ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಹ್ಯುಂಡೈ ಕಂಪನಿಯು ತನ್ನ ಹೊಚ್ಚ ಹೊಸ ಅಲ್ಕಾಜರ್ ಎಸ್‌ಯುವಿ ಕಾರು ಮಾದರಿಯನ್ನು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಕ್ರೆಟಾ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಖರೀದಿಗೆ ಲಭ್ಯವಾಗಲಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಅಲ್ಕಾಜರ್ ಎಸ್‌ಯುವಿ ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಬೇಡಿಕೆಯೆಂತೆ ಹಲವಾರು ಹೊಸ ಸೌಲಭ್ಯಗಳೊಂದಿಗೆ 6 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕ್ರೆಟಾ ಮಾದರಿಯನ್ನು ಆಧರಿಸಿ ಉತ್ಪಾದನೆಗೊಂಡಿರುವ ಹೊಸ ಕಾರು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾದರಿಗಳಲ್ಲೇ ಅತ್ಯುತ್ತಮ ಎಂಜಿನ್ ಆಯ್ಕೆಯ ಜೊತೆಗೆ ಬಣ್ಣದ ಆಯ್ಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಮುಂದಿನ ತಿಂಗಳು ಏಪ್ರಿಲ್ 6ರಂದು ಉತ್ಪಾದನಾ ಆವೃತ್ತಿಯ ಅನಾವರಣದೊಂದಿಗೆ ಹೊಸ ಕಾರಿನ ಮತ್ತಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಿರುವ ಹ್ಯುಂಡೈ ಕಂಪನಿಯು ಶೀಘ್ರದಲ್ಲೇ ಅಲ್ಕಾಜರ್ ಮಾರಾಟಕ್ಕೆ ಚಾಲನೆ ನೀಡಲಿದ್ದು, ಹೊಸ ಕಾರಿನಲ್ಲಿ ರೆಡ್, ವೈಟ್, ಮ್ಯಾಟೆ ಬ್ಲ್ಯಾಕ್, ಸಿಲ್ವರ್ ಸೇರಿದಂತೆ ಹಲವಾರು ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರಲಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಅಲ್ಕಾಜರ್ ಕಾರಿನಲ್ಲಿ ವಿಸ್ತರಿತ ಕ್ಯಾಬಿನ್‌ ಮೂಲಕ ಮೂರು ಸಾಲಿನ ಆಸನಗಳೊಂದಿಗೆ 7 ಸೀಟರ್ ಸೌಲಭ್ಯವನ್ನು ಅಚ್ಚುಕಟ್ಟಾಗಿ ಜೋಡಣೆ ಮಾಡಲಾಗಿದ್ದು, ಹೊಸ ಕಾರಿನ 6 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಈ ಮೂಲಕ ಮಧ್ಯಮ ಕ್ರಮಾಂಕದಲ್ಲೇ 7 ಸೀಟರ್ ಕಾರು ಮಾದರಿಗಳನ್ನು ಖರೀದಿಸುವ ಗ್ರಾಹಕರನ್ನು ಸೆಳೆಯುತ್ತಿರುವ ಕಂಪನಿಯು ಹೊಸ ಕಾರಿನ ಮೂಲಕ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಕ್ರೆಟಾ ಮಾದರಿಯನ್ನು ಆಧರಿಸಿರುವ ಹೊಸ ಅಲ್ಕಾಜರ್ ಕಾರು ಎಲಾಂಟ್ರಾ ಮತ್ತು ಟ್ಯುಸಾನ್ ಮಾದರಿಯಲ್ಲಿರುವ 2.0-ಲೀಟರ್ ಪೆಟ್ರೋಲ್ ಮಾದರಿಯನ್ನು ಪಡೆದುಕೊಳ್ಳಲಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಹಾಗೆಯೇ ಪರ್ಫಾಮೆನ್ಸ್ ಮಾದರಿಗಾಗಿ 1.4-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಬಹುದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಡೀಸೆಲ್ ಎಂಜಿನ್ ಬಿಡುಗಡೆ ಮಾಡುವ ಬಗ್ಗೆ ಯಾವುದೇ ನಿಖರ ಮಾಹಿತಿಗಳು ಲಭ್ಯವಿಲ್ಲ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಹೊಸ ಕಾರಿನಲ್ಲಿ 6 ಸೀಟರ್ ಮಾದರಿಯು ಹೈ ಎಂಡ್ ಮಾದರಿಯಾಗಲಿದ್ದು, ಮಧ್ಯದ ಸಾಲಿನಲ್ಲಿ ಕ್ಯಾಪ್ಟನ್ ಸೀಟ್‌ನೊಂದಿಗೆ ಆರ್ಮ್ ರೆಸ್ಟ್, ಕಪ್ ಹೋಲ್ಡರ್ ಸೇರಿದಂತೆ ಹಲವಾರು ಹೊಸ ಸೌಲಭ್ಯಗಳನ್ನು ನೀಡಲಾಗಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಹಿಂಬದಿಯ ಸವಾರರಿಗೂ ಹೆಡ್‌ರೆಸ್ಟ್, ಸೈಡ್ ಬಾಟಲ್ ಹೋಲ್ಡರ್ ಸೌಲಭ್ಯಗಳಿದ್ದು, 6 ಸೀಟರ್ ಮಾದರಿಯು 2+2+2 ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯವನ್ನು ಹೊಂದಿರಲಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಇನ್ನು ಹೊಸ ಅಲ್ಕಾಜರ್ ಕಾರು ಟಾಟಾ ನ್ಯೂ ಜನರೇಷನ್ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಸ್ಟ್ಯಾಂಡರ್ಡ್ ಕ್ರೆಟಾ ಕಾರು ಮಾದರಿಗಿಂತ ರೂ. 1.50 ಲಕ್ಷದಿಂದ ರೂ. 2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಅಲ್ಕಾಜರ್ ಕಾರು ಕ್ರೆಟಾ 5 ಸೀಟರ್ ಕಾರು ಮಾದರಿಗಿಂತಲೂ ತುಸು ಪ್ರೀಮಿಯಂ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಇತ್ತೀಚೆಗೆ ಪ್ರಮುಖ ಕಾರು ಕಂಪನಿಯು 5 ಸೀಟರ್ ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರುಗಳಲ್ಲಿ 5 ಸೀಟರ್ ಜೊತೆಗೆ 7 ಸೀಟರ್ ಮಾದರಿಯನ್ನು ಪರಿಚಯಿಸುತ್ತಿರುವ ಅಲ್ಕಾಜರ್ ಬಿಡುಗಡೆಗೆ ಪ್ರಮುಖ ಕಾರಣವಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವಿವಿಧ ಬಣ್ಣಗಳ ಆಯ್ಕೆ ಪಡೆದುಕೊಳ್ಳಲಿದೆ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ

ಈ ಮೂಲಕ ಎಂಪಿವಿ ಮಾದರಿಯಲ್ಲಿ ಸದ್ಯ ಜನಪ್ರಿಯವಾಗಿರುವ ಇನೋವಾ ಕ್ರಿಸ್ಟಾ ಗ್ರಾಹಕರನ್ನು ಸಹ ಸೆಳೆಯಲು ಯತ್ನಿಸುತ್ತಿರುವ ಹ್ಯುಂಡೈ ಕಂಪನಿಯು ಬೃಹತ್ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ.

Most Read Articles

Kannada
English summary
New Hyundai Alcazar Colour Options Details. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X