Just In
- 11 min ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 11 min ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 27 min ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- 1 hr ago ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಸಮಸ್ಯೆ ತಂದಿಟ್ಟ ಪತಿ: ಐಷಾರಾಮಿ ಕಾರುಗಳು ಸೀಜ್!
Don't Miss!
- Movies ತಾತನಿಗೆ ಧನ್ಯಾ ರಾಮ್ಕುಮಾರ್ ಟ್ರಿಬ್ಯೂಟ್; ಕಿಶನ್ ಜೊತೆ ಡ್ಯುಯೆಟ್
- News Summer Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ.. ಇಲ್ಲಿವೆ ಸಲಹೆಗಳು
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಧ್ಯಮ ಗಾತ್ರದ ಎಸ್ಯುವಿ ಕಾರುಗಳಲ್ಲೇ ಬಲಶಾಲಿ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಹೊಸ ಎಕ್ಸ್ಯುವಿ500
ಮಹೀಂದ್ರಾ ಕಂಪನಿಯು ನ್ಯೂ ಜನರೇಷನ್ ಕಾರು ಮಾದರಿಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸಿದ್ದು, ಥಾರ್ ಉನ್ನತೀಕರಣದ ನಂತರ ಸ್ಕಾರ್ಪಿಯೋ ಮತ್ತು ಎಕ್ಸ್ಯುವಿ500 ಕಾರು ಮಾದರಿಗಳನ್ನು ಸಹ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡಗಡೆ ಮಾಡಲಾಗುತ್ತಿದೆ.
ನ್ಯೂ ಜನರೇಷನ್ ಎಕ್ಸ್ಯುವಿ500 ಎಸ್ಯುವಿ ಕಾರು ಮಾದರಿಯನ್ನು ಮಹೀಂದ್ರಾ ಕಂಪನಿಯು ಹಲವಾರು ಹೊಸ ಬದಲಾವಣೆಗಳೊಂದಿಗೆ ಪರಿಚಯಿಸುತ್ತಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸುತ್ತಿರುವ ಮಹೀಂದ್ರಾ ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಕಾರು ಎಕ್ಸ್ಯುವಿ500 ಕಾರು ಮಧ್ಯಮ ಕ್ರಮಾಂಕದ ಎಸ್ಯುವಿ ಮಾದರಿಗಳಲ್ಲೇ ಹಲವು ಹೊಸ ಐಷಾರಾಮಿ ಫೀಚರ್ಸ್ಗಳನ್ನು ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಮಧ್ಯಮ ಗಾತ್ರದ ಎಸ್ಯುವಿ ಕಾರು ಮಾದರಿಗಳಲ್ಲೇ ಬಲಶಾಲಿ ಎಂಜಿನ್ ಆಯ್ಕೆ ಹೊಂದಿರಲಿದೆ.
ನ್ಯೂ ಜನರೇಷನ್ ಮಾದರಿಯು ಪೆಟ್ರೋಲ್ ಎಂಜಿನ್ ಸೇರಿದಂತೆ ಹಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಸದ್ಯಕ್ಕೆ ಬಿಎಸ್-6 ಡೀಸೆಲ್ ಎಂಜಿನ್ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿದೆ.
ಹೊಸ ತಲೆಮಾರಿನ ಎಕ್ಸ್ಯುವಿ500 ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯನ್ನು ಸಹ ನೀಡಲಾಗಿದ್ದು, ಹೊಸ ಕಾರನ್ನು ಮಹೀಂದ್ರಾ ಕಂಪನಿಯ ಹೊಸ ಮೊನೊಕೊಕ್ ಪ್ಲಾಟ್ಫಾರ್ಮ್ನ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.
ನ್ಯೂ ಜನರೇಷನ್ ಮಾದರಿಯಲ್ಲಿ ನವೀಕರಿಸಲಾದ ಮುಂಭಾಗದ ಗ್ರಿಲ್, ಹೊಸ ವಿನ್ಯಾಸದ ಎಲ್ಇಡಿ ಹೆಡ್ಲ್ಯಾಂಪ್ ಮತ್ತು ಹಿಂಭಾಗದಲ್ಲಿ ನವೀಕರಿಸಲಾದ ಬಂಪರ್ ಪ್ರಮುಖ ಆಕರ್ಷಣೆಯಾಗಲಿದ್ದು, ಮಧ್ಯಮ ಗಾತ್ರದ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ. ಹಾಗೆಯೇ ಹೊಸ ಕಾರು ಪ್ರಸ್ತುತ ಮಾದರಿಗಿಂತಲೂ ಭಾರೀ ಬದಲಾವಣೆಯನ್ನು ಪಡೆದುಕೊಂಡಿದ್ದು, ನವೀಕೃತ ಮುಂಭಾಗದ ಗ್ರಿಲ್, ಬ್ಯಾನೆಟ್, ಬಂಪರ್ ಮತ್ತು ಎಲ್ಇಡಿ ಹೆಡ್ಲ್ಯಾಂಪ್ ಕ್ಲಸ್ಟರ್, ಹಿಂಭಾಗದ ಬಂಪರ್, ಟೈಲ್ಗೆಟ್ ವಿನ್ಯಾಸವು ಆಕರ್ಷಕವಾಗಿರಲಿವೆ.
ಹೊಸ ಕಾರಿನ ಒಳಭಾಗದ ತಾಂತ್ರಿಕ ಅಂಶಗಳಲ್ಲೂ ಸಾಕಷ್ಟು ಬದಲಾವಣೆಗೊಳಿಸಲಾಗಿದ್ದು, ವೆಂಟೆಲೆಟೆಡ್ ಆಸನ, ರಿಯಲ್ ಸೀಟ್ ಎಸಿ ವೆಂಟ್ಸ್, ಪನೊರಮಿಕ್ ಸನ್ರೂಫ್, ಮೂರನೇ ಸಾಲಿನಲ್ಲಿ 50:50 ಅನುಪಾತದ ಆಸನಗಳು ಸೇರಿದಂತೆ ಹಲವು ಐಷಾರಾಮಿ ಫೀಚರ್ಸ್ ಹೊಸ ಕಾರಿನಲ್ಲಿರಲಿವೆ.
50:50 ಅನುಪಾತದ ಆಸನಗಳ ಸೌಲಭ್ಯದಿಂದಾಗಿ ಬೂಟ್ ಸ್ಪೆಸ್ ಸೌಲಭ್ಯವನ್ನು ಅಗತ್ಯ ಸಂದರ್ಭಗಳಲ್ಲಿ ವಿಸ್ತರಣೆ ಮಾಡಿಕೊಳ್ಳಬಹುದಾಗಿದ್ದು, ಗ್ರಾಹಕರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 6 ಮತ್ತು 7 ಸೀಟುಗಳ ಆಯ್ಕೆ ಪಡೆದುಕೊಳ್ಳಬಹುದು.
ಇದರೊಂದಿಗೆ ಹೊಸ ಕಾರಿನಲ್ಲಿ ರಡಾರ್ ಸೌಲಭ್ಯವನ್ನು ಅಳವಡಿಸಲಾಗಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ರಸ್ತೆ ಗುಂಡಿಗಳ ಬಗೆಗೆ ಚಾಲಕನಿಗೆ ಎಚ್ಚರಿಸಲಿದೆ. ಈ ಮೂಲಕ ರಸ್ತೆ ಮೇಲೆ ನಿಗಾ ಇಡಲಿರುವ ಹೊಸ ತಂತ್ರಜ್ಞಾನ ಸೌಲಭ್ಯವು ವಾಯ್ಸ್ ಮೂಲಕ ಚಾಲಕನಿಗೆ ಎಚ್ಚರಿಕೆಯ ಸಂದೇಶ ರವಾನಿಸಲಿದ್ದು, ರಿವರ್ಸ್ ಸಂದರ್ಭದಲ್ಲಿ 3ಡಿ ಪನೊರಮಿಕ್ ವ್ಯೂ ಸೌಲಭ್ಯ ಒದಗಿಸುತ್ತದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಈ ಮೂಲಕ ಎಂಜಿ ಹೆಕ್ಟರ್ ಪ್ಲಸ್ ಮತ್ತು ಮುಂಬರುವ ಟಾಟಾ ಸಫಾರಿ ಎಸ್ಯುವಿ ಕಾರುಗಳಿಗೆ ನೇರ ಪೈಪೋಟಿ ನೀಡಲಿರುವ ಹೊಸ ಕಾರು ಮಾದರಿಯು ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ಗಳೊಂದಿಗೆ ಗ್ರಾಹಕರನ್ನು ಗಮನಸೆಳೆಯಲಿವೆ.
ಎಂಜಿನ್ ಮತ್ತು ಪರ್ಫಾಮೆನ್ಸ್
ನ್ಯೂ ಜನರೇಷನ್ ಎಕ್ಸ್ಯುವಿ500 ಕಾರು ಮಾದರಿಯು 180-ಬಿಎಚ್ಪಿ ಪ್ರೇರಿತ 2.2 ಡೀಸೆಲ್ ಎಂಜಿನ್ ಜೊತೆಗೆ 190-ಬಿಎಚ್ಪಿ ಪ್ರೇರಿತ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದ್ದು, ಇದು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಜೀಪ್ ಕಂಪಾಸ್, ಎಂಜಿ ಹೆಕ್ಟರ್ ಪ್ಲಸ್ ಮತ್ತು ಹೊಸದಾಗಿ ಬಿಡುಗಡೆಯಾಗುತ್ತಿರುವ ಟಾಟಾ ಸಫಾರಿ ಕಾರಿಗಿಂತಲೂ ಉತ್ತಮ ಎಂಜಿನ್ ಆಯ್ಕೆ ಎನ್ನಲಾಗಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್ಯುವಿ ಕಾರುಗಳಿವು..!
ಈ ಮೂಲರಕ ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿದ್ದು, ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿವೆ.