ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಭಾರತದಲ್ಲಿ ಲಾಕ್‌ಡೌನ್‌ಗಳು ಸಡಿಲಗೊಳ್ಳುತ್ತಿರುವುದರಿಂದ ವಾಹನಗಳ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿದೆ. ಇದರಿಂದ ಭಾರತೀಯ ಮಾರುಕಟ್ಟೆಯಲ್ಲಿ ಹಲವಾರು ಜನಪ್ರಿಯ ವಾಹನ ತಯಾರಕ ಕಂಪನಿಗಳಿ ತಮ್ಮ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದ್ದಾರೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟದಲ್ಲಿ ಚೇತರಿಕೆಯನ್ನು ಕಂಡಿದೆ. ಇದರಲ್ಲಿ ಕೈಗೆಟುಕುವ ಹ್ಯಾಚ್‌ಬ್ಯಾಕ್‌ಗಳು ಮಾರಾಟದ ಸಂಖ್ಯೆಯು ಹೆಚ್ಚಾಗಿದೆ. ಭಾರತದಲ್ಲಿ ಶೀಘ್ರದಲ್ಲೇ ಕೆಲವು ಹೊಸ ಹ್ಯಾಚ್‌ಬ್ಯಾಕ್‌ಗಳು ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಇದರಲ್ಲಿ ಕೆಲವು ಹ್ಯಾಚ್‌ಬ್ಯಾಕ್‌ ಕಾರುಗಳು ಭಾರತದಲ್ಲಿ ಈಗಾಗಲೇ ಸ್ಪಾಟ್ ಟೆಸ್ಟ್ ಕೂಡ ನಡೆಸಲಾಗಿದೆ. ಭಾರತೀಯ ಬಿಡುಗಡೆಯಾಗಲಿರುವ ಹ್ಯಾಚ್‌ಬ್ಯಾಕ್‌ ಕಾರುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಮಾರುತಿ ಸೆಲೆರಿಯೊ

ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗಿದೆ. ಹೊಸ ಸೆಲೆರಿಯೊ ಮಾದರಿಯು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಇದನ್ನು ತಯಾರಿಸಲಾಗಿದೆ. ಈ ಹೊಸ ಕಾರಿನಲ್ಲಿ ಎಂಜಿನ್ ಅನ್ನು ಬದಲಾಯಿಸಬಹುದು, ಇದರಲ್ಲಿ ಹೊಸ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು, ಈ ಎಂಜಿನ್ 83 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಈ ಎಂಜಿನ್ 68 ಬಿಹೆಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಲ್ಲಾ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಟಾಟಾ ಟಿಯಾಗೋ ಸಿಎನ್‌ಜಿ

ಟಾಟಾ ಕಾರುಗಳು ಸುರಕ್ಷತೆ ಮತ್ತು ಗುಣಮಟ್ಟ(ಬಿಲ್ಡ್ ಕ್ವಾಲಿಟಿ) ಗಳಿಗೆ ಹೆಚ್ಚಿನ ಜನಪ್ರಿಯತೆಯನ್ನು ಗಳಿಸಿದೆ. ಟಾಟಾದ ಸಿಎನ್‌ಜಿ ಕಾರುಗಳ ವಿಭಾಗದಲ್ಲಿ ಯಾವ ಮಾದರಿಗೆ ಫಾಕ್ಟರಿ ಪಿಟಡ್ ಸಿಎನ್‌ಜಿ ಕಿಟ್‌ಗಳನ್ನು ಅಳವಡಿಸುತ್ತಾರೆ ಎಂಬುದು ಮಾಹಿತಿ ಇಲ್ಲ. ಆದರೆ ಟಾಟಾದ ಎಂಟ್ರಿ ಲೆವೆಲ್ ಮಾದರಿಗಳಾದ ಟಿಯಾಗೋ ಹ್ಯಾಚ್‌ಬ್ಯಾಕ್ ಮತ್ತು ಟಿಗೋರ್ ಸಬ್-ಕಾಂಪ್ಯಾಕ್ಟ್ ಸೆಡಾನ್‌ಗಳಲ್ಲಿ ನೀಡಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಇತ್ತೀಚೆಗೆ ಟಾಟಾ ಟಿಯಾಗೋ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಇದರಿಂದ ಶೀಘ್ರದಲ್ಲೇ ಟಾಟಾ ಟಿಯಾಗೋ ಕಾರು ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಟಿಯಾಗೊದ ಪ್ರತಿಸ್ಪರ್ಧಿಗಳಾದ ಮಾರುತಿ ಸುಜುಕಿ ವ್ಯಾಗನ್ಆರ್ ಮತ್ತು ಹ್ಯುಂಡೈ ಸ್ಯಾಂಟ್ರೊಗಳನ್ನು ಈಗಾಗಲೇ ಸಿಎನ್‌ಜಿ ಕಿಟ್‌ಗಳೊಂದಿಗೆ ನೀಡಲಾಗಿದೆ ಎಂಬುದನ್ನು ಕೂಡ ಗಮನಿಸಬೇಕು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಟಾಟಾ ಟಿಯಾಗೋ ಸಿಎನ್‌ಜಿಗೆ 12 ಕೆಜಿ ಅಥವಾ 60-ಲೀಟರ್ ಸಿಎನ್‌ಜಿ ಟ್ಯಾಂಕ್ ಅಳವಡಿಸಲಾಗಿದ್ದು, ಅದನ್ನು ಬೂಟ್‌ನಲ್ಲಿ ಇರಿಸಲಾಗುತ್ತದೆ. ಟಿಯಾಗೋ ಸಿಎನ್‌ಜಿ ಪ್ರತಿ ಕೆಜಿ ಸಿಎನ್‌ಜಿಗೆ 30-35 ಕಿ.ಮೀ ಮೈಲೇಜ್ ಅನ್ನು ನೀಡಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಟಾಟಾ ಆಲ್‌ಟ್ರೊಜ್ ಇವಿ

ಕಂಪನಿಯು ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಇವಿ ಕಾರನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಎಲೆಕ್ಟ್ರಿಕ್ ಕಾರುಗಳನ್ನು ಟಾಟಾ ಮೋಟಾರ್ಸ್ ಜಿಪ್‌ಟ್ರಾನ್ ತಂತ್ರಜ್ಞಾನದ ಆಧಾರದ ಮೇಲೆ ನಿರ್ಮಾಣಗೊಳಿಸುತ್ತಿದ್ದು, ಮುಂಬರುವ ಎಲೆಕ್ಟ್ರಿಕ್ ಕಾರುಗಳನ್ನು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇವಿ ಕಾರುಗಳಿಂತಲೂ ಹೆಚ್ಚಿನ ರೇಂಜ್ ಹೊಂದಿರುವ ಬ್ಯಾಟರಿ ಪ್ಯಾಕ್ ನೀಡಬಹುದು..

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಟಾಟಾ ಮೋಟಾರ್ಸ್ ಕಂಪನಿಯು ಇವಿ ಕಾರುಗಳಿಗಾಗಿ ಪ್ರಸ್ತುತ ಬಳಕೆಯಲ್ಲಿರುವ ಬ್ಯಾಟರಿ ರೇಂಜ್‌ಗಿಂತಲೂ ಶೇ.20 ರಿಂದ ಶೇ.40 ರಷ್ಟು ಸುಧಾರಣೆ ಕಂಡಿರುವ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಡಬಹುದು. ಸದ್ಯ ನೆಕ್ಸಾನ್ ಇವಿ ಕಾರಿನಲ್ಲಿ ಟಾಟಾ ಕಂಪನಿಯು ಪ್ರತಿ ಚಾರ್ಜ್‌ಗೆ ಗರಿಷ್ಠ 312 ಕಿ.ಮೀ ಮೈಲೇಜ್ ಹಿಂದಿರುಗಿಸುವ 30.2ಕಿ,ವ್ಯಾಟ್ ಬ್ಯಾಟರಿ ಜೋಡಣೆ ಮಾಡಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಮಾರುತಿ ಸ್ವಿಫ್ಟ್ ಸಿಎನ್‌ಜಿ

ಇಂಡೋ-ಜಪಾನೀಸ್ ತಯಾರಕರು ಶೀಘ್ರದಲ್ಲೇ ದೇಶೀಯ ಮಾರುಕಟ್ಟೆಗಾಗಿ ಎಸ್-ಸಿಎನ್‌ಜಿ ಸ್ಪೆಕ್ ಸ್ವಿಫ್ಟ್ ಅನ್ನು ಪರಿಚಯಿಸಲಿದೆ. ಈ ಸ್ವಿಫ್ಟ್ ಸಿಎನ್‌ಜಿ ಕಾರನ್ನು ಎಂಟ್ರಿ ಲೆವೆಲ್ ಎಲ್‌ಎಕ್ಸ್‌ಐ ರೂಪಾಂತರದಲ್ಲಿ ಮಾತ್ರ ನೀಡಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಈ ಮೂಲಕ ಸ್ವಿಫ್ಟ್ ಸಿಎನ್‌ಜಿ ಕಾರಿನ ಮಾರಾಟವನ್ನು ಹೆಚ್ಚಿಸಲು ಪ್ರಯತ್ನಿಸುತ್ತಿದೆ. ಸ್ವಿಫ್ಟ್ ಸಿಎನ್‌ಜಿ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಪರಿಚಯಿಸಬಹುದು ಎಂದು ನಿರೀಕ್ಷಿಸುತ್ತೇವೆ. ಮುಂದಿನ ದಿನಗಳಲ್ಲಿ ಸ್ವಿಫ್ಟ್ ಸಿಎನ್‌ಜಿ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಹ್ಯುಂಡೈ ಐ20 ಎನ್ ಲೈನ್

ದೇಶದ ಎರಡನೇ ಅತಿ ದೊಡ್ಡ ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಹೊಸ ಐ20 ಎನ್ ಲೈನ್ ಪರ್ಫಾಮೆನ್ಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಭಾರತದಲ್ಲಿ ಹ್ಯುಂಡೈ ಕಂಪನಿಯು ತನ್ನ ಎನ್ ಸರಣಿಯ ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ ಐ20 ಎನ್ ಲೈನ್ ಕಾರನ್ನು ಭಾರತದಲ್ಲಿ ಮೊದಲಿಗೆ ಬಿಡುಗಡೆಗೊಳಿಸಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಈ ಹ್ಯುಂಡೈ ಎನ್ ಲೈನ್ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಈ ಕಾರಿನಲ್ಲಿ ಆಫಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇದರೊಂದಿಗೆ ಫುಲ್ ಡಿಜಿಟಲ್ ಇನ್ಸ್ ಟ್ರೂಮಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯಾಚ್‌ಬ್ಯಾಕ್‌ ಕಾರುಗಳಿವು

ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಐ20 ಎನ್ ಲೈನ್ ಕಾರು 1.2 ಎನ್ ಪೆಟ್ರೋಲ್ ಎಂಜಿನ್ ಮತ್ತು 1.0 ಎಲ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ. ಇದು ಸ್ಟ್ಯಾಂಡರ್ಡ್ ಐ20 ಕಾರಿನಲ್ಲಿಯು ಸಹ ಲಭ್ಯವಿದೆ. ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

Most Read Articles

Kannada
English summary
New hatchback models to launched in indian market soon details
Story first published: Wednesday, August 4, 2021, 20:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X