿಯು ಸುಮಾರು 4.4 ಮೀಟರ್ ಉದ್ದವನ್ನು ಹೊಂದಿರಲಿದೆ.

ಈ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿಯಲ್ಲಿ .5-ಲೀಟರ್ ನಾಲ್ಕು-ಸಿಲಿಂಡರ್ ಐ-ವಿಟಿಇಸಿ ಎಂಜಿನ್ ಅನ್ನು ಹೊಂದಿರುತದೆ, ಈ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.