ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಉನ್ನತೀಕರಣದ ನಂತರ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಗಳನ್ನು ಸಹ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಕಾರಣಾಂತರಗಳಿಂದ ಹೊಸ ಕಾರಿನ ಬಿಡುಗಡೆ ಯೋಜನೆಯನ್ನು ಮುಂದೂಡಿಕೆ ಮಾಡುತ್ತಿದೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಎಸ್‌ಯುವಿ ಕಾರು ಮಾದರಿಯನ್ನು ಹಲವಾರು ಹೊಸ ಬದಲಾವಣೆಗಳೊಂದಿಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಕಂಪನಿಯು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸುತ್ತಿದೆ. ಹೊಸ ಎಕ್ಸ್‌ಯುವಿ500 ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಹಲವು ಹೊಸ ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆಯಾಗಬೇಕಿದ್ದ ಹೊಸ ಕಾರನ್ನು ಮುಂಬರುವ ಜುಲೈಗೆ ಮುಂದೂಡಿಕೆ ಮಾಡಲಾಗಿದೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಕಳೆದ ವರ್ಷ ಕೋವಿಡ್ ಪರಿಣಾಮ ನ್ಯೂ ಜನರೇಷನ್ ಮಾದರಿಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದ ಮಹೀಂದ್ರಾ ಕಂಪನಿಯು ಇದೀಗ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯಿಂದಾಗಿ ಹೊಸ ಕಾರುಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದು, ಮುಂಬರುವ ಜುಲೈ ಹೊತ್ತಿಗೆ ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಭರವಸೆ ನೀಡಿದೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಸದ್ಯಕ್ಕೆ ಬಿಎಸ್-6 ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗಿದ್ದು, ಹೊಸ ಕಾರನ್ನು ಮಹೀಂದ್ರಾ ಕಂಪನಿಯ ಹೊಸ ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಹಾಗೆಯೇ ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗದ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಹೊಸ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನಗಳು, ಸೀಟ್ ಮೆಮೊರಿ ಫಂಕ್ಷನ್ಸ್, ರಿಯಲ್ ಸೀಟ್ ಎಸಿ ವೆಂಟ್ಸ್, ಪನೊರಮಿಕ್ ಸನ್‌ರೂಫ್, ಮೂರನೇ ಸಾಲಿನಲ್ಲಿ 50:50 ಅನುಪಾತದ ಆಸನಗಳು ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

50:50 ಅನುಪಾತದ ಆಸನಗಳ ಸೌಲಭ್ಯದಿಂದಾಗಿ ಬೂಟ್ ಸ್ಪೆಸ್ ಸೌಲಭ್ಯವನ್ನು ಅಗತ್ಯ ಸಂದರ್ಭಗಳಲ್ಲಿ ವಿಸ್ತರಣೆ ಮಾಡಿಕೊಳ್ಳಬಹುದಾಗಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 6 ಮತ್ತು 7 ಸೀಟುಗಳ ಆಯ್ಕೆ ಪಡೆದುಕೊಳ್ಳಬಹುದು.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಇದರೊಂದಿಗೆ ಹೊಸ ಕಾರಿನಲ್ಲಿ ರಡಾರ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ರಸ್ತೆ ಗುಂಡಿಗಳ ಬಗೆಗೆ ಚಾಲಕನಿಗೆ ಎಚ್ಚರಿಸಲಿದೆ. ಈ ಮೂಲಕ ರಸ್ತೆ ಮೇಲೆ ನಿಗಾ ಇಡಲಿರುವ ಹೊಸ ತಂತ್ರಜ್ಞಾನ ಸೌಲಭ್ಯವು ವಾಯ್ಸ್ ಮೂಲಕ ಚಾಲಕನಿಗೆ ಎಚ್ಚರಿಕೆಯ ಸಂದೇಶ ರವಾನಿಸಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಎಂಜಿನ್ ಮತ್ತು ಪರ್ಫಾಮೆನ್ಸ್

ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 180-ಬಿಎಚ್‌ಪಿ ಪ್ರೇರಿತ 2.2 ಡೀಸೆಲ್ ಎಂಜಿನ್ ಜೊತೆಗೆ 190-ಬಿಎಚ್‌ಪಿ ಪ್ರೇರಿತ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆದುಕೊಳ್ಳಲಿದ್ದು, ಇದು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಜೀಪ್ ಕಂಪಾಸ್, ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿ ಕಾರಿಗಿಂತಲೂ ಉತ್ತಮ ಎಂಜಿನ್ ಆಯ್ಕೆ ಎನ್ನಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮತ್ತಷ್ಟು ತಡವಾಗಲಿಗದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರು ಬಿಡುಗಡೆ

ಈ ಮೂಲರಕ ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿವೆ.

Article Published On: Tuesday, March 30, 2021, 20:37 [IST]
English summary
Next-Gen Mahindra XUV500 (2021) Launch Delayed Again.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+