ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು ತನ್ನ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ. ಈ 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಮಾರುತಿ ಸುಜುಕಿ ಶೀಘ್ರದಲ್ಲೇ ನ್ಯೂ ಜನರೇಷನ್ ಸೆಲೆರಿಯೊವನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಬಹುದು ಎಂದು ವರದಿಗಳಾಗಿದೆ. ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಹಲವು ಬಾರಿ ರೋಡ್ ಟೆಸ್ಟ್ ನಡೆಸಿದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಎರಡನೇ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು 2021ರ ಏಪ್ರಿಲ್-ಮೇ ತಿಂಗಳುಗಳ ಅವಧಿಯ ನಡುವೆ ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ಕರೋನಾ ಸೋಂಕಿನ ಹೆಚ್ಚಳದಿಂದ ಈಗ ವಿಳಂಬವಾಗಿದೆ. ಆದರೆ ಈ ಹೊಸ ಸೆಲೆರಿಯೊ ಕಾರು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆಗಳಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಆದರೆ ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. 2021ರ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹರ್ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಇದನ್ನು ಅಭಿವೃದ್ದಿಪಡಿಸಲಾಗುತ್ತದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

2021ರ ಮಾರುತಿ ಸುಜುಕಿ ಸೆಲೆರಿಯೊದಲ್ಲಿ ಎಂಜಿನ್ ಅನ್ನು ಬದಲಾಯಿಸಲಾಗಿದೆ. ಇದರಲ್ಲಿ ಹೊಸ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 83 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಹೊಂದಿರಬಹುದು. ಈ ಎಂಜಿನ್ 68 ಬಿಹೆಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇನ್ನು ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ನೀಡಲಾಗುತ್ತದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಈ ಮಾರುತಿ ಸೆಲೆರಿಯೊ ಹೊಸದಾಗಿ ವಿನ್ಯಾಸಗೊಳಿಸಿದೆ. ಮುಂಭಾಗದಲ್ಲಿ ಸಣ್ಣ ಗ್ರಿಲ್ ಮತ್ತು ಏರ್ ಡ್ಯಾಮ್, ಹ್ಯಾಲೊಜೆನ್ ಹೆಡ್‌ಲ್ಯಾಂಪ್‌ಗಳು, ಡೋರ್ ಹ್ಯಾಂಡಲ್‌ಗಳು, ನವೀಕರಿಸಿದ ಬಂಪರ್ ಮತ್ತು ಟ್ವೀಕ್ಡ್ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿರುತ್ತದೆ.

MOST READ: ಫೆಬ್ರವರಿ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಡೀಸೆಲ್ ಕಾರುಗಳಿವು

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

2021ರ ಸೆಲೆರಿಯೊ ಹ್ಯಾಚ್‌ಬ್ಯಾಕ್ ನಲ್ಲಿ 7.0-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಒಳಗೊಂಡಿರುತ್ತದೆ.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಇನ್ನು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಲಾಗುವುದಿಲ್ಲ. ಆದರೆ ಡ್ಯಾಶ್‌ಬೋರ್ಡ್, ಸ್ಟೀಯರಿಂಗ್ ವೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗುತ್ತದೆ. 2021ರ ಮಾರುತಿ ಸೆಲೆರಿಯೊ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು ಹೆಚ್ಚಿನ ಪ್ರೀಮಿಯಂ ಫೀಚರ್ ಗಳನ್ನು ಕೂಡ ಒಳಗೊಂಡಿರಬಹುದು.

ಬಿಡುಗಡೆಯ ಸನಿಹದಲ್ಲಿ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರು

ಈ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಸ್ಟ್ಯಾಂಡರ್ಡ್ ಸೀಟ್‌ಬೆಲ್ಟ್ ಅಲರ್ಟ್, ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡೆಲವೆರಿಯೊಂದಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿವರ್ಸ್ ಕ್ಯಾಮೆರಾ ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಅನ್ನು ಕೂಡ ಹೊಂದಿರುತ್ತದೆ. ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಇದು ಕೂಡ ಒಂದಾಗಿದೆ.

Most Read Articles

Kannada
English summary
New-Generation Maruti Suzuki Celerio India Launch Soon. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X