ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಬಹುನಿರೀಕ್ಷಿತ 2022ರ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯನ್ನು ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಅನಾವರಣಗೊಳಿಸಿತು. ಫೇಸ್‌ಲಿಫ್ಟೆಡ್ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯು ಈ ವರ್ಷದ ಕೊನೆಯಲ್ಲಿ ಕೆಲವು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಮಿಡ್-ಲೈಫ್ ಅಪ್‌ಡೇಟ್‌ನೊಂದಿಗೆ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯು ಮಾರುಕಟ್ಟೆಯಲ್ಲಿ ಮಾರಾಟವಾಗುವ ಮಾದರಿಗಿಂತ ಸಾಕಷ್ಟು ಬದಲಾವಣೆಗಳನ್ನು ಹೊಂದಿದೆ, ಈ ಹೊಸ ಕಾರಿನ ಹೊರಭಾಗದಲ್ಲಿ ಮತ್ತು ಒಳಭಾಗದಲ್ಲಿಯು ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಈ ಹೊಸ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯ ಮುಂದಿನ ವರ್ಷದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯ ಪ್ರಮುಖ ಬದಲಾವಣೆಗಳ ಬಗ್ಗೆ ಇಲ್ಲಿ ನೋಡೋಣ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ವಿನ್ಯಾಸ

2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯಲ್ಲಿ ಮರುವಿನ್ಯಾಸಗೊಳಿಸಲಾದ ಮುಂಭಾಗದ ಫಾಸಿಕವನ್ನು ಒಳಗೊಂಡಿದೆ, ಇದರಲ್ಲಿ ಹೊಸ ಎಲ್ಇಡಿ ಹೆಡ್‌ಲ್ಯಾಂಪ್‌ಗಳುಮತ್ತು ಎಲ್‌ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಇನ್ನು ಇದರೊಂದಿಗೆ ಸಂಯೋಜಿತ ಎಲ್‌ಇಡಿ ಸ್ಟ್ರಿಪ್‌ನೊಂದಿಗೆ ಮರುಹೊಂದಿಸಲಾದ ಗ್ರಿಲ್ ಮತ್ತು ಹೊಸ ಬಂಪರ್ ಅನ್ನು ಹೊಂದಿದೆ.ರೂಪಾಂತರವನ್ನು ಅವಲಂಬಿಸಿ ಈ ಹೊಸ ಎಸ್‍ಯುವಿಯು 17 ಇಂಚುಗಳಿಂದ 20 ಇಂಚುಗಳಷ್ಟು ಗಾತ್ರದ ಅಲಾಯ್ವ್ಹೀಲ್ ಗಳನ್ನು ಪಡೆಯುತ್ತದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಹಿಂಭಾಗದಲ್ಲಿ ಟೈಲ್‌ಗೇಟ್‌ನಲ್ಲಿ ಟಿಗ್ವಾನ್ ಬ್ಯಾಡ್ಜ್ ಅನ್ನು ನೀಡಲಾಗಿದೆ. ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯು ಕಿಂಗ್ಸ್ ರೆಡ್ ಮೆಟಾಲಿಕ್ ಮತ್ತು ಓನಿಕ್ಸ್ ವೈಟ್ ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಆಯಾಮಗಳು

ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯು ಇದೀಗ ಮಾರುಕಟ್ಟೆಯಲ್ಲಿ ಮಾರಾಟವಾಗುವ ಮಾದರಿಗಿಂತ 20 ಮಿ.ಮೀ ಹೆಚ್ಚು ಉದ್ದವಿದೆ. ಇನ್ನು ಈ ಎಸ್‍ಯುವಿಯು ಯಾವುದೇ ಗಮನಾರ್ಹ ಯಾಂತ್ರಿಕ ಬದಲಾವಣೆಗಳಿಗೆ ಒಳಗಾಗದ ಕಾರಣ ಇಂಟಿರಿಯರ್ ಸ್ಪೇಸ್ ಬದಲಾಗದೆ ಉಳಿದಿದೆ ಎಂದು ವರದಿಯಾಗಿದೆ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಇಂಟಿರಿಯರ್

2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಸೂಕ್ಷ್ಮ ಬದಲಾವಣೆಗಳನ್ನು ಮಾತ್ರ ಹೊಂದಿವೆ. ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ 10 ಇಂಚಿನ ಡಿಜಿಟಲ್ ಕಾಕ್ಪಿಟ್ ಪ್ರೊ ಯುನಿಟ್ ಅನ್ನು ನವೀಕರಿಸಲಾಗಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಎಂಐಬಿ3 ಇನ್ಫೋಟೈನ್‌ಮೆಂಟ್ ಸಿಸ್ಟಂ ಬೇಸ್ ಟ್ರಿಮ್ ಹೊರತುಪಡಿಸಿ ಎಲ್ಲಾ ರೂಪಾಂತರಗಳಲ್ಲಿ ಲಭ್ಯವಿದೆ, ಇನ್ನು ಈ ಎಸ್‍ಯುವಿಯಲ್ಲಿ ವೈರ್‌ಲೆಸ್ ಆಪ್-ಕನೆಕ್ಟ್ ಅನ್ನು ಒಳಗೊಂಡಿದೆ. ಅಲ್ಲದೇ ಕ್ಲೈಮೇಂಟ್ ಕಂಟ್ರೋಲ್ ಅನ್ನು ಟಚ್ ಮೂಲಕ ನಿಯಂತ್ರಿಸಬಹುದು.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಫೀಚರ್ಸ್

ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಯಲ್ಲಿ ಹೀಟೆಡ್ ಸೀಟುಗಳು, ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಕ್ಯಾಬಿನ್ ಲೈಟಿಂಗ್ ಮತ್ತು ಪ್ರೀಮಿಯಂ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್‌ನಂತಹ ಸಾಕಷ್ಟು ಫೀಚರ್ಸ್ ಗಳನ್ನು ಒಳಗೊಂಡಿದೆ.

ಪ್ರಮುಖ ಬದಲಾವಣೆಗಳೊಂದಿಗೆ ಬಿಡುಗಡೆಯಾಗಲಿದೆ 2022ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿ

ಸುರಕ್ಷತಾ ಫೀಚರ್ಸ್

ಈ ಹೊಸ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಫಾರ್ವರ್ಡ್ ಕಾಲಿಷನ್ ವಾರ್ನಿಂಗ್, ಹಿಂದಿನ ಟ್ರಾಫಿಕ್ ಅಲರ್ಟ್, ಬ್ಲೈಂಡ್-ಸ್ಪಾಟ್ ಮಾನಿಟರಿಂಗ್, ಲೇನ್-ಕೀಪ್ ಅಸಿಸ್ಟ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಪಾರ್ಕಿಂಗ್ ಅಸಿಸ್ಟ್, ರೋಡ್ ಸೈನ್ ಗುರುತಿಸುವಿಕೆಯನ್ನು ಒಳಗೊಂಡಂತಹ ಹಲವಾರು ಫಿಚರ್ಸ್ ಗಳನ್ನು ಹೊಂದಿವೆ.

More from DriveSpark

Article Published On: Saturday, May 15, 2021, 15:40 [IST]
English summary
2022 Volkswagen Tiguan Allspace Unveiled – Top Changes. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+