ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಪ್ರಮುಖ ಕಾರುಗಳ ನ್ಯೂ ಜನರೇಷನ್ ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಸ್ಕಾರ್ಪಿಯೋ ನ್ಯೂ ಜನರೇಷನ್ ಮಾದರಿಯು ಕೂಡಾ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಬಿಡುಗಡೆಯ ನಂತರವಷ್ಟೇ ಸ್ಕಾರ್ಪಿಯೋ ಹೊಸ ಮಾದರಿಯನ್ನು ಬಿಡುಗಡೆಗೆ ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಎಸ್‌‌ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಸ್ಕಾರ್ಪಿಯೋ ಕಾರು ಮಾದರಿಯ ಹೊಸ ಮಾರಾಜೋ ಕಾರಿನಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹಳೆಯ ಕಾರಿಗಿಂತಲೂ ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಹೊಸ ಕಾರಿನಲ್ಲಿ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಕ್ರೂಸ್ ಕಂಟ್ರೋಲ್, ಸನ್‌ರೂಫ್, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯವಿರಲಿದೆ.

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಇದಲ್ಲದೆ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟು ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ನೀಡಬಲ್ಲ ಟಚ್ ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಜೋಡಣೆ ಮಾಡಲಾಗಿದೆ. ಮತ್ತೊಂದು ಪ್ರಮುಖ ಆಕರ್ಷಣೆ ಅಂದರೆ ಮಹೀಂದ್ರಾ ಕಂಪನಿಯು ಹೊಸ ಕಾರುಗಳ ಮೂಲಕ ಕ್ರ್ಯಾಶ್ ಟೆಸ್ಟಿಂಗ್ ಸಾಕಷ್ಟು ಸುಧಾರಣೆ ಕಂಡಿರುವುದು ವಾಹನ ಮಾರಾಟ ಮಾರಾಟ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಹೊಸ ತಾಂತ್ರಿಕ ಸೌಲಭ್ಯಗಳಿಂದಾಗಿ ವಾಹನಗಳ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಗುಣಮಟ್ಟದ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋದಲ್ಲಿ ಹೊಸ ಎಂಜಿನ್ ಜೋಡಣೆ ಮಾಡುವ ಸಿದ್ದತೆಯಲ್ಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಮಾದರಿಯಲ್ಲೂ ಮಾದರಿಯಲ್ಲೂ ಖರೀದಿಗೆ ಲಭ್ಯವಾಗುವ ಎಲ್ಲಾ ಸಾಧ್ಯತೆಗಳಿವೆ.

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಥಾರ್ ನ್ಯೂ ಜನರೇಷನ್ ಮಾದರಿಯಲ್ಲೂ ಈಗಾಗಲೇ ಹೊಸದಾಗಿ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗಿದ್ದು, ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ ಮಾದರಿಗಳಲ್ಲೂ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ರೋಡ್ ಟೆಸ್ಟಿಂಗ್ ನಡೆಸಿದ ನ್ಯೂ ಜನರೇಷನ್ ಸ್ಕಾರ್ಪಿಯೋ

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್‌ನೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.44 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.31 ಲಕ್ಷ ಬೆಲೆ ಹೊಂದಿದೆ.

Article Published On: Monday, January 4, 2021, 19:42 [IST]
English summary
Next-Gen Mahindra Scorpio Spotted Testing Once Again. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+