Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್‌ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಲಿದೆ ಟಾಟಾ ನ್ಯೂ ಜನರೇಷನ್ ಸಫಾರಿ ಎಸ್‌ಯುವಿ
ಟಾಟಾ ಮೋಟಾರ್ಸ್ ಕಂಪನಿಯು ನ್ಯೂ ಜನರೇಷನ್ ಸಫಾರಿ ಎಸ್‌ಯುವಿ ಮಾದರಿಯನ್ನು ಕಳೆದ ವಾರವಷ್ಟೇ ಅನಾವರಣಗೊಳಿಸಿ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ಆಕರ್ಷಕ ಬೆಲೆ ಮತ್ತು ತಾಂತ್ರಿಕ ಅಂಶಗಳನ್ನು ಪಡೆದುಕೊಳ್ಳಬಹುದಾಗಿದೆ.

ಸಫಾರಿ ಹೊಸ ಕಾರು ಮಾದರಿಯು ಟಾಟಾ ಕಂಪನಿಯ OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿದ್ದು, ಮೂರನೇ ಸಾಲಿನ ಆಸನ ಸೌಲಭ್ಯವನ್ನು ಹೊರತುಪಡಿಸಿ ಸದ್ಯ ಮಾರುಕಟ್ಟೆಯಲ್ಲಿರುವ ಹ್ಯಾರಿಯರ್ ಕಾರು ಮಾದರಿಯೆಂತೆಯೇ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಹೊಸ ಸಫಾರಿ ಕಾರು ಮಾದರಿಯು ಒಟ್ಟು ಆರು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಟಿ ಪ್ಲಸ್, ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಪ್ಲಸ್ ವೆರಿಯೆಂಟ್‌ಗಳು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ಬೆಲೆ ಹೊಂದಿರಲಿವೆ.

ಹೊಸ ತಲೆಮಾರಿನ ಸಫಾರಿ ಮಾದರಿಯು ಎಸ್‌ಯುವಿ ಸೆಗ್ಮೆಂಟ್ ಫಸ್ಟ್ ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಸಫಾರಿ ಕಾರು ಹ್ಯಾರಿಯರ್ ಕಾರಿಗಿಂತ 63 ಎಂಎಂ ಹೆಚ್ಚುವರಿ ವೀಲ್ಹ್‌ಬೆಸ್‌ನೊಂದಿಗೆ ಮೂರನೇ ಸಾಲಿನ ಆಸನಗಳನ್ನು ಹೊಂದಿದೆ.

ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಗ್ರಾಹಕರನ್ನು ಆಕರ್ಷಿಸಲಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನಗಳನ್ನು ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನಗಳನ್ನು ಹೊಂದಿದೆ. ಅತ್ಯುತ್ತಮ ಲೆದರ್ ಆಸನಗಳನ್ನು ಅರಾಮದಾಯಕ ಪ್ರಯಾಣಕ್ಕೆ ಅನುಕೂಲಕರವಾಗಿದ್ದು, ಸಾಫ್ಟ್‌ಟಚ್ ಮಟಿರಿಯಲ್‌ಗಳು ಕಾರಿನ ಒಳಭಾಗಕ್ಕೆ ಮತ್ತಷ್ಟು ಐಷಾರಾಮಿ ಲುಕ್ ನೀಡಲಿವೆ.

ಹೊಸ ಕಾರಿನಲ್ಲಿರುವ ಫೀಚರ್ಸ್‌ಗಳು ವೆರಿಯೆಂಟ್‌ಗಳಿಗೆ ಅನುಗುಣವಾಗಿ ಬದಲಾಗಲಿದ್ದು, ಆರಂಭಿಕ ಕಾರು ಮಾದರಿಯಾದ ಎಕ್ಸ್ಇ ಆವೃತ್ತಿಯಲ್ಲಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್, ರೋಲ್ ಓವರ್ ಮಿಟಿಗೇಷನ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಟೆಲಿಸ್ಕೋಪಿಕ್ ಸ್ಟೀರಿಂಗ್ ವೀಲ್ಹ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಪಡೆದುಕೊಂಡಿದೆ.

ಎಕ್ಸ್ಎಂ ಆವೃತ್ತಿಯಲ್ಲಿ ಆರಂಭಿಕ ಮಾದರಿಯಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಫ್ರಂಟ್ ಫಾಗ್ ಲ್ಯಾಂಪ್ಸ್, ರಿಯರ್ ವೈಪರ್, ಫಾಲೋ ಮೀ ಹೋಂ ಹೆಡ್‌ಲೈಟ್ಸ್, ವಿವಿಧ ಡ್ರೈವ್ ಮೋಡ್, 7 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 6 ಸ್ಪೀಕರ್ಸ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್ ಸೌಲಭ್ಯಗಳಿವೆ.

ಎಕ್ಸ್‌ಟ್ ಆವೃತ್ತಿಯಲ್ಲಿ ಆರಂಭಿಕ ಮಾದರಿಗಳಲ್ಲಿ ಕೆಲವು ಫೀಚರ್ಸ್‌ಗಳ ಜೊತೆಗೆ ಟೈರ್ ಪ್ರೆಷರ್ ಮಾನಿಟರ್, ಆಟೋ ಡಿಮ್ಮಿಂಗ್ ಇನ್‌ಸೈಡ್ ರಿಯರ್ ವ್ಯೂ ಮಿರರ್, 18-ಇಂಚಿನ ಅಲಾಯ್ ವೀಲ್ಹ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಹೆಡ್‌ಲೈಟ್ಸ್ ಮತ್ತು ವೈಪರ್ಸ್, ಪವರ್ ಫೋಲ್ಡಿಂಗ್ ಮತ್ತು ಹೊಂದಾಣಿಕೆ ಮಾಡಬಹುದಾದ ವಿಂಗ್ ಮಿರರ್, ಕೀ ಲೆಸ್ ಎಂಟ್ರಿ, ಆ್ಯಂಬಿಯೆಂಟ್ ಮೋಡ್ ಮತ್ತು ಐರಾ ಕಾರ್ ಕನೆಕ್ಟ್ ಟೆಕ್ನಾಲಜಿ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಕ್ಸ್‌ಟ್ ಪ್ಲಸ್ ಮತ್ತು ಎಕ್ಸ್‌ಜೆಡ್ ಆವೃತ್ತಿಗಳಲ್ಲಿ ಆರಂಭಿಕ ಮಾದರಿಗಳಲ್ಲಿ ಫೀಚರ್ಸ್‌ನೊಂದಿಗೆ ಪನೊರಮಿಕ್ ಸನ್‌ರೂಫ್, ಸೈಡ್ ಕರ್ಟೈನ್ ಏರ್‌ಬ್ಯಾಗ್, ಹಿಲ್ ಡಿಸೆಂಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, 18-ಇಂಚಿನ ಮಷಿನ್ ಕಟ್ ಅಯಾಲ್ ವೀಲ್ಹ್, ಜೆಕ್ಸಾನ್ ಹೆಚ್‌ಡಿಐ ಹೆಡ್‌ಲೈಟ್ಸ್, ಫ್ರಂಟ್ ಫಾಗ್ ಲೈಟ್ಸ್, ಕಾರ್ನರಿಂಗ್ ಫಂಕ್ಷನ್, ಟೆರೈನ್ ರೆನ್ಪಾನ್ಸ್ ಮೋಡ್, 8.8 ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ.

ಜೊತೆಗೆ 7 ಇಂಚಿನ ಡಿಜಿಟಲ್ ಡಿಸ್‌ಪ್ಲೇ, 9 ಜೆಬಿಎಲ್ ಸ್ಪೀಕರ್ಸ್ 6 ಹಂತಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಮತ್ತು ಹೈ ಎಂಡ್ ಮಾದರಿಯಲ್ಲಿ ಮಾತ್ರ ಪನೊರಮಿಕ್ ಸನ್‌ರೂಫ್ ಸೌಲಭ್ಯ ನೀಡಲಾಗಿದ್ದು, ಹೊಸ ಕಾರಿನಲ್ಲಿ ಅಳವಡಿಸಲಾಗಿರುವ 170 ಬಿಎಚ್‌ಪಿ ಪ್ರೇರಿತ 2.0-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸಹ ಹ್ಯಾರಿಯರ್‌ನಿಂದ ಎರವಲು ಪಡೆದುಕೊಳ್ಳಲಾಗಿದೆ.
MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೀಗಾಗಿ ಹೊಸ ಕಾರು ಹ್ಯಾರಿಯರ್‌ಗಿಂತ ರೂ.1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಮಾಹಿತಿಗಳ ಪ್ರಕಾರ ಹೊಸ ಸಫಾರಿ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 22 ಲಕ್ಷ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.