ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ(Maruti Suzuki) ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಉತ್ಪನ್ನಗಳ ಬಿಡುಗಡೆಯ ಸುಳಿವು ನೀಡಿದ್ದು, ಹೊಸ ಕಾರುಗಳ ಪಟ್ಟಿಯಲ್ಲಿ ನ್ಯೂ ಜನರೇಷನ್ ಮಾದರಿಗಳು ಸಹ ಭಾರೀ ಬದಲಾವಣೆಗಳನ್ನು ಪಡೆದುಕೊಳ್ಳಲಿವೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಕಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 7 ಕಾರು ಮಾದರಿಗಳು ಮುಂಚೂಣಿಯಲ್ಲಿದ್ದು, ಮುಂದಿನ ಎರಡು ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ ಮತ್ತು ವಿಟಾರಾ ಫುಲ್ ಸೈಜ್ ಎಸ್‌ಯುವಿ ಸೇರಿದಂತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ, ಬಲೆನೊ, ಆಲ್ಟೊ ಮತ್ತು ಸ್ವಿಫ್ಟ್ ಕಾರುಗಳ ಹೊಸ ತಲೆಮಾರಿನ ಆವೃತ್ತಿಗಳನ್ನು ಬಿಡುಗಡೆ ಮಾಡಲಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಪ್ರತಿ ಆರು ತಿಂಗಳಿಗೆ ಒಂದರಂತೆ ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಹೊಸ ವಿಟಾರಾ ಬ್ರೆಝಾ ಕಾರು ಮಾದರಿಯನ್ನು ಭಾರೀ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ವಿಟಾರಾ ಬ್ರೆಝಾ ಮಾದರಿಯು 2022ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಎಂಜಿನ್ ನವೀಕರಣದೊಂದಿಗೆ ಹೊಸ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಬಿಎಸ್-6 ಎಮಿಷನ್ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿಯು ಪ್ರಮುಖ ಕಾರುಗಳ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ತಲೆಮಾರಿನ ಕಾರುಗಳ ಪೈಕಿ ಆಲ್ಟೊ, ಬಲೆನೊ ಮತ್ತು ಸ್ವಿಫ್ಟ್ ಸೇರಿದಂತೆ ಹೊಚ್ಚ ಹೊಸ ಕಾರು ಮಾದರಿಯಾದ ವಿಟಾರಾ ಬ್ರೆಝಾ ಎಸ್‌ಯುವಿ ಕೂಡಾ ಒಂದಾಗಿದ್ದು, ಹೊಸ ತಲೆಮಾರಿನ ಮಾದರಿಯು ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರು ಮಾದರಿಗಳಿಗೆ ಭರ್ಜರಿ ಪೈಟೋಟಿ ನೀಡಲಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಈಗಾಗಲೇ ಭಾರತದಲ್ಲಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಹೊಸ ಕಾರಿನ ಡಿಸೈನ್‌ಗಳು ಎಸ್‌ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರಿನಲ್ಲಿ ನವೀಕರಣಗೊಳಿಸಲಾದ ಮುಂಭಾಗದ ವಿನ್ಯಾಸದೊಂದಿಗೆ ಎಲೆಕ್ಟ್ರಿಕ್ ಸನ್‌ರೂಫ್, ಗರಿಷ್ಠ ಸುರಕ್ಷತೆಗಾಗಿ ಹೈ ಎಂಡ್ ಮಾದರಿಗಳಲ್ಲಿ 6 ಏರ್‌ಬ್ಯಾಗ್ ಜೋಡಣೆ ಹೊಂದಿರಲಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಬೇಡಿಕೆ ತಂದುಕೊಡಲಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಜೊತೆಗೆ ಹೊಸ ಕಾರಿನಲ್ಲಿ ಪ್ಯಾಡಲ್ ಶಿಫ್ಟರ್, ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ದೊಡ್ಡ ಟಚ್‌ಸ್ಕ್ರೀನ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ, ಹೊಸ ಮಾದರಿಯ ಮಲ್ಟಿ ಇನ್ಪಾಮೆಷನ್ ಡಿಸ್‌ಪ್ಲೇ ಹೊಂದಿರಲಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಇದರಲ್ಲದೆ 2022ರ ವಿಟಾರಾ ಬ್ರೆಝಾ ಹೆಚ್ಚು ಸುಧಾರಿತ ಕನೆಕ್ಟಿವಿಟಿ ಕಾರು ತಂತ್ರಜ್ಞಾನದೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್, ಕ್ಲೈಮೇಟ್ ಕಂಟ್ರೋಲ್ ಮತ್ತು ಹೆಡ್‌ಲೈಟ್ ಕಂಟ್ರೋಲ್‌ನಂತಹ ವೈಶಿಷ್ಟ್ಯಗಳು ಪಡೆಯುವ ಸಾಧ್ಯತೆಗಳಿವೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ವಿಟಾರಾ ಬ್ರೆಝಾ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.61 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.20 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ತಲೆಮಾರಿನ ಆವೃತ್ತಿಯು ಹಲವು ಹೊಸ ಬದಲಾವಣೆಗಳೊಂದಿಗೆ ತುಸು ದುಬಾರಿಯಾಗಿರಲಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಪ್ರಸ್ತುತ ಮಾರುಕಟ್ಟೆಯಲ್ಲಿ ವಿಟಾರಾ ಬ್ರೆಝಾ ಮಾದರಿಯಲ್ಲಿ ಮಾರುತಿ ಸುಜುಕಿ ಕಂಪನಿಯು ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಆಯ್ಕೆ ನೀಡುತ್ತಿದ್ದು, ಇದು ಉತ್ತಮ ಇಂಧನ ದಕ್ಷತೆ ಹೊಂದಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ತಲೆಮಾರಿನ ಆವೃತ್ತಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ 1.5 ಲೀಟರ್ ಸ್ಮಾರ್ಟ್ ಹೈಬ್ರಿಡ್ ಪೆಟ್ರೋಲ್ ಎಂಜಿನ್‌ನೊಂದಿಗೆ ಸಿಎನ್‌ಜಿ ಮಾದರಿಯನ್ನು ಪರಿಚಯಿಸಬಹುದಾಗಿದ್ದು, ಪೆಟ್ರೋಲ್ ದರ ಹೆಚ್ಚುತ್ತಿರುವ ಪರಿಣಾಮ ಸಿಎನ್‌ಜಿ ಮಾದರಿಯು ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ನ್ಯೂ ಜನರೇಷನ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿದ ನಂತರವೂ ಖರೀದಿದಾರರಲ್ಲಿ ಭಾರಿ ಜನಪ್ರಿಯತೆಯನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದು, ಹೊಸ ತಲೆಮಾರಿನ ಆವೃತ್ತಿಯು ಹೊಸ ಬದಲಾವಣೆಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿದೆ.

Article Published On: Thursday, December 9, 2021, 20:13 [IST]
English summary
New gen maruti suzuki brezza suv could launch by mid 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+