Just In
- 31 min ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 31 min ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 46 min ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 1 hr ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
ಮಹೀಂದ್ರಾ ಕಂಪನಿಯು ತನ್ನ ಜನಪ್ರಿಯ ಸ್ಕಾರ್ಪಿಯೋ ಕಾರಿನ ನ್ಯೂ ಜನರೇಷನ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ನ್ಯೂ ಜನರೇಷನ್ ಸ್ಕಾರ್ಪಿಯೋ ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸುಳಿವು ನೀಡಿದೆ.
ನ್ಯೂ ಜನರೇಷನ್ ಎಕ್ಸ್ಯುವಿ500 ಕಾರು ಬಿಡುಗಡೆಯ ನಂತರವಷ್ಟೇ ಸ್ಕಾರ್ಪಿಯೋ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಎಸ್ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.
ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.
ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಎಕ್ಸ್ಯುವಿ300 ನಂತರ ಮಹೀಂದ್ರಾ ನಿರ್ಮಾಣದ ಬಹುತೇಕ ಕಾರುಗಳು ಕ್ರ್ಯಾಶ್ ಟೆಸ್ಟಿಂಗ್ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಳ್ಳುತ್ತಿವೆ.
ನ್ಯೂ ಜನರೇಷನ್ ಸ್ಕಾರ್ಪಿಯೋ ಕಾರಿನಲ್ಲೂ ಮಲ್ಟಿ ಏರ್ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್ಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್ರೂಫ್, ರೂಫ್ ರೈಲ್ಸ್, ಎಲ್ಇಡಿ ಹೆಡ್ಲ್ಯಾಂಪ್, ಎಲ್ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿದ್ದು, ಹೊಸ ವಿನ್ಯಾಸ ಅಲಾಯ್ ವೀಲ್ಹ್ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್ಬೆಸ್ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.
ಇದಲ್ಲದೆ ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ಒದಗಿಸಲು ಆ್ಯಪಲ್ ಕಾರ್ಪ್ಲೇ ಮತ್ತುಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ ಟಚ್ಸ್ಕ್ರಿನ್ ಇನ್ಪೋಟೈನ್ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ.
ಹೊಸ ತಾಂತ್ರಿಕ ಸೌಲಭ್ಯಗಳಿಂದಾಗಿ ವಾಹನಗಳ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಗುಣಮಟ್ಟದ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋದಲ್ಲಿ ವಿವಿಧ ಎಂಜಿನ್ಗಳನ್ನು ಜೋಡಣೆ ಮಾಡುವ ಸಿದ್ದತೆಯಲ್ಲಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
ಸ್ಕಾರ್ಪಿಯೋ ಕಾರಿನಲ್ಲಿ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಹೊಸ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.
ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ ಕಾರು ಮಾದರಿಯಲ್ಲಿ ಥಾರ್ ಎಸ್ಯುವಿಯಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಹೊಸ ಕಾರು ಮುಂಬರುವ ಮಾರ್ಚ್ ಅಥವಾ ಏಪ್ರಿಲ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.44 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.31 ಲಕ್ಷ ಬೆಲೆ ಹೊಂದಿದೆ. ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.