ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಕಾರು ಮಾರಾಟದಲ್ಲಿ ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಉತ್ಪನ್ನಗಳೊಂದಿಗೆ ಮಾರಾಟದಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸುವ ಸುಳಿವು ನೀಡಿದ್ದು, ಬಿಡುಗಡೆಯಾಗಲಿರುವ ನ್ಯೂ ಜನರೇಷನ್ ಮಾದರಿಗಳು ಭಾರೀ ಬದಲಾವಣೆಗಳನ್ನು ಪಡೆದುಕೊಳ್ಳಲಿವೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 7 ಕಾರು ಮಾದರಿಗಳ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಮುಂದಿನ ಎರಡು ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು ಕೋವಿಡ್ ಪರಿಸ್ಥಿತಿ ಚೇತರಿಸಿಕೊಂಡ ನಂತರ ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಒಟ್ಟು ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ಎಸ್‌ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ ಮತ್ತು ವಿಟಾರಾ ಫುಲ್ ಸೈಜ್ ಎಸ್‌ಯುವಿ ಸೇರಿದಂತೆ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಿಟಾರಾ ಬ್ರೆಝಾ, ಬಲೆನೊ, ಆಲ್ಟೊ ಮತ್ತು ಸ್ವಿಫ್ಟ್ ಕಾರುಗಳ ಹೊಸ ತಲೆಮಾರಿನ ಆವೃತ್ತಿಗಳನ್ನು ಬಿಡುಗಡೆ ಮಾಡಲಿದೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಪ್ರತಿ ಆರು ತಿಂಗಳಿಗೆ ಒಂದರಂತೆ ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಹೊಸ ವಿಟಾರಾ ಬ್ರೆಝಾ ಕಾರು ಮಾದರಿಯನ್ನು ಭಾರೀ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ವಿಟಾರಾ ಬ್ರೆಝಾ ಮಾದರಿಯು 2022ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಬಿಎಸ್-6 ಎಮಿಷನ್ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿ ಬಜೆಟ್ ಕಾರುಗಳ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ತಲೆಮಾರಿನ ಕಾರುಗಳ ಪೈಕಿ ಆಲ್ಟೊ, ಬಲೆನೊ ಮತ್ತು ಸ್ವಿಫ್ಟ್ ಸೇರಿದಂತೆ ಹೊಚ್ಚ ಹೊಸ ಕಾರು ಮಾದರಿಯಾದ ವಿಟಾರಾ ಎಸ್‌ಯುವಿ ಕೂಡಾ ಒಂದಾಗಿದ್ದು, ವಿಟಾರಾ ಬ್ರೆಝಾ ಕಾರುಗಳಿಂತಲೂ ವಿಭಿನ್ನವಾಗಿರುವ ವಿಟಾರಾ ಎಸ್‌ಯುವಿ ಕಾರು ಎಸ್ ಕ್ರಾಸ್‌ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಸೌಲಭ್ಯಗಳನ್ನು ಹೊಂದಿರಲಿದೆ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ವಿಟಾರಾ ಎಸ್‌ಯುವಿ ಮಾದರಿಯು 2021ರ ಎರಡನೇ ತ್ರೈಮಾಸಿಕ ಅವಧಿಗೆ ಭಾರತದಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರು ಮಾದರಿಗಳಿಗೆ ಭರ್ಜರಿ ಪೈಟೋಟಿ ನೀಡಲಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಈಗಾಗಲೇ ಭಾರತದಲ್ಲಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದ್ದು, ಹೊಸ ಕಾರಿನ ಡಿಸೈನ್‌ಗಳು ಎಸ್‌ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ಹಾಗೆಯೇ ಹೊಸ ಕಾರಿನಲ್ಲಿ ಎಲೆಕ್ಟ್ರಿಕ್ ಸನ್‌ರೂಫ್, ಗರಿಷ್ಠ ಸುರಕ್ಷತೆಗಾಗಿ 6 ಏರ್‌ಬ್ಯಾಗ್ ಜೋಡಣೆ ಹೊಂದಿರಲಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಹೈ ಎಂಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ವಿಟಾರಾ ಬ್ರೆಝಾ

ವಿಟಾರಾ ಬ್ರೆಝಾ ಕಾರು ಮಾದರಿಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7.39 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.29 ಲಕ್ಷ ಬೆಲೆ ಪಡೆದುಕೊಂಡಿದ್ದು, ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ 1.5-ಲೀಟರ್ ಕೆ15ಬಿ ಪೆಟ್ರೋಲ್ ಎಂಜಿನ್‌ ಆಯ್ಕೆಯೊಂದಿಗೆ ಉತ್ತಮ ಇಂಧನ ದಕ್ಷತೆ ಹೊಂದಿದೆ.

More from DriveSpark

Article Published On: Saturday, May 29, 2021, 20:51 [IST]
English summary
New Suzuki Vitara Unveil Timeline Revealed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+