ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ಜನಪ್ರಿಯ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ನ್ಯೂ ಜನರೇಷನ್ ಎಸ್‌ಯುವಿನ್ನು ಅಭಿವೃದ್ದಿ ಪಡಿಸುತ್ತಿದೆ. ಈ ನ್ಯೂ ಜನರೇಷನ್ ಎಸ್‍ಯುವಿಯು ಪ್ರಮುಖ ಬದಲಾವಣೆಗಳೊಂದಿಗೆ 2023ರ ವೇಳೆಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಬಹುದು.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ಮಹೀಂದ್ರಾ ಬೊಲೆರೊ ಭಾರತೀಯ ಮಾರುಕಟ್ಟೆಯಲ್ಲಿ ಬಹುದೀರ್ಘಕಾಲದಿಂದ ಮಾರಾಟವಾಗುತ್ತಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಬೊಲೆರೊ ಎಸ್‍ಯುವಿಯ ನ್ಯೂ ಜನರೇಷನ್ ಮಾದರಿಯು ಹೊಸ ಲ್ಯಾಡರ್-ಆನ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ. ಇದು ಹೊಸ ಥಾರ್‌ಗೆ ಸಹ ಆಧಾರವಾಗಿದೆ. ಇನ್ನು ನ್ಯೂ ಜನರೇಷನ್ ಸ್ಕಾರ್ಪಿಯೋ ಮತ್ತು 5-ಡೋರಿನ ಥಾರ್ ಎಸ್‍ಯುವಿಯನ್ನು ಕೂಡ ಇದೇ ಪ್ಲಾಟ್‌ಫಾರ್ಮ್ ಅಡಿಯಲ್ಲಿ ತಯಾರಿಸಲಾಗುತ್ತದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ನ್ಯೂ ಜನರೇಷನ್ ಬೊಲೆರೊ ಎಸ್‍ಯುವಿಯನ್ನು ಪರಿಚಯಿಸುವ ಮೊದಲು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಪ್ರಸ್ತುತ ಮಾರಾಟವಾಗುತ್ತಿರುವ ಬೊಲೆರೊ ಮಾದರಿಯ ಮಿಡ್-ಲೈಫ್ ಫೇಸ್ ಲಿಫ್ಟ್ ಅನ್ನು ಪಡೆಯುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ನವೀಕರಿಸಿದ ಮಾದರಿಯು ಸೂಕ್ಷ್ಮ ವಿನ್ಯಾಸ ಬದಲಾವಣೆಗಳು ಮತ್ತು ನವೀಕರಿಸಿದ ಇಂಟಿರಿಯರ್ ಅನ್ನು ಹೊಂದಿರುತ್ತದೆ, ನ್ಯೂ ಜನರೇಷನ್ ಬೊಲೆರೊ ಅದೇ ರಗಡ್ ಬಾಕ್ಸ್ ವಿನ್ಯಾಸವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ, ಬೊಲೆರೊ ಎಸ್‍ಯುವಿಯು ಸಣ್ಣ ನಗರಗಳಲ್ಲಿ ಮತ್ತು ಗ್ರಾಮಿಣ ಭಾಗಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಗಳಿಸಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ನ್ಯೂ ಜನರೇಷನ್ ಬೊಲೆರೊ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ರೇರ್ ಎಸಿ ವೆಂಟ್ ಗಳೊಂದಿಗೆ ಹೊಸ ಎಸಿ ಯುನಿಟ್, ಪವರ್ ವಿಂಡೋಸ್, ಮಲ್ಟಿ-ಫಂಕ್ಷನಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ಇತರ ಆಧುನಿಕ ವೈಶಿಷ್ಟ್ಯಗಳನ್ನು ಪಡೆಯುವ ನಿರೀಕ್ಷೆಯಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ಇನ್ನು ಬೊಲೆರೊ ಎಸ್‍ಯುವಿಯ ಟಾಪ್-ಸ್ಪೆಕ್ ಮಾದರಿಯು ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ ಹೆಡ್ ಲ್ಯಾಂಪ್ ಗಳನ್ನು ಮತ್ತು ಎಲ್ಇಡಿ ಟೈಲ್-ಲ್ಯಾಂಪ್ ಗಳನ್ನು ಸಹ ಪಡೆಯಬಹುದು. ಇದು ಸ್ಕಿಡ್ ಪ್ಲೇಟ್, ಟರ್ನ್ ಇಂಡಿಕೇಟರ್‌ಗಳನ್ನು ಹೊಂದಿರುವ ಒಆರ್‌ವಿಎಂಗಳು ಮತ್ತು ಹೊಸ ಫ್ರಂಟ್ ಗ್ರಿಲ್ ಅನ್ನು ಪಡೆಯುವ ಸಾಧ್ಯತೆಯಿದೆ.

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ಇನ್ನು ಹೊಸ ಬೊಲೆರೊದಲ್ಲಿ ಹೊಸ ಸುರಕ್ಷತೆ ಮತ್ತು ಕ್ರ್ಯಾಶ್ ಪರೀಕ್ಷಾ ಮಾನದಂಡಗಳಿಗೆ ಅನುಗುಣವಾಗಿರುತ್ತದೆ. ಹೊಸ ಹೊಸ ಮಾದರಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ವಿಥ್ ಇಬಿಡಿ, ಡ್ರೈವರ್ ಮತ್ತು ಕೋ-ಡ್ರೈವರ್ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ಅಲರ್ಟ್ ಸಿಸ್ಟಮ್, ವೆಹಿಕಲ್ ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ಸೆಂಟ್ರಲ್ ಲಾಕಿಂಗ್ ಸಿಸ್ಟಂಗಾಗಿ ಮ್ಯಾನ್ಯುವಲ್ ಓವರ್‌ರೈಡ್ ಅನ್ನು ಸ್ಟಾಂಡರ್ಡ್ ಸುರಕ್ಷತಾ ವೈಶಿಷ್ಟ್ಯಗಳಾಗಿ ಅಳವಡಿಸಲಾಗುತ್ತದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ನ್ಯೂ ಜನರೇಷನ್ ಬೊಲೆರೊ ಹೊಸ 2.2-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 132 ಬಿಹೆಚ್‌ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ 1.5-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಸಹ ಪಡೆಯಬಹುದು

ಹೊಸ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಮಹೀಂದ್ರಾ ಬೊಲೆರೊ

ಇನ್ನು ಮಹೀಂದ್ರಾ ಥಾರ್ ಎಸ್‍ಯುವಿಯಲ್ಲಿರುವ . ಇದು 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಸಹ ಪಡೆಯುವ ಸಾಧ್ಯತೆಗಳಿದೆ. ಒಟ್ಟಿನಲ್ಲಿ ನ್ಯೂ ಜನರೇಷನ್ ಎಸ್‍ಯುವಿಯು ಹೊಸ ಫೀಚರ್ಸ್ ಮತ್ತು ಕೆಲವು ವಿನ್ಯಾಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ 2023ರಲ್ಲಿ ಬಿಡುಗಡೆಯಾಗಬಹುದು.

More from DriveSpark

Article Published On: Saturday, May 29, 2021, 15:38 [IST]
English summary
Next-gen Mahindra Bolero Confirmed. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+