ಕೋವಿಡ್ ಪರಿಣಾಮ ಹೊಸ ಸ್ಕಾರ್ಪಿಯೋ ಬಿಡುಗಡೆಯನ್ನು 2022ಕ್ಕೆ ಮುಂದೂಡಿದ ಮಹೀಂದ್ರಾ
ಕೋವಿಡ್ ಪರಿಣಾಮ ತೀವ್ರ ನಷ್ಟ ಅನುಭವಿಸುತ್ತಿರುವ ಆಟೋ ಉತ್ಪಾದನಾ ಕಂಪನಿಗಳು ಹೊಸ ವಾಹನ ಮಾರಾಟದಲ್ಲಿ ಹಲವಾರು ಬದಲಾವಣೆಗಳನ್ನು ತರುತ್ತಿದ್ದು, ಸದ್ಯ ಪರಿಸ್ಥಿತಿಗೆ ಅನುಗುಣವಾಗಿ ಯಾವುದೇ ವಾಹನಗಳನ್ನು ಬಿಡುಗಡೆ ಮಾಡದಿರಲು ನಿರ್ಧರಿಸಿವೆ.

ಕೋವಿಡ್ ತಗ್ಗಿದ ನಂತರ ಮಾರುಕಟ್ಟೆ ಪ್ರವೇಶಿಸಲು ಸಜ್ಜುಗೊಂಡಿದ್ದ ಹಲವು ಹೊಸ ವಾಹನ ಮಾದರಿಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳ ಮಾರಾಟ ಮೇಲೆ ಮಾತ್ರ ಗಮನಹರಿಸಲು ನಿರ್ಧರಿಸಿವೆ. ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುತ್ತಿರುವುದು ಆರ್ಥಿಕ ಚಟುವಟಿಕೆಗಳ ಭಾರೀ ಹೊಡೆತ ಬೀಳುತ್ತಿದ್ದು, ಇದೇ ಕಾರಣಕ್ಕೆ ಮಹೀಂದ್ರಾ ಕಂಪನಿಯು ಸಹ ತನ್ನ ಹೊಸ ತಲೆಮಾರಿನ ಸ್ಕಾರ್ಪಿಯೋ ಮಾದರಿಯ ಬಿಡುಗಡೆಯನ್ನು ಸದ್ಯ ಮುಂದೂಡಿಕೆ ಮಾಡಿದೆ.

ಪೂರ್ವ ನಿಗದಿಯಂತೆ ಈ ವರ್ಷ ಜೂನ್ ಅಥವಾ ಜುಲೈನಲ್ಲಿ ಬಿಡುಗಡೆಯಾಗಬೇಕಿದ್ದ ನ್ಯೂ ಜನರೇಷನ್ ಸ್ಕಾರ್ಪಿಯೋ ಮಾದರಿಯನ್ನು ಮಹೀಂದ್ರಾ ಕಂಪನಿಯು ಮುಂಬರುವ 2022ರ ಆರಂಭದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವಾರು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯ ಸಿದ್ದತೆಯಲ್ಲಿದ್ದು, ಎಂಜಿನ್ ಪರೀಕ್ಷೆಗಾಗಿ ವಿವಿಧ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಎಂಪಿವಿ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಸ್ಕಾರ್ಪಿಯೋ ಹೊಸ ಕಾರಿನಲ್ಲಿ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಹೊಸ ಆಟೋಮ್ಯಾಟಿಕ್ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ ಕಾರು ಮಾದರಿಯಲ್ಲಿ ಥಾರ್ ಎಸ್‌ಯುವಿಯಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಹೊಸ ಕಾರು ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಹೊಂದಿರಲಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.56 ಲಕ್ಷ ಬೆಲೆ ಹೊಂದಿದೆ.

ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಹೊಸ ತಾಂತ್ರಿಕ ಸೌಲಭ್ಯಗಳಿಂದಾಗಿ ವಾಹನಗಳ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಗುಣಮಟ್ಟದ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋದಲ್ಲಿ ವಿವಿಧ ಎಂಜಿನ್‌ಗಳನ್ನು ಜೋಡಣೆ ಮಾಡುತ್ತಿದ್ದು, ಹೊಸ ಎಂಜಿನ್ ಮಾದರಿಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದ ಕಂಪನಿಗೆ ಕೋವಿಡ್ ಹೊಡೆತ ನೀಡುತ್ತಿದೆ.


Click it and Unblock the Notifications








