ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಸ್ಕಾರ್ಪಿಯೋ ಎಸ್‌ಯುವಿ ಕಾರಿನ ನ್ಯೂ ಜನರೇಷನ್ ಆವೃತ್ತಿಯನ್ನು ಬಿಡುಗಡೆಗೊಳಿಸಲು ಮಹೀಂದ್ರಾ ಕಂಪನಿಯು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ನ್ಯೂ ಜನರೇಷನ್ ಸ್ಕಾರ್ಪಿಯೋ ಮಾದರಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸುಳಿವು ನೀಡಿದೆ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಬಿಡುಗಡೆಯ ನಂತರ ಸ್ಕಾರ್ಪಿಯೋ ಹೊಸ ಮಾದರಿಯನ್ನು ಬಿಡುಗಡೆ ಮಾಡಲಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತಲೂ ಹಲವಾರು ಹೊಸ ಬದಲಾವಣೆಯೊಂದಿಗೆ ಎಸ್‌‌ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿರುವುದು ರೋಡ್ ಟೆಸ್ಟಿಂಗ್‌ನಲ್ಲಿ ಬಹಿರಂಗವಾಗಿದೆ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಎಕ್ಸ್‌ಯುವಿ300 ನಂತರ ಮಹೀಂದ್ರಾ ನಿರ್ಮಾಣದ ಬಹುತೇಕ ಕಾರುಗಳು ಕ್ರ್ಯಾಶ್ ಟೆಸ್ಟಿಂಗ್ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಳ್ಳುತ್ತಿವೆ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ನ್ಯೂ ಜನರೇಷನ್ ಸ್ಕಾರ್ಪಿಯೋ ಕಾರಿನಲ್ಲೂ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿದ್ದು, ಹೊಸ ವಿನ್ಯಾಸದ 17 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.

ಅತ್ಯುತ್ತಮ ಫೀಚರ್ಸ್ ಒಳಗೊಂಡ ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಫಸ್ಟ್ ಡ್ರೈವ್ ರಿವ್ಯೂ ತಪ್ಪದೇ ನೋಡಿ.

ಇದಲ್ಲದೆ ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಒಂದೇ ಸೂರಿನಡಿ ವಿವಿಧ ಮಾಹಿತಿಗಳನ್ನು ಒದಗಿಸಲು ಆ್ಯಪಲ್ ಕಾರ್‌ಪ್ಲೇ ಮತ್ತುಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ ಟಚ್‌ಸ್ಕ್ರಿನ್ ಇನ್ಪೋಟೈನ್‌ಟೆಂಟ್ ಸಿಸ್ಟಂ ಸಹ ಜೋಡಣೆ ಮಾಡಲಾಗಿದೆ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಹೊಸ ತಾಂತ್ರಿಕ ಸೌಲಭ್ಯಗಳಿಂದಾಗಿ ವಾಹನಗಳ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಗುಣಮಟ್ಟದ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗುತ್ತಿರುವ ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋದಲ್ಲಿ ವಿವಿಧ ಎಂಜಿನ್‌ಗಳನ್ನು ಜೋಡಣೆ ಮಾಡುವ ಸಿದ್ದತೆಯಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಸ್ಕಾರ್ಪಿಯೋ ಕಾರಿನಲ್ಲಿ ಈ ಬಾರಿ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್‌ಗೆ ಪೂರಕವಾದ 2.2-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಜೊತೆಗೆ ಹೊಸ ಪೆಟ್ರೋಲ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಮಹೀಂದ್ರಾ ಕಂಪನಿಯು ಹೊಸ ಸ್ಕಾರ್ಪಿಯೋ ಕಾರು ಮಾದರಿಯಲ್ಲಿ ಥಾರ್ ಎಸ್‌ಯುವಿಯಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಿದ್ದು, ಹೊಸ ಕಾರು ಮುಂಬರುವ ಏಪ್ರಿಲ್ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಹೊಂದಿರಲಿದೆ ಹೊಸ ಸ್ಕಾರ್ಪಿಯೋ

ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್‌ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16.56 ಲಕ್ಷ ಬೆಲೆ ಹೊಂದಿದೆ. ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಪೆಟ್ರೋಲ್ ಮಾದರಿಯು ಉತ್ತಮ ಆಯ್ಕೆಯಾಗಲಿದೆ.

Most Read Articles

Kannada
English summary
2021 Second-Gen Mahindra Scorpio SUV Spied. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X