ಹ್ಯುಂಡೈ ಕ್ರೆಟಾಗೆ ಪೈಪೋಟಿಯಾಗಿ ಬರುತ್ತಿದೆ ಹೊಸ ಹೋಂಡಾ ಎಸ್‍ಯುವಿ
ಹೋಂಡಾ ಕಾರ್ಸ್ ಇಂಡಿಯಾ ಕಂಪನಿಯು ಹೆಚ್ಚು ಜನಪ್ರಿಯವಾದ ಐದನೇ ತಲೆಮಾರಿನ ಸಿಟಿ ಕಾರಿನ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದ ಹೊಸ ಮಿಡ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಈ ಹಿಂದೆ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಹೊಂದಿದ್ದ ಯೋಜನೆಯನ್ನು ಕೈಬಿಡಲಾಗಿದೆ.

ಹೋಂಡಾ ಕಂಪನಿಯು ಆರಂಭದಲ್ಲಿ ಎಚ್‌ಆರ್-ವಿ ತರಲು ಯೋಜಿಸಿದ್ದರು ಆದರೆ ಅದನ್ನು ಶೇಕಡಾ 30 ಕ್ಕಿಂತ ಹೆಚ್ಚು ಸ್ಥಳೀಕರಿಸಲಾಗದ ಕಾರಣ 2019 ರಲ್ಲಿ ಯೋಜನೆಗಳನ್ನು ಕೈಬಿಡಲಾಯಿತು. ಅಮೇಜ್ ಮೂಲದ ಕಾಂಪ್ಯಾಕ್ಟ್ ಎಸ್‌ಯುವಿ ಮುಂದಿನ ವರ್ಷ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಗಳಾಗಿತ್ತು. ಆಧುನಿಕ ಖರೀದಿದಾರರ ಅವಶ್ಯಕತೆಗಳನ್ನು ಪೂರೈಸಲು ಹೋಂಡಾ ಸಬ್-4 ಮೀಟರ್ ಮತ್ತು ಮಿಡ್ ಸೈಜ್ ಎಸ್‍ಯುವಿಯನ್ನು ತರುತ್ತದೆ ಎಂದು 2018 ರಲ್ಲಿ ವರದಿಳಾಗಿದೆ.

ಕಳೆದ ಮೂರು ವರ್ಷಗಳಲ್ಲಿ, 10 ಕ್ಕೂ ಹೆಚ್ಚು ಮಾದರಿಗಳು ಲಭ್ಯವಿರುವುದರಿಂದ ಕಾಂಪ್ಯಾಕ್ಟ್ ಎಸ್‌ಯುವಿ ಜಾಗವನ್ನು ಸ್ಥಿರವಾಗಿ ಹೆಚ್ಚಿಸಲಾಗಿದೆ. ಇದರಿಂದ ಹೋಂಡಾ ಕಂಪನಿಯು ಮಿಡ್ ಸೈಜ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಮುಂದಾಗಿದೆ.

ಹೋಂಡಾ ಮಿಡ್ ಸೈಜ್ ಎಸ್‍ಯುವಿಯನ್ನು ಆಂತರಿಕವಾಗಿ 31XA ಎಂಬ ಕೋಡ್ ನೇಮ್ ನೀಡಲಾಗಿತ್ತು. ಇದನ್ನು ಇತ್ತೀಚೆಗೆ ಹೋಂಡಾ ಕಂಪನಿಯು ಇಂಡೋನೇಷ್ಯಾದಲ್ಲಿ ಹೊಸ ಎನ್7ಎಕ್ಸ್ ಕಾನ್ಸೆಪ್ಟ್ ಮಾದರಿಯಾಗಿ ಅನಾವರಣಗೊಳಿಸಿತು.

ಈ ಎಸ್‍ಯುವಿಯಲ್ಲಿ ಮಲ್ಟಿ-ಸ್ಲ್ಯಾಟ್ ಕ್ರೋಮ್ ಲಾಡೆನ್ ಗ್ರಿಲ್ ಮತ್ತು ಸ್ಲಿಮ್ ಆಗಿರುವ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಹೆಡ್‌ಲ್ಯಾಂಪ್ ವಿನ್ಯಾಸವು ಹೊಸ ಸಿಟಿ ಸೆಡಾನ್‌ನಿಂದ ಸ್ಫೂರ್ತಿ ಪಡೆದಿದೆ. ಗ್ರಿಲ್ ಮಧ್ಯದಲ್ಲಿ ದೊಡ್ಡ ಪ್ರಮುಖ ಹೋಂಡಾ ಬ್ಯಾಡ್ಜ್ ಅನ್ನು ಇರಿಸಲಾಗಿದೆ.

ಇದರೊಂದಿಗೆ ಡ್ಯುಯಲ್-ಎಲ್ಇಡಿ ಡಿಆರ್ಎಲ್ ಸೆಟಪ್ ಇದೆ, ಒಂದು ಎಲ್ಇಡಿ ಡಿಆರ್ಎಲ್ ಅನ್ನು ಹೆಡ್ ಲ್ಯಾಂಪ್ ಮೇಲೆ ಮತ್ತು ಇನ್ನೊಂದನ್ನು ಬಂಪರ್ ಮೇಲೆ ಇರಿಸಲಾಗಿದೆ. ಕೆಳಗಿನ ಬಂಪರ್ ವಿಶಾಲವಾದ ವೈಡ್ ಏರ್ ಡ್ಯಾಮ್ ಅನ್ನು ಹೊಂದಿದೆ. ಹೊಸ ಹೋಂಡಾ ಎನ್7ಎಕ್ಸ್ ಕಾನ್ಸೆಪ್ಟ್‌ನ ಸೈಡ್ ಪ್ರೊಫೈಲ್ ನಲ್ಲಿ ಬೆಟ್ ಲೈನ್ ಬೆಲ್ಟ್‌ಲೈನ್ ಒಳಗೊಂಡಿದೆ.

ಇದರಲ್ಲಿ ಬ್ಲ್ಯಾಕ್ ಪ್ಲಾಸ್ಟಿಕ್ ಕ್ಲಾಡಿಂಗ್‌ನೊಂದಿಗೆ ರೌಂಡ್ ವ್ಹೀಲ್ ಅರ್ಚಾರ್ ಅನ್ನು ಪಡೆಯುತ್ತದೆ. ಈ ಎಸ್‍ಯುವಿ ಸಿಟಿ ಸೆಡಾನ್‌ನಲ್ಲಿ ನೀಡಲಾಗುವಂತೆಯೇ ಸಿಗ್ನೇಚರ್ ಎಲ್‌ಇಡಿ ಅಂಶಗಳೊಂದಿಗಿನ ಟೈಲ್ ಲ್ಯಾಂಪ್ ಅನ್ನು ಪಡೆಯುತ್ತದೆ.

ಹೊಸ ಹೋಂಡಾ ಮಿಡ್ ಎಸ್‍ಯುವಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 121 ಬಿಹೆಚ್‌ಪಿ ಮತ್ತು 145 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಎಂಜಿನ್ ನೊಂದಿಗೆ ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ನೀಡಲಾಗುತ್ತದೆ.

ಜಪಾನ್ ಮೂಲದ ಕಾರು ತಯಾರಕ ಕಂಪನಿಯಾದ ಹೋಂಡಾ ಇತ್ತೀಚೆಗೆ ಭಾರತದಲ್ಲಿ ಎಲಿವೇಟ್ ಎಂಬ ಹೆಸರಿಗಾಗಿ ಟ್ರೇಡ್‌ಮಾರ್ಕ್ ನೋಂದಾಯಿಸಿದೆ. ಭಾರತೀಯ ಮಾರುಕಟ್ಟೆಯ ಬಿಡುಗಡೆಯಾಗಲಿರುವ ಹೊಸ ಹೋಂಡಾ ಎಸ್‍ಯುವಿಗೆ ಎಲಿವೇಟ್ ಎಂಬ ಹೆಸರನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ. ಇನ್ನು ಹೊಸ ಹೋಂಡಾ ಮಿಡ್ ಸೈಜ್ ಎಸ್‍ಯುವಿ ಭಾರತದಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.


Click it and Unblock the Notifications