Just In
Don't Miss!
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ನ್ಯೂ ಜನರೇಷನ್ ಪೊಲೊ ಕಾರನ್ನು ಅಭಿವೃದ್ಧಿ ಪಡಿಸುತ್ತಿದೆ. ಇದು ಆರನೇ ತಲೆಮಾರಿನ ಪೊಲೊ ಆಗಿರುತ್ತದೆ, ಪೊಲೊ ಮಾದರಿಯು ಜಾಗಾತಿಕ ಮಟ್ಟದಲ್ಲಿ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.

ಇಂಡಿಯಾ-ಸ್ಪೆಕ್ ಹೊಸ ಫೋಕ್ಸ್‌ವ್ಯಾಗನ್ ಪೊಲೊ ಕಾರು ಸಬ್-4 ಮೀಟರ್ ಉದ್ದವಿರುತ್ತದೆ ಮತ್ತು ಇದು ಸ್ಥಳೀಯ ಎಂಕ್ಯೂಬಿ-ಅಒ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿ ತಯಾರಿಸಲಾಗುತ್ತದೆ. ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಕಾರು ಮುಂದಿನ ವರ್ಷದ ಅಂತ್ಯದಲ್ಲಿ ಅಥವಾ 2023ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು. ಆದರೆ ಫೋಕ್ಸ್‌ವ್ಯಾಗನ್ ಕಂಪನಿಯು ಪೊಲೊ ಕಾರಿನ ಬಿಡುಗಡೆಯ ಬಗ್ಗೆ ಯಾವುದೇ ಮಾಹಿತಿಗಳನ್ನು ಬಹಿರಂಗವಾಗಿಲ್ಲ.

ಪೊಲೊ ಕಾರು ಎಂಕ್ಯೂಬಿ-ಅಒ ಮಾಡ್ಯುಲರ್ ಮತ್ತು ವೇರಿಯಬಲ್ ಪ್ಲಾಟ್‌ಫಾರ್ಮ್ ಎಂದು ಹೇಳಿಕೊಳ್ಳಲಾಗಿದ್ದು, ಇದು ಹಲವಾರು ನವೀನ ಸಹಾಯ ಮತ್ತು ಸುರಕ್ಷತಾ ತಂತ್ರಜ್ಙಾನಗಳನ್ನು ಹೊಂದಿಕೊಳ್ಳುತ್ತದೆ. ಇದು ಹೆಚ್ಚಿನ ಸಾಮರ್ಥ್ಯದ ಉಕ್ಕುಗಳನ್ನು ಬಳಸುತ್ತದೆ. ಅದು ಗಮನಾರ್ಹವಾಗಿ ಹಗುರವಾಗಿರುತ್ತದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಭಾರತದಲ್ಲಿ ಬಿಡುಗಡೆಯಾಗಲಿರುವ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಿಲ್ಲ. ಆದರೆ ಪೊಲೊ ಕಾರಿನ ಹೊರಭಾಗದ ವಿನ್ಯಾಸವು ಜಾಗತಿಕ ಮಾದರಿಯಂತೆಯೇ ಇರಬಹುದು ಎಂದು ನಿರೀಕ್ಷಿಸುತ್ತೇವೆ.

ಈ ಹ್ಯಾಚ್‌ಬ್ಯಾಕ್ ನಲ್ಲಿ ಆಪಲ್ ಕಾರ್ ಪ್ಲೇ ಆಂಡ್ರಾಯ್ಡ್ ಆಟೋ ಕನಕ್ಟಿವಿಟಿ ಹೊಂದಿರುವ 6.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಎಸಿ ವೆಂಟ್ಸ್, ಸೆನ್ಸಸರಿಗ್ ವೈಪರ್‌ಗಳು, ಕಾರ್ನರಿಂಗ್ ಲೈಟ್ಸ್ ಅನ್ನು ಹೊಂದಿರುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇದರೊಂದಿಗೆ ಕಾರ್ನರಿಂಗ್ ಲೈಟ್, ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್, ಆಂಬಿಯೆಂಟ್ ಲೈಟ್‌ಗಳು ಮತ್ತು ಹೆಚ್ಚಿನ ಫೀಚರ್ ಗಳನ್ನು ಹೊಂದಿರುತ್ತದೆ. ಇನ್ನು ಸುರಕ್ಷತೆಗಾಗಿ ಡ್ಯುಯಲ್ ಫ್ರಂಟಲ್ ಏರ್‌ಬ್ಯಾಗ್‌ಗಳು, ಎಬಿಎಸ್ ವಿಥ್ ಇಬಿಡಿ, ಆಟೋ-ಡಿಮ್ಮಿಂಗ್ ಐಆರ್ವಿಎಂ, ಆಂಟಿ ಪಿಂಚ್ ಪವರ್ ವಿಂಡೋಸ್, ರಿಯರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿದೆ.

ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಕಾರು ಎರಡು ಪೆಟ್ರೋಲ್ ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ. ಇದರಲ್ಲಿ 1.0 ಎಲ್ ಎಂಪಿಐ ಎಂಜಿನ್ 76 ಬಿಹೆಚ್‍ಪಿ ಪವರ್ ಮತ್ತು 95 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು 1.0 ಎಲ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಹಿಂದಿನದನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ಗೆ ಜೋಡಿಸಿದರೆ, ಟರ್ಬೊ-ಪೆಟ್ರೋಲ್ ಯುನಿಟ್ ಅನ್ನು 6-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಹೊಂದಬಹುದು.

ಇನ್ನು ಫೋಕ್ಸ್‌ವ್ಯಾಗನ್ ಕಂಪನಿಯು ವೆಂಟೊ ಸೆಡಾನ್ ಕಾರನ್ನು ಹೊಸ ಬದಲಾವಣೆಯೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ತಲೆಮಾರಿನ ವೆಂಟೊ ಕಾರು ಮುಂದಿನ ವರ್ಷಾಂತ್ಯದಲ್ಲಿ ಬಿಡುಗಡೆಯಗಬಹುದೆಂದು ನಿರೀಕ್ಷಿಸುತ್ತೇವೆ. ಫೋಕ್ಸ್‌ವ್ಯಾಗನ್ ಕಂಪನಿಯು ವೆಂಟೊ ಸೆಡಾನ್ ಕಾರಿನ ಬಿಡುಗಡೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ ಪೊಲೊದಂತೆ ವೆಂಟೊ ಕೂಡ ಹೊಸ ರೂಪದಲ್ಲಿ ಬಿಡುಗಡೆಯಾಗುತ್ತದೆ.

ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಕಾರಿನ ಬೆಲೆಯು ಪ್ರಸ್ತುತ ಮಾದರಿಗಿಂತ ತುಸು ದುಬಾರಿಯಾಗಿರುತ್ತದೆ. ಈ ಪೊಲೊ ಸುಧಾರಿತ ಸ್ಟೈಲಿಂಗ್, ನವೀಕರಿಸಿದ ಒಳಾಂಗಣ ಮತ್ತು ಹೆಚ್ಚಿನ ವೈಶಿಷ್ಟ್ಯಗಳಿಂದ ಕೂಡಿರುತ್ತದೆ.

ಒಟ್ಟಾರೆಯಾಗಿ ನ್ಯೂ ಜನರೇಷನ್ ಫೋಕ್ಸ್‌ವ್ಯಾಗನ್ ಪೊಲೊ ಹೊಸ ಅವತರದಲ್ಲಿ ಭಾರತದಲ್ಲಿ ಬಿಡುಗಡೆಯಾಗಬಹುದು. ಈ ಪೊಲೊ ಮಾದರಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಐ20 ಮತ್ತು ಟಾಟಾ ಆಲ್ಟ್ರೊಜ್ ಕಾರುಗಳುಗೆ ಪೈಪೋಟಿ ನೀಡುತ್ತದೆ.