ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಹೋಂಡಾ ತನ್ನ ಅಮೇಜ್ ಫೇಸ್‌ಲಿಫ್ಟ್‌ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಮಾದರಿಯು ಹೊಸ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಪ್ರವೇಶಿಸಲಿದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲಿ ಒಂದಾಗಿದೆ. ಇದೀಗ ಈ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಮಾದರಿಯು ಹೊಸ ವಿವರಗಳು ಮತ್ತು ವೈಶಿಷ್ಟ್ಯಗಳು ಸಹ ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ. ಇನ್ನು ಈ ಹೊಸ ಅಮೇಜ್ ಕಾರಿನ ಖರೀದಿಗಾಗಿ ಬುಕ್ಕಿಂಗ್ ಅನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಈ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಯಾವುದೇ ಅಧಿಕೃತ ಹೋಂಡಾ ಡೀಲರ್‌ಶಿಪ್ ಬಳಿ ವಾಹನವನ್ನು ಮುಂಗಡವಾಗಿ ಕಾಯ್ದಿರಿಸಬಹುದು.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಈ ಅಮೇಜ್ ಕಾರಿನ ಖರೀದಿಗಾಗಿ ಟೋಕನ್ ಮೊತ್ತ ರೂ.5,000 ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದು. 2021ರ ಹೋಂಡಾ ಅಮೇಜ್ ಕಾರಿನ ಅಧಿಕೃತ ವಿವರಗಳನ್ನು ಒಂದೆರಡು ವಾರಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮಾದರಿಯು ಕ್ಯಾಬಿನ್‌ನ ಒಳಭಾಗ ಮತ್ತು ಫೀಚರ್ ಅಪ್‌ಗ್ರೇಡ್‌ಗಳಲ್ಲಿ ಹೊಸ ಬದಲಾವಣೆಗಳಿಗೆ ಸಾಕ್ಷಿಯಾಗಿದೆ

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಸೋರಿಕೆಯಾದ ಮಾಹಿತಿಗಳ ಪ್ರಕಾರ, ಹೊಸ ಅಮೇಜ್ ಫೇಸ್‌ಲಿಫ್ಟ್‌ ಕಾರಿನಲ್ಲಿ ಪರಿಷ್ಕೃತ ಮುಂಭಾಗದ ಮುಖದೊಂದಿಗೆ ಪರಿಷ್ಕೃತ ರೇಡಿಯೇಟರ್ ಗ್ರಿಲ್ ಒಳಗೊಂಡಿದ್ದು, ಇದು ಕ್ರೋಮ್, ಮರುವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್ ಲ್ಯಾಂಪ್ಸ್ ಮತ್ತು ಫ್ರಂಟ್ ಬಂಪರ್ ಅನ್ನು ನವೀಕರಿಸಿದೆ. . ಮುಂಭಾಗದ ಬಂಪರ್ ಕ್ರೋಮ್ ಟ್ರಿಮ್‌ಗಳಿಂದ ಸುತ್ತುವರಿದ ಹೊಸ ಎಲ್ಇಡಿ ಫಾಗ್ ಲ್ಯಾಂಪ್ ಹೌಸಿಂಗ್‌ಗಳನ್ನು ಹೊಂದಿದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಇನ್ನು ಗ್ರಿಲ್‌ನ ಕಪ್ಪಾದ ಭಾಗವು ಹನಿಕಾಬ್ ಮಾದರಿಯ ಬದಲು ಪಿಯಾನೋ ಗ್ಲಾಸ್ ಫಿನಿಶ್ ಮತ್ತು ಸ್ಲಾಟ್ ಮಾದರಿಯೊಂದಿಗೆ ಬರುತ್ತದೆ. ಸೈಡ್ ಪ್ರೊಫೈಲ್‌ನಲ್ಲಿ, ಹೊಸ ಅಲಾಯ್ ವ್ಹೀಲ್ ಅನ್ನು ಪಡೆದುಕೊಂಡಿದೆ. ಪ್ರಸ್ತುತ ಮಾರಾಟವಾಗುವ ಮಾದರಿಗೆ ಹೋಲಿಸಿದರೆ ಇದು ಸ್ವಲ್ಪ ಹೆಚ್ಚು ಪ್ರೀಮಿಯಂ ಕಾಣುತ್ತದೆ. ಬದಿಯಲ್ಲಿ ಹೊಸ ಕ್ರೋಮ್ ಡೋರ್ ಹ್ಯಾಂಡಲ್ ಗಳಿವೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾಂಪ್ಯಾಕ್ಟ್ ಸೆಡಾನ್ ಹೊಸ ಬಣ್ಣದ ಆಯ್ಕೆಗಳನ್ನು ಕೂಡ ಪಡೆಯಬಹುದು. ಈ ಹೊಸ ಕಾರು ಪ್ಲಾಟಿನಂ ವೈಟ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ರೇಡಿಯಂಟ್ ರೆಡ್, ಲೂನಾರ್ ಸಿಲ್ವರ್ ಮೆಟಾಲಿಕ್ ಮತ್ತು ಮಾಡರ್ನ್ ಸ್ಟೀಲ್ ಮೆಟಾಲಿಕ್ ಎಂಬ ಐದು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಈ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಒಳಭಾಗದಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ಸ ಅಪ್‌ಹೋಲ್ಸ್ಟರಿ ಮತ್ತು ನವೀಕರಿಸಿದ ಡ್ಯಾಶ್‌ಬೋರ್ಡ್‌ನೊಂದಿಗೆ ಪರಿಷ್ಕರಿಸುವ ಸಾಧ್ಯತೆಯಿದೆ. ಇದರಲ್ಲಿ 7 ಇಂಚಿನ ಮಲ್ಟಿ ಇನ್ಫೋ ಡಿಸ್ ಪ್ಲೇಯನ್ನು ಹೊಂದಿರಲಿದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಇನ್ನು ಈ ಕಾರಿನಲ್ಲಿ ಸ್ಟೀರಿಂಗ್ ಮೌಂಟೆಡ್ ವಾಯ್ಸ್ ಕಂಟ್ರೋಲ್, ಎತ್ತರ ಹೊಂದಾಣಿಕೆ ಮಾಡಬಹುದಾದ ಡ್ರೈವೀಂಗ್ ಸೀಟ್, ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ರಿವರ್ಸ್ ಕ್ಯಾಮೆರಾ, ಕೀ ಲೆಸ್ ಎಂಟ್ರಿ, ಸ್ಟಾರ್ಟ್, ಸ್ಟಾಪ್ ಬಟನ್ ಕಂಟ್ರೋಲ್ ಮತ್ತು ಹೆಚ್ಚಿನ ಫೀಚರ್ಸ್ ಗಳನ್ನು ಒಳಗೊಂಡಿರುತ್ತದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಕ್ಯಾಬಿನ್‌ನ ಒಳಗೆ, ಹೊಸ ಫ್ಯಾಬ್ರಿಕ್ ಅಪ್‌ಹೋಲ್‌ಸ್ಟರಿ, ಕಾಂಟೌರ್ಡ್ ಸೀಟ್‌ಗಳು, ಸ್ಯಾಟಿನ್ ಸಿಲ್ವರ್ ಆಕ್ಸೆಂಟ್ಸ್‌ನೊಂದಿಗೆ ಪರಿಷ್ಕೃತ ಡ್ಯಾಶ್‌ಬೋರ್ಡ್ ಲೇಔಟ್, ವೈರ್‌ಲೆಸ್ ಆಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗೆ ನವೀಕರಿಸಿದ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಬದಲಾವಣೆಗಳನ್ನು ಹೊಸದಾಗಿ ಮಾಡಲಾಗಿದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಈ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾಂಪ್ಯಾಕ್ಟ್ ಸೆಡಾನ್ ಹೃದಯ ಭಾಗ ಎಂದೇ ಹೇಳಬಹುದಾದ ಎಂಜಿನ್ ಬಗ್ಗೆ ಹೇಳುವುದಾದರೆ, ಅದರ ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇದನ್ನು ಎರಡು ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗಿದೆ. ಇದು 1.2ಎಲ್ ಪೆಟ್ರೋಲ್ ಮತ್ತು 1.5ಎಲ್ ಡೀಸೆಲ್ ಎಂಬ ಎಂಜಿನ್ ಗಳಾಗಿವೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಇನ್ನು ಇದರಲ್ಲಿ 1.2ಎಲ್ ಪೆಟ್ರೋಲ್ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 110 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5ಎಲ್ ಡೀಸೆಲ್ ಎಂಜಿನ್ 99 ಬಿಹೆಚ್‍ಪಿ ಪವರ್ ಮತ್ತು 200 ಎನ್‍ಎಂ ಟಾರ್ಕ್ ಉತ್ಪಾದಿಸುತ್ತದೆ.

ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರಿನ ಮಾಹಿತಿ ಬಹಿರಂಗ

ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳೊಂದಿಗೆ ಅಪ್‌ಡೇಟ್ ಮಾಡಲಾಗಿದೆ. ಈ ಬಹುನಿರೀಕ್ಷಿತ ಹೊಸ ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾಂಪ್ಯಾಕ್ಟ್ ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳು ಬಿಡುಗಡೆಯಾಗಲಿದೆ.

Article Published On: Monday, August 9, 2021, 21:50 [IST]
English summary
New honda amaze facelift features details leaked
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+