ಪನೋರಮಿಕ್ ಸನ್‌ರೂಫ್ ಸೌಲಭ್ಯದೊಂದಿಗೆ ಬರಲಿದೆ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500
ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಮಾರಾಟದಲ್ಲಿರುವ ಜನಪ್ರಿಯ ಎಸ್‍ಯುವಿಯಾಗಿದೆ. ಇದೀಗ ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಎಕ್ಸ್‌ಯುವಿ500 ಎಸ್ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

ಮಹೀಂದ್ರಾ ಕಂಪನಿಯು ಇತ್ತೀಚೆಗೆ ತನ್ನ ಬಹುನಿರೀಕ್ಷಿತ ಥಾರ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಿತು. ಇದೀಗ ನ್ಯೂ ಜನರೇಷನ್ ಸ್ಕಾರ್ಪಿಯೋ ಮತ್ತು ಎಕ್ಸ್‌ಯುವಿ500 ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಹೊಸ ಎಕ್ಸ್‌ಯುವಿ500 ಎಸ್ಯುವಿಯನ್ನು ಭಾರತೀಯ ರಸ್ತೆಗಳಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವುದನ್ನು ರಶ್ಲೇನ್ ಬಹಿರಂಗಪಡಿಸಿದೆ.

ಸ್ಪೈ ಚಿತ್ರದಲ್ಲಿ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯು ದೊಡ್ಡ ಪನೋರಮಿಕ್ ಸನ್‌ರೂಫ್ ಅನ್ನು ಹೊಂದಿರುವುದನ್ನು ಕಂಡುಬಂದಿದೆ. ಈ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಪನೋರಮಿಕ್ ಸನ್‌ರೂಫ್ ಆಯ್ಕೆಯೊಂದಿಗೆ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೆವೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ನ್ಯೂ ಜನರೇಷನ್ ಎಕ್ಸ್‌ಯುವಿ500 ಎಸ್‍ಯುವಿಯನ್ನು ಮೊನೊಕೊಕ್ ಪ್ಲಾಟ್‌ಫಾರ್ಮ್‌ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. 2021ರ ಮಹೀಂದ್ರಾ ಎಕ್ಸ್‌ಯುವಿ500 ಅದರ ವಿನ್ಯಾಸ ಮತ್ತು ಸ್ಟೈಲಿಂಗ್‌ನಲ್ಲಿ ಗಮನಾರ್ಹ ಬದಲಾವಣೆಗಳ ಜೊತೆಗೆ ಹಲವಾರು ನವೀಕರಣಗಳು ಮತ್ತು ಹೆಚ್ಚುವರಿ ಫೀಚರ್ ಗಳನ್ನು ಸಹ ಹೊಂದಿರುತ್ತದೆ.

ಪನೋರಮಿಕ್ ಸನ್‌ರೂಫ್‌ನ ಹೊರತಾಗಿ, ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಹೊಸ ಫ್ರಂಟ್ ಗ್ರಿಲ್ ಅನ್ನು ಹೊಂದಿರುತ್ತದೆ, ಇದರಲ್ಲಿ ವರ್ಟಿಕಲ್ ಸ್ಲ್ಯಾಟ್‌ಗಳನ್ನು ಹೊಂದಿರುತ್ತದೆ. ಇಂಟಿಗ್ರೇಟೆಡ್ ಎಲ್ಇಡಿ ಡಿಆರ್ಎಲ್ ಗಳೊಂದಿಗೆ ಎಲ್ಇಡಿ ಹೆಡ್ ಲ್ಯಾಂಫ್ ಗಳಿಂದ ಗ್ರಿಲ್ ಅನ್ನು ಎರಡೂ ಬದಿಯಲ್ಲಿ ಸುತ್ತುವರಿಯಲಾಗುತ್ತದೆ. ಇದರೊಂದಿಗೆ ಏರ್ ಇನ್ ಟೆಕ್ ಮತ್ತು ಫಾಗ್ ಲ್ಯಾಂಪ್ ಅನ್ನು ಹೊಂದಿದೆ.
MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಇನ್ನು ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯ ಸೈಡ್ ಮತ್ತು ರಿಯರ್ ಪ್ರೊಫೈಲ್‌ನಲ್ಲಿ ಹೊಸದಾಗಿ ವಿನ್ಯಾಸಗೊಳಿಸಲಾದ ಅಲಾಯ್ ವ್ಹೀಲ್ ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಮತ್ತು ಹೊಸ ಎಲ್‌ಇಡಿ ಟೈಲ್ ಲೈಟ್‌ಗಳು ಕಂಡುಬರುತ್ತವೆ. ನ್ಯೂ ಜನರೇಷನ್ ಎಕ್ಸ್‌ಯುವಿ500 ಎಸ್‍ಯುವಿಯಯಲ್ಲಿ ಮಹೀಂದ್ರಾ ಹೊಚ್ಚ ಹೊಸ ಲೋಗೊವನ್ನು ಸಹ ಪರಿಚಯಿಸುವ ನಿರೀಕ್ಷೆಯಿದೆ.

ಹೊಸ ತಲೆಮಾರಿನ ಮಹೀಂದ್ರಾ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ ಡೀಸೆಲ್ ಎಂಜಿನ್ ಅನ್ನು ಸಹ ಅಳವಡಿಸುವ ಸಾಧ್ಯತೆಗಳಿದೆ. ಈ ಹೊಸ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಬಹುದು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಎಸ್‍ಯುವಿಯಲ್ಲಿ 2.2-ಲೀಟರ್ ಎಂಹಾಕ್ ಡೀಸೆಲ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 155 ಬಿಹೆಚ್‍ಪಿ ಪವರ್ ಮತ್ತು 360 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಎರಡು ಎಂಜಿನ್ ಗಳಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ. ಹೊಸ ಎಸ್‍ಯುವಿಯು ಎಡಬ್ಲ್ಯೂಡಿ(ಆಲ್-ವೀಲ್ ಡ್ರೈವ್) ಸಿಸ್ಟಂ ಸಹ ಹೊಂದಿರಲಿದೆ.

ಮಹೀಂದ್ರಾ ಎಕ್ಸ್‌ಯುವಿ500 ಭಾರತದಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಮಹೀಂದ್ರಾ ಎಕ್ಸ್‌ಯುವಿ500 ಭಾರತೀಯ ಮಾರುಕಟ್ಟೆಯಲ್ಲಿ ಕಿಯಾ ಸೆಲ್ಟೋಸ್, ಟಾಟಾ ಹ್ಯಾರಿಯರ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ, ಜೀಪ್ ಕಂಪಾಸ್ ಮತ್ತು ಫೋಕ್ಸ್ ವ್ಯಾಗನ್ ಟಿ-ರಾಕ್ ಎಸ್‍ಯುವಿಯುಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications