2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಹ್ಯುಂಡೈ ಭಾರತೀಯ ಮಾರುಕಟ್ಟೆಯಲ್ಲಿ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿದೆ, ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹಲವು ವಿಭಾಗದಲ್ಲಿ ತಮ್ಮ ಕಾರುಗಳನ್ನು ಮಾರಾಟ ಮಾಡುತ್ತಿದೆ. ಈ ಕೊರಿಯನ್ ಕಾರು ತಯಾರಕರ ಕಾರುಗಳು ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಹ್ಯುಂಡೈ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಎಂಟ್ರಿ ಲೆವೆಲ್ ಹ್ಯಾಚ್‌ಬ್ಯಾಕ್‌ಗಳಾದ ಸ್ಯಾಂಟ್ರೋ, ಗ್ರ್ಯಾಂಡ್ ಐ10 ಮತ್ತು ನಿಯೋಸ್ ಅನ್ನು ಮಾರಾಟ ಮಾಡುತ್ತಿದೆ, ಇನ್ನು ಹ್ಯುಂಡೈ ಕಂಪನಿಯ ಕ್ರೆಟಾ ಈಗ ಮಿಡ್ ಸೈಜ್ ಎಸ್‍ಯುವಿ ವಿಭಾಗದಲ್ಲಿ ಪಾರುಪತ್ಯ ಸಾದಿಸುತ್ತಿದೆ, ಹ್ಯುಂಡೈ ಕಂಪನಿಯು ಹಲವು ಜನಪ್ರಿಯ ಮಾದರಿಗಳು ಭಾರತದಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇನ್ನು ಹ್ಯುಂಡೈ ಕಂಪನಿಯು ಮುಂದಿನ ವರ್ಷ ಭಾರತದಲ್ಲಿ ಹಲವು ಕಾರುಗಳನ್ನು ಬಿಡುಗಡೆಗೊಳಿಸಲಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಹ್ಯುಂಡೈ ಕ್ಯಾಸ್ಪರ್

ಕ್ಯಾಸ್ಪರ್ ಕೊರಿಯನ್ ಕಾರು ತಯಾರಕರ ಮೈಕ್ರೋ-ಎಸ್‌ಯುವಿ ಆಗಿದೆ; ಇದು 2022 ರಲ್ಲಿ ಭಾರತಕ್ಕೆ ಬರುವ ನಿರೀಕ್ಷೆಯಿದೆ. ಇದನ್ನು ಈಗಾಗಲೇ ದಕ್ಷಿಣ ಕೊರಿಯಾದಲ್ಲಿ ಎರಡು ಎಂಜಿನ್ ಆಯ್ಕೆಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಈ ಹ್ಯುಂಡೈ ಕ್ಯಾಸ್ಪರ್ 3,595 ಎಂಎಂ ಉದ್ದ, 1,595 ಎಂಎಂ ಅಗಲ ಮತ್ತು 1,575 ಎಂಎಂ ಎತ್ತರವನ್ನು ಹೊಂದಿದೆ. ಇದು ಸ್ಯಾಂಟ್ರೊ ಹ್ಯಾಚ್‌ಬ್ಯಾಕ್‌ಗಿಂತ ಚಿಕ್ಕದಾಗಿದೆ. ಆದರೆ ಇದು ಕ್ಯಾಬಿನ್‌ನಲ್ಲಿ ಯೋಗ್ಯವಾದ ಜಾಗವನ್ನು ಹೊಂದಿದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಈ ಕ್ಯಾಸ್ಪರ್ ನಾಲ್ಕು ಸೀಟ್ ಮಾದರಿಯಾಗಿದೆ. ಆದರೆ ನಾಲ್ಕೂ ಸೀಟುಗಳು ಉತ್ತಮ ಸೌಕರ್ಯ ಮತ್ತು ಬೆಂಬಲವನ್ನು ನೀಡುತ್ತವೆ. ಹೊಸ ಹ್ಯುಂಡೈ ಕ್ಯಾಸ್ಪರ್ ಸಣ್ಣ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳೊಂದಿಗೆ ನೀಡಲಾಗುತ್ತದೆ. ಇದು 1.0 ಲೀಟರ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಹೊಸ 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಗಿದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಇದರಲ್ಲಿ 1.0 ಲೀಟರ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 76 ಬಿಎಚ್‌ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 4-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿರುತ್ತದೆ. ಇದರೊಂದಿಗೆ 1.0-ಲೀಟರ್ 3-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಬಹುದು. ಈ ಟರ್ಬೋ ಎಂಜಿನ್ 100 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಂಜಿನ್ ನೊಂದಿಗೆ 4-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್

ಹ್ಯುಂಡೈ ತನ್ನ ನ್ಯೂ ಜನರೇಷನ್ ಟ್ಯೂಸಾನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಈ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್(Hyundai Tucson) ಆವೃತ್ತಿಯ ವಿನ್ಯಾಸದಲ್ಲಿ ಹಲವಾರು ಅಪ್ದೇಟ್ ಗಳನ್ನು ಮಾಡಲಾಗಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತದಲ್ಲಿ ಕಾಣಿಸಿಕೊಂಡ ಸ್ಪೈ ಚಿತ್ರ ಇತ್ತೀಚೆಗೆ ಬಹಿರಂಗವಾಗಿತ್ತು.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ವರದಿಗಳ ಪ್ರಕಾರ ಈಟ್ಯೂಸಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಮುಂದಿನ ವರ್ಷ ಬಿಡುಗಡೆಯಾಗಲಿದೆ. ಈ ಟ್ಯೂಸಾನ್ ಎಸ್‍ಯುವಿಯ ಮುಂಭಾಗ ಆಕರ್ಷಕ ಲುಕ್ ಅನ್ನು ಹೊಂದಿದ, ಈ ಹೊಸ ಎಸ್‍ಯುವಿಯು ಸ್ಪೋರ್ಟಿ ಲುಕ್ ನಲ್ಲಿ ಕಾಣುವಂತೆ ಅಗ್ರೇಸಿವ್ ವಿನ್ಯಾಸವನ್ನು ಹೊಂದಿದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಈ ಹೊಸ ಟ್ಯೂಸಾನ್ ಎಸ್‍ಯುವಿಯಲ್ಲಿ 2.5-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 417 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಎಂಜಿನ್ ನೊಂದಿಗೆ 8-ಸ್ಪೀಡ್ ಎಂಜಿನ್ ನೊಂದಿಗೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಈ ಹೊಸ ಎಸ್‍ಯುವಿಯಲ್ಲಿ 1.6-ಲೀಟರ್ ಟರ್ಬೊ ಹೈಬ್ರಿಡ್ ಎಂಜಿನ್ ಅನ್ನು ಹೊಂದಿರುತ್ತದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಹ್ಯುಂಡೈ ಐಯಾನಿಕ್5

ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಆರು ಹೊಸ ಎಲೆಕ್ಟ್ರಿಕ್ ಕಾರುಗಳ ಪೈಕಿ ಐಯಾನಿಕ್ 5 ಮಾದರಿಯು ಕೂಡಾ ಒಂದಾಗಿದೆ. ಹೊಸ ಕಾರು ಮಾದರಿಯನ್ನು ಹ್ಯುಂಡೈ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಪರಿಚಯಿಸಲಿದೆ. ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಈ ಹ್ಯುಂಡೈ ಐಯಾನಿಕ್5 ಕಾರು ಜಾಗತಿಕವಾಗಿ E-GMP ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ಇದು RWD ಮತ್ತು AWD ರೂಪಾಂತರಗಳ ಜೊತೆಗೆ ಎರಡು ಬ್ಯಾಟರಿ ಆಯ್ಕೆಗಳನ್ನು ಹೊಂದಿದೆ. ಲಭ್ಯವಿರುವ ಬ್ಯಾಟರಿ ಪ್ಯಾಕ್‌ಗಳು 58kWh ಮತ್ತು 72.6 kWh.ಇದು ಪ್ರೀಮಿಯಂ ಇವಿಗಳಲ್ಲಿ ಒಂದಾಗಿದೆ ಮತ್ತು ಇದನ್ನು ಆಮದು ಮಾಡಿಕೊಳ್ಳಲಾಗುತ್ತದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಹ್ಯುಂಡೈ ಸ್ಟಾರ್‌ಗೇಜರ್

ಹ್ಯುಂಡೈ ಕಂಪನಿಯು ಹೊಸ ಸ್ಟಾರ್‌ಗೇಜರ್ ಎಂಬ ಎಂಪಿವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇಂಡೋನೇಷ್ಯಾದಲ್ಲಿ ಈ ಹೊಸ ಹ್ಯುಂಡೈ ಸ್ಟಾರ್‌ಗೇಜರ್ ಎಂಪಿವಿಯು ಸ್ಫಾಟ್ ಟೆಸ್ಟ್ ಅನ್ನು ನಡೆಸಿದೆ. ಇದು ಇತ್ತೀಚೆಗೆ ಬಿಡುಗಡೆಯಾದ ಕಿಯಾ ಕ್ಯಾರೆನ್ಸ್‌ನಂತೆಯೇ ಇರುತ್ತದೆ, ಅದೇ ರೀತಿಯ ಪವರ್‌ಟ್ರೇನ್ ಆದರೆ ವಿನ್ಯಾಸದಲ್ಲಿ ಸ್ವಲ್ಪ ವ್ಯತ್ಯಾಸವಿದೆ.

2022ರಲ್ಲಿ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಹ್ಯುಂಡೈ ಕಾರುಗಳಿವು..

ಕೈಗೆಟುಕುವ ಹ್ಯುಂಡೈ ಇವಿ

ಪ್ರತಿ ಕಾರು ತಯಾರಕರು ಪರಸ್ಪರ ಸ್ಪರ್ಧಿಸಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸುತ್ತಿದೆ. ಕೆಲವೇ ಕೆಲವು ಎಲೆಕ್ಟ್ರಿಕ್ ಕಾರುಗಳು ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವುದರಿಂದ ಮುಂದಿನ ಕೆಲವು ವರ್ಷಗಳಲ್ಲಿ 6 ಇವಿಗಳನ್ನು ಬಿಡುಗಡೆ ಮಾಡುವುದಾಗಿ ಹುಂಡೈ ಅವುಗಳಲ್ಲಿ ಒಂದು ಕೈಗೆಟುಕುವ ಬೆಲೆಯಾಗಿರಬಹುದು. ಘೋಷಿಸಿತು.

Most Read Articles

Kannada
English summary
New hyundai cars launching in 2022 in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X