Just In
- 3 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 6 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 6 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 8 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Movies Bhagyalakshmi: ಕೆಲಸ ಹುಡುಕುವುದೇ ಭಾಗ್ಯಾಗೆ ಸವಾಲು; ಶ್ರೇಷ್ಠಾಳಿಂದ ತಾಂಡವ್ಗಿಲ್ಲ ಉಳಿಗಾಲ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನ್ಯೂ ಜನರೇಷನ್ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್ಯುವಿ ಬಿಡುಗಡೆಗೆ ಸಜ್ಜಾದ ಮಾರುತಿ ಸುಜುಕಿ
ಮಾರುತಿ ಸುಜುಕಿ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಅಗ್ರಸ್ಥಾನದಲ್ಲಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಉತ್ಪನ್ನಗಳೊಂದಿಗೆ ಕಾರು ಮಾರಾಟದಲ್ಲಿ ಅಧಿಪತ್ಯವನ್ನು ಮುಂದುವರಿಸುವ ಸುಳಿವು ನೀಡಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಹಲವಾರು ಮಾದರಿಗಳ ಮಾರಾಟವನ್ನು ಹೊಂದಿರುವ ಮಾರುತಿ ಸುಜುಕಿಯು ಟಾಪ್ 10 ಕಾರುಗಳ ಮಾರಾಟ ಪಟ್ಟಿಯಲ್ಲಿ ಒಟ್ಟು 6 ಕಾರು ಮಾದರಿಗಳ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದು, ಮುಂದಿನ 3 ವರ್ಷಗಳ ಅವಧಿಗಾಗಿ ಮತ್ತಷ್ಟು ಹೊಸ ಕಾರು ಉತ್ಪನ್ನಗಳನ್ನು ಬಿಡುಗಡೆಗಾಗಿ ಸಿದ್ದತೆ ನಡೆಸುತ್ತಿದೆ. ಮಾಹಿತಿಗಳ ಪ್ರಕಾರ ಮಾರುತಿ ಕಂಪನಿಯು 2021ರ ಆರಂಭದಿಂದ 2023ರ ಅಂತ್ಯದೊಳಗೆ ಒಟ್ಟು ಆರು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ಹೊಸ ಎಸ್ಯುವಿ ಕಾರುಗಳ ಪಟ್ಟಿಯಲ್ಲಿ ಮೆಡ್ ಇನ್ ಇಂಡಿಯಾ ಜಿಮ್ನಿ, ಎರಡನೇ ತಲೆಮಾರಿನ ವಿಟಾರಾ ಬ್ರೆಝಾ ಕಂಪ್ಯಾಕ್ಟ್ ಎಸ್ಯುವಿ, ವಿಟಾರಾ ಫುಲ್ ಸೈಜ್ ಎಸ್ಯುವಿ ಸೇರಿದಂತೆ ತಲಾ ಒಂದೊಂದು ಕ್ರಾಸ್ ಓವರ್ ಎಸ್ಯುವಿ, ಹೊಚ್ಚ ಹೊಸ ಕಂಪ್ಯಾಕ್ಟ್ ಎಸ್ಯುವಿ ಮತ್ತು ಎಂಪಿವಿ ಕಾರು ಮಾದರಿಯು ಬಿಡುಗಡೆಯ ಪಟ್ಟಿಯಲ್ಲಿವೆ.
ಪ್ರತಿ ಆರು ತಿಂಗಳಿಗೆ ಒಂದರಂತೆ ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಮಾರುತಿ ಸುಜುಕಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೇಡಿಕೆಯಲ್ಲಿರುವ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರಿಗೆ ಪೈಪೋಟಿಯಾಗಿ ಹೊಸ ವಿಟಾರಾ ಬ್ರೆಝಾ ಕಾರು ಮಾದರಿಯನ್ನು ಭಾರೀ ಬದಲಾವಣೆಗಳೊಂದಿಗೆ ಅಭಿವೃದ್ದಿಗೊಳಿಸುತ್ತಿದೆ.
ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿರುವ ಹೊಸ ವಿಟಾರಾ ಬ್ರೆಝಾ ಮಾದರಿಯು 2022ರ ಆರಂಭದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಬಿಎಸ್-6 ಎಮಿಷನ್ ಜಾರಿ ನಂತರ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸಿರುವ ಮಾರುತಿ ಸುಜುಕಿ ಬಜೆಟ್ ಕಾರುಗಳ ಮಾದರಿಗಳ ಮಾರಾಟದ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.
ಹೊಸ ಎಮಿಷನ್ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿರುವ ಮಾರುತಿ ಸುಜುಕಿ ಕಂಪನಿಯು ಪೆಟ್ರೋಲ್, ಪೆಟ್ರೋಲ್ ಸ್ಮಾರ್ಟ್ ಹೈಬ್ರಿಡ್ ಮತ್ತು ಸಿಎನ್ಜಿ ಕಾರುಗಳ ಮೇಲೆ ಹೆಚ್ಚು ಒತ್ತು ನೀಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿದೆ.
ಇದರಲ್ಲಿ ಹೊಸ ತಲೆಮಾರಿನ ಆಲ್ಟೊ ಸೇರಿದಂತೆ ಹೊಚ್ಚ ಹೊಸ ಕಾರು ಮಾದರಿಯಾದ ವಿಟಾರಾ ಎಸ್ಯುವಿ ಕೂಡಾ ಒಂದಾಗಿದೆ. ವಿಟಾರಾ ಬ್ರೆಝಾ ಕಾರುಗಳಿಂತಲೂ ವಿಭಿನ್ನವಾಗಿರುವ ವಿಟಾರಾ ಎಸ್ಯುವಿ ಕಾರು ಎಸ್ ಕ್ರಾಸ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಸೌಲಭ್ಯಗಳನ್ನು ಹೊಂದಿರಲಿದೆ.
ಹೊಸ ವಿಟಾರಾ ಎಸ್ಯುವಿ ಮಾದರಿಯು 2021ರ ಎರಡನೇ ತ್ರೈಮಾಸಿಕ ಅವಧಿಗೆ ಭಾರತದಲ್ಲಿ ಬಿಡುಗಡೆಗೊಳ್ಳುವ ಸಾಧ್ಯತೆಗಳಿದ್ದು, ಈ ಕಾರು ಕೂಡಾ ಕಿಯಾ ಸೆಲ್ಟೊಸ್ ಮತ್ತು ಹ್ಯುಂಡೈ ಕ್ರೆಟಾ ಕಾರು ಮಾದರಿಗಳಿಗೆ ಭರ್ಜರಿ ಪೈಟೋಟಿ ನೀಡಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಈಗಾಗಲೇ ಭಾರತದಲ್ಲಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ನಡೆಸಲಾಗಿದ್ದು, ಹೊಸ ಕಾರಿನ ಡಿಸೈನ್ಗಳು ಎಸ್ಯುವಿ ಪ್ರಿಯರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.
ಮಾರುತಿ ಸುಜುಕಿ ಕಂಪನಿಯು ಈ ಹಿಂದಿನ ವಿಟಾರಾ ಗ್ರ್ಯಾಂಡ್ ಎಸ್ಯುವಿ ಮಾರಾಟದಲ್ಲಿ ಆದ ಹಿನ್ನಡೆಯನ್ನು ಹೊಸ ಕಾರಿನ ಮೂಲಕ ಸುಧಾರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದು, ಹೊಸ ಕಾರಿನ ಮೂಲಕ ಮಧ್ಯಮ ಕ್ರಮಾಂಕದ ಎಸ್ಯುವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ಯೋಜನೆಯಲ್ಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಮಿಡ್ ರೇಂಜ್ ಎಸ್ಯುವಿ ವೈಶಿಷ್ಟ್ಯತೆ ಹೊಂದಿರುವ ವಿಟಾರಾ ಕಾರು ಹತ್ತು ಹಲವು ಐಷಾರಾಮಿ ಫೀಚರ್ಸ್ಗಳನ್ನು ಹೊಂದಿದ್ದು, ಹೊಸ ಕಾರು ಮಾರುತಿ ಸುಜುಕಿ ಕಂಪನಿಗೆ ಮತ್ತಷ್ಟು ಜನಪ್ರಿಯತೆ ತಂದುಕೊಡಲಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ವಿಟಾರಾ ಕಾರು 5 ಸೀಟರ್ ಮತ್ತು 7 ಸೀಟರ್ ಆವೃತ್ತಿಯಲ್ಲಿ ಬರಲಿದೆ ಎನ್ನಲಾಗಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳ ಬಗೆಗೆ ಯಾವುದೇ ನಿಖರ ಮಾಹಿತಿಗಳಿಲ್ಲ.