Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 3 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 4 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಧ್ಯಮ ಗಾತ್ರದ ಎಸ್‌ಯುವಿ ಕಾರಿನಲ್ಲೇ ವಿಶೇಷ ಫೀಚರ್ಸ್ ಪಡೆದುಕೊಳ್ಳಲಿದೆ ನ್ಯೂ ಜನರೇಷನ್ ಎಕ್ಸ್‌ಯುವಿ500
ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಥಾರ್ ಉನ್ನತೀಕರಣದ ನಂತರ ಎಕ್ಸ್‌ಯುವಿ500 ಮತ್ತು ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಗಳನ್ನು ಸಹ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಎಕ್ಸ್‌ಯುವಿ500 ಕಾರು ಮಾದರಿಯು ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಲ್ಲೇ ಹಲವಾರು ಹೊಸ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಎಸ್‌ಯುವಿ ಕಾರು ಮಾದರಿಯನ್ನು ಹಲವಾರು ಹೊಸ ಬದಲಾವಣೆಗಳೊಂದಿಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಕಂಪನಿಯು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸುತ್ತಿದೆ. ಹೊಸ ಎಕ್ಸ್‌ಯುವಿ500 ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳಲ್ಲೇ ಹಲವು ಹೊಸ ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಮೊದಲ ಬಾರಿಗೆ ಹೊಸ ಕಾರಿನ ಇಂಟಿರಿಯರ್ ಮಾಹಿತಿಗಳು ಲಭ್ಯವಾಗಿವೆ.

ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಸದ್ಯಕ್ಕೆ ಬಿಎಸ್-6 ಡೀಸೆಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗಿದ್ದು, ಹೊಸ ಕಾರನ್ನು ಮಹೀಂದ್ರಾ ಕಂಪನಿಯ ಹೊಸ ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ. ಹಾಗೆಯೇ ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್ ಕ್ಲಸ್ಟರ್, ಹಿಂಭಾಗದ ಬಂಪರ್, ಟೈಲ್‌ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ.

ಹೊಸ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನಗಳು, ಸೀಟ್ ಮೆಮೊರಿ ಫಂಕ್ಷನ್ಸ್, ರಿಯಲ್ ಸೀಟ್ ಎಸಿ ವೆಂಟ್ಸ್, ಪನೊರಮಿಕ್ ಸನ್‌ರೂಫ್, ಮೂರನೇ ಸಾಲಿನಲ್ಲಿ 50:50 ಅನುಪಾತದ ಆಸನಗಳು ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.

50:50 ಅನುಪಾತದ ಆಸನಗಳ ಸೌಲಭ್ಯದಿಂದಾಗಿ ಬೂಟ್ ಸ್ಪೆಸ್ ಸೌಲಭ್ಯವನ್ನು ಅಗತ್ಯ ಸಂದರ್ಭಗಳಲ್ಲಿ ವಿಸ್ತರಣೆ ಮಾಡಿಕೊಳ್ಳಬಹುದಾಗಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 6 ಮತ್ತು 7 ಸೀಟುಗಳ ಆಯ್ಕೆ ಪಡೆದುಕೊಳ್ಳಬಹುದು.

ಇದರೊಂದಿಗೆ ಹೊಸ ಕಾರಿನಲ್ಲಿ ರಡಾರ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ರಸ್ತೆ ಗುಂಡಿಗಳ ಬಗೆಗೆ ಚಾಲಕನಿಗೆ ಎಚ್ಚರಿಸಲಿದೆ. ಈ ಮೂಲಕ ರಸ್ತೆ ಮೇಲೆ ನಿಗಾ ಇಡಲಿರುವ ಹೊಸ ತಂತ್ರಜ್ಞಾನ ಸೌಲಭ್ಯವು ವಾಯ್ಸ್ ಮೂಲಕ ಚಾಲಕನಿಗೆ ಎಚ್ಚರಿಕೆಯ ಸಂದೇಶ ರವಾನಿಸಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಈ ಮೂಲಕ ಹೊಸ ಕಾರು ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿ ಎಸ್‍ಯುವಿ ಕಾರುಗಳಿಗೆ ನೇರ ಪೈಪೋಟಿ ನೀಡಲಿದ್ದು, ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್‌ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ನ್ಯೂ ಜನರೇಷನ್ ಎಕ್ಸ್‌ಯುವಿ500 ಕಾರು ಮಾದರಿಯು 180-ಬಿಎಚ್‌ಪಿ ಪ್ರೇರಿತ 2.2 ಡೀಸೆಲ್ ಎಂಜಿನ್ ಜೊತೆಗೆ 190-ಬಿಎಚ್‌ಪಿ ಪ್ರೇರಿತ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆಯ್ಕೆಯನ್ನು ಪಡೆದುಕೊಳ್ಳಲಿದ್ದು, ಇದು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಜೀಪ್ ಕಂಪಾಸ್, ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಸಫಾರಿ ಕಾರಿಗಿಂತಲೂ ಉತ್ತಮ ಎಂಜಿನ್ ಆಯ್ಕೆ ಎನ್ನಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಈ ಮೂಲರಕ ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿವೆ.