ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಕೋವಿಡ್ ಅವಧಿಯಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ವಾಹನ ಬಿಡಿಭಾಗಗಳ ಪೂರೈಕೆ ಸರಪಳಿಯಲ್ಲಿ ಆದ ಅಸ್ತವ್ಯಸ್ತವು ಇದೀಗ ಹೊಸ ವಾಹಗಳ ಉತ್ಪಾದನೆ ಕುಂಠಿತಗೊಳ್ಳಲು ಪ್ರಮುಖ ಕಾರಣವಾಗಿದ್ದು. ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಆಟೋ ಉತ್ಪಾದನಾ ಕಂಪನಿಗಳಿಗೆ ಸಂಕಷ್ಟಕ್ಕಿಡು ಮಾಡಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಕಳೆದ ಕೆಲ ತಿಂಗಳಿಂದ ಆಟೋಮೊಬೈಲ್ ಜೊತೆಗೆ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳಾದ ಲ್ಯಾಪ್‌ಟಾಪ್‌, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳಿಗೆ ಭಾರೀ ಬೇಡಿಕೆ ಹರಿದುಬರುತ್ತಿದ್ದು, ಆಟೋಮೊಬೈಲ್ ವಲಯಕ್ಕೆ ಹೆಚ್ಚಿನ ಮಟ್ಟದಲ್ಲಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆ ಮಾಡುತ್ತಿದ್ದ ಕಂಪನಿಗಳು ಎಲೆಕ್ಟ್ರಾನಿಕ್ ಸಾಧನೆಗಳಿಗೆ ಹೆಚ್ಚಿನ ಮಟ್ಟದ ಚಿಪ್ ಪೂರೈಕೆ ಮಾಡುತ್ತಿರುವುದು ಆಟೋ ಮೊಬೈಲ್ ಕ್ಷೇತ್ರದ ಮೇಲೆ ಪರಿಣಾಮ ಉಂಟು ಮಾಡುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಯುರೋಪ್, ಅಮೆರಿಕಾ ಹಾಗೂ ಏಷ್ಯಾದ ಪ್ರಮುಖ ದೇಶಗಳಲ್ಲಿನ ವಾಹನ ಉತ್ಪಾದನೆಯು ಮೇಲೂ ಪರಿಣಾಮ ಉಂಟುಮಾಡುತ್ತಿದ್ದು, ಹೊಸ ಕಾರುಗಳ ಗ್ರಾಹಕರ ಕಾಯುವ ಅವಧಿಯು ಕೂಡಾ 5ರಿಂದ 6 ತಿಂಗಳಿಗೆ ಹೆಚ್ಚಳವಾಗುತ್ತಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳ ಸಂಪರ್ಕದಲ್ಲಿ ಪ್ರಮುಖ ಪಾತ್ರವಹಿಸುವ ಸೆಮಿ ಕಂಡಕ್ಟರ್ ಚಿಪ್‌ಗಳನ್ನು ಕಾರಿನ ಡಿಸ್ ಪ್ಲೇ, ಸ್ಪೀಕರ್, ಸ್ಟೆಬಿಲಿಟಿ ಕಂಟ್ರೋಲ್, ಲೈಟಿಂಗ್ ಮುಂತಾದ ಫೀಚರ್ಸ್‌ ಜೋಡಣೆಯಲ್ಲಿ ಬಳಸಲಾಗುತ್ತದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಆದರೆ ಕರೋನಾ ನಂತರ ಮೊದಲ ಬಾರಿಗೆ ಹೊಸ ವಾಹನಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗಿರುವ ಸಂದರ್ಭದಲ್ಲೇ ಹೊಸ ಚಿಪ್‌ಗಳ ಕೊರೆತೆಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನಗಳ ಚೊತೆಗೆ ಹೊಸ ವಾಹನಗಳ ಬಿಡುಗಡೆಯ ಮೇಲೂ ಪರಿಣಾಮ ಉಂಟಾಗಿದ್ದು, ಮಹೀಂದ್ರಾ ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಗೊಳಿಸಬೇಕಿದ್ದ ನ್ಯೂ ಜನರೇಷನ್ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಕಾರುಗಳ ಬಿಡುಗಡೆಯನ್ನು ಈ ವರ್ಷದ ಮಧ್ಯಂತರದಲ್ಲಿ ಬಿಡುಗಡೆ ಮಾಡಬಹುದಾಗಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಕಳೆದ ವರ್ಷದ ಕರೋನಾ ಕಾರಣದಿಂದಾಗಿ ನ್ಯೂ ಜನರೇಷನ್ ಕಾರುಗಳ ಮಾರಾಟವನ್ನು ಮುಂದೂಡಿಕೆ ಮಾಡಿದ ಮಹೀಂದ್ರಾ ಕಂಪನಿಯು ಈ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆ ಮಾಡುವ ಇರಾದೆಯಲ್ಲಿತ್ತು. ಆದರೆ ಇದೀಗ ಸೆಮಿ ಕಂಡಕ್ಟರ್ ಚಿಪ್ ಕೊರೆತೆಯು ಹೊಸ ವಾಹನಗಳ ಬಿಡುಗಡೆಯಲ್ಲಿ ಮತ್ತೆ ವಿಳಂಬವಾಗುತ್ತಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಈ ವರ್ಷದ ಮಧ್ಯಂತರ ವೇಳೆಗೆ ಚಿಪ್ ಕೊರತೆ ಸಮಸ್ಯೆ ಬಗೆಹರಿದು ಉತ್ಪಾದನೆಯು ಸಾಮಾನ್ಯ ಸ್ಥಿತಿಗೆ ಮರಳುವ ಸಾಧ್ಯತೆಗಳಿದ್ದು, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೊ ಕಾರುಗಳು ಮುಂದಿನ ಜೂನ್ ಅಥವಾ ಜುಲೈಗೆ ಬಿಡುಗಡೆಯಾಗಬಹುದಾಗಿದೆ.

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಇನ್ನು ಮಹೀಂದ್ರಾ ನ್ಯೂ ಜನರೇಷನ್ ಕಾರು ಮಾದರಿಗಳು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಸದ್ಯಕ್ಕೆ ಬಿಎಸ್-6 ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಲೆಕ್ಟ್ರಾನಿಕ್ ಚಿಪ್ ಕೊರತೆ: ಮಹೀಂದ್ರಾ ಹೊಸ ಕಾರುಗಳ ಬಿಡುಗಡೆ ಮತ್ತಷ್ಟು ವಿಳಂಬ

ಹೊಸ ತಲೆಮಾರಿನ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೊ ಕಾರಿನಲ್ಲಿ ಈ ಬಾರಿ ಹೊಸ ಪೆಟ್ರೋಲ್ ಎಂಜಿನ್‌ನೊಂದಿಗೆ ಮತ್ತು ಬಲಿಷ್ಠವಾದ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಹೊಸ ಕಾರುಗಳು ಮಹೀಂದ್ರಾ ಕಂಪನಿಯ ಹೊಸ ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

Most Read Articles

Kannada
English summary
New-gen Mahindra XUV500, Scorpio Launch Could Be Delayed. Read in Kannada.
Story first published: Thursday, February 18, 2021, 1:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X