ಎಕ್ಸ್‌ಯುವಿ700 ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಎಕ್ಸ್‌ಯುವಿ500
ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಹಲವು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500 ಮಾದರಿಯನ್ನೇ ನ್ಯೂ ಜನರೇಷನ್ ಮಾದರಿಯೊಂದಿಗೆ ಎಕ್ಸ್‌ಯುವಿ700 ಹೆಸರಿನಲ್ಲಿ ಬಿಡುಗಡೆ ಮಾಡುತ್ತಿದೆ.

ಹೊಸ ತಲೆಮಾರಿನ ಎಕ್ಸ್‌ಯುವಿ500 ಕಾರು ಮಾದರಿಯನ್ನು ಎಕ್ಸ್‌ಯುವಿ700 ಮಾದರಿಯಾಗಿ ಮಾರಾಟ ಮಾಡುವ ನಿರ್ಧಾರ ಪ್ರಕಟಿಸಿರುವ ಮಹೀಂದ್ರಾ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಮಾರಾಟದಿಂದ ಸ್ಥಗಿತಗೊಸಲಿದ್ದು, ಎಕ್ಸ್‌ಯುವಿ700 ಬಿಡುಗಡೆಯ ನಂತರವಷ್ಟೇ ಎಕ್ಸ್‌ಯುವಿ 500 ಮಾದರಿಯು ಕೆಲವು ಬದಲಾವಣೆಗಳೊಂದಿಗೆ ಮರು ಮಾರಾಟಗೊಳ್ಳಲಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಗಾಗಿ ಎಕ್ಸ್‌ಯುವಿ500 ಮಾದರಿಯಲ್ಲಿ ಕೆಲವು ಮಹತ್ವದ ಬದಲಾವಣೆ ತರಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಬಿಡುಗಡೆಯಾಗಬೇಕಿರುವ ಎಕ್ಸ್‌ಯುವಿ500 ನ್ಯೂ ಜನರೇಷನ್ ಮಾದರಿಯನ್ನೇ ಹೊಸ ಬದಲಾವಣೆಗಳೊಂದಿಗೆ ಎಕ್ಸ್‌ಯುವಿ700 ಮಾದರಿಯಾಗಿ ಬಿಡುಗಡೆ ಮಾಡುತ್ತಿದೆ.

ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಎಕ್ಸ್700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್‌ಯುವಿ500 ಮಾದರಿಯನ್ನು 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು 7 ಸೀಟರ್ ಸೌಲಭ್ಯವನ್ನು ಹೊಂದಿದ್ದರು ಕೂಡಾ ಹಿಂಬದಿ ಆಸನಗಳು ವಯಸ್ಕ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿಲ್ಲ. ಹೀಗಾಗಿ ಎಕ್ಸ್‌ಯುವಿ700 ಮಾದರಿಯನ್ನು ವಿಸ್ತರಿತ ವೀಲ್ಹ್‌ಬೆಸ್ ಮೂಲಕ ಮೂರನೇ ಸಾಲಿನ ಆಸನವನ್ನು ಹೆಚ್ಚಿಸಿ ಅಭಿವೃದ್ದಿಗೊಳಿಸಲಾಗಿದೆ.

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.

ಇನ್ನು ಮಹೀಂದ್ರಾ ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿಯನ್ನು ಕೂಡಾ ಮಾಡಲಾಗಿದೆ.


Click it and Unblock the Notifications