ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾದ Honda Amaze ರಿವ್ಯೂ ವಿಡಿಯೋ

Honda Cars India ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ Amaze ಕಂಪ್ಯಾಕ್ಟ್ ಸೆಡಾನ್ ಮೂಲಕ ಉತ್ತಮ ಸ್ಥಾನ ಕಾಯ್ದುಕೊಂಡಿದ್ದು, ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ 2021ರ ಮಾದರಿಯನ್ನು ಇದೀಗ ಬಿಡುಗಡೆ ಮಾಡಿದೆ.

ಮಾರುಕಟ್ಟೆ ಪ್ರವೇಶಿಸಿರುವ ಹೊಸ Amaze ಕಾರು ವಿತರಣೆ ಆರಂಭಕ್ಕೂ ಕಾರಿನ ಕಾರ್ಯಕ್ಷಮತೆ ತಿಳಿಯಲು ಸ್ಪೆಷಲ್ ಡ್ರೈವ್ ಹಮ್ಮಿಕೊಂಡಿದ್ದ Honda ಕಂಪನಿಯು ಡ್ರೈವ್‌ಸ್ಪಾರ್ಕ್ ತಂಡಕ್ಕೂ ಆಹ್ವಾನ ನೀಡಿತ್ತು. Honda ಕಂಪನಿಯು ಹೊಸ ಕಂಪ್ಯಾಕ್ಟ್ ಸೆಡಾನ್‌ ಕಾರಿನಲ್ಲಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿದ್ದು, ಸಿಟಿ ಸೆಡಾನ್ ಮಾದರಿಯಲ್ಲಿ ಹೊರ ನೋಟದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹಾಗಾದ್ರೆ ಹೊಸ ಕಾರಿನಲ್ಲಿ ಯಾವೆಲ್ಲಾ ಬದಲವಾಣೆಗಳನ್ನು ಮಾಡಲಾಗಿದೆ ಮತ್ತು ಹೊಸ ಫೀಚರ್ಸ್‌ಗಳ ಮಾಹಿತಿಯನ್ನು ಈ ವಿಡಿಯೋದಲ್ಲಿ ತಿಳಿಯೋಣ.

ಹೊಸ ಕಾರಿನ ಮುಂಭಾಗದಲ್ಲಿ ಮರುವಿನ್ಯಾಸಗೊಳಿಸಲಾದ ಬಂಪರ್, ಹೊಸ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಸಿ-ಆಕಾರದ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಫಾಗ್ ಲ್ಯಾಂಪ್‌ಗಳನ್ನು ಪಡೆದುಕೊಂಡಿದ್ದು, ಮರುವಿನ್ಯಾಸಗೊಳಿಸಿದ ಕ್ರೋಮ್ ಫ್ರಂಟ್ ಗ್ರಿಲ್, ಕ್ರೋಮ್ ಡೋರ್ ಹ್ಯಾಂಡಲ್‌ಗಳು, 15 ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿದೆ.

ಹೊಸ Amaze ಕಾರಿನ ಒಳಭಾಗವು ಸಹ ಸಾಕಷ್ಟು ಬದಲಾವಣೆಗೊಂಡಿದ್ದು, ಸೀಟ್ ಅಪ್‌ಹೋಲ್ಸ್ಟರಿ ಸೇರಿದಂತೆ ಹಲವು ಅಪ್‌ಗ್ರೇಡ್‌ಗಳನ್ನು ಮಾಡಲಾಗಿದೆ. ಒಳಭಾಗದಲ್ಲಿ ಶುದ್ಧ ಗಾಳಿಗಾಗಿ ಅಪ್‌ಗ್ರೇಡ್ ಮಾಡಲಾದ ಕ್ಯಾಬಿನ್ ಫಿಲ್ಟರ್ ಜೋಡಿಸಲಾಗಿದೆ. ಹಾಗೆಯೇ ಡ್ಯಾಶ್‌ಬೋರ್ಡ್‌ನಲ್ಲಿ ಸ್ಯಾಟಿನ್ ಸಿಲ್ವರ್ ಅಸ್ಸೆಂಟ್, ಕ್ಲೈಮೇಂಟ್ ಕಂಟ್ರೋಲ್, ಹೋಂಡಾ ಸ್ಮಾರ್ಟ್ ಕೀ ಮತ್ತು ಪುಶ್-ಬಟನ್ ಸ್ಟಾರ್ಟ್ ಅನ್ನು ಹೊಂದಿದೆ.

ಇದರೊಂದಿಗೆ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವಾಯ್ಸ್ ಕಮಾಂಡ್‌ಗಳು ಸೇರಿದಂತೆ ಇತರ ಫೀಚರ್ಸ್ ಗಳನ್ನು ಕೂಡಾ ಒಳಗೊಂಡಿದ್ದು, ಹೊಸ ಕಾರು ಮೆಟಿರಾಯ್ಡ್ ಗ್ರೇ, ಪ್ಲಾಟಿನಂ ಪರ್ಲ್ ವೈಟ್, ಲೂನಾರ್ ಸಿಲ್ವರ್, ಗೋಲ್ಡನ್ ಬ್ರೌನ್ ಮತ್ತು ರೇಡಿಯಂಟ್ ರೆಡ್ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.

2021 Honda Amaze ಕಾರ್ ಅನ್ನು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಮಾರಾಟ ಮಾಡಲಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.32 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 11.15 ಲಕ್ಷ ಬೆಲೆ ಹೊಂದಿದೆ.

ಇದರಲ್ಲಿ ಪೆಟ್ರೋಲ್ ಮಾದರಿಯು 88 ಬಿ‌ಹೆಚ್‌ಪಿ ಪವರ್ ಹಾಗೂ 110 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಮ್ಯಾನುಯಲ್ ಗೇರ್ ಬಾಕ್ಸ್ ಹೊಂದಿರುವ ಡೀಸೆಲ್ ಮಾದರಿಯು 98.6 ಬಿ‌ಹೆಚ್‌ಪಿ ಪವರ್ ಹಾಗೂ 200 ಎನ್ಎಂ ಟಾರ್ಕ್ ಉತ್ಪಾದಿಸಿದರೆ, ಸಿವಿಟಿ ಹೊಂದಿರುವ ಮಾದರಿಯು 78.9 ಬಿ‌ಹೆಚ್‌ಪಿ ಪವರ್ ಹಾಗೂ 160 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಕಾರಿನಲ್ಲಿ ಮ್ಯಾನುಯಲ್ ಹಾಗೂ ಸಿವಿಟಿ ಆಯ್ಕೆ ಹೊಂದಿರುವ ಪೆಟ್ರೋಲ್ ಆವೃತ್ತಿಯು ಪ್ರತಿ ಲೀಟರ್‌ಗೆ ಸುಮಾರು 18 ಕಿ.ಮೀ ಮೈಲೇಜ್ ನೀಡಿದರೆ ಮ್ಯಾನುಯಲ್ ಡೀಸೆಲ್ ಮಾದರಿಯು ಪ್ರತಿ ಲೀಟರ್‌ಗೆ ಗರಿಷ್ಠ 24 ಕಿ.ಮೀ ಹಾಗೂ ಸಿವಿಟಿ ಮಾದರಿಯು ಪ್ರತಿ ಲೀಟರ್‌ಗೆ 21 ಕಿ.ಮೀ ಮೈಲೇಜ್ ನೀಡಬಲ್ಲದು.

Most Read Articles

Kannada
Read more on ಹೋಂಡಾ honda
English summary
New honda amaze compact sedan first drive review video.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X