ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿರುವ ಹ್ಯುಂಡೈ ತನ್ನ ಎನ್-ಲೈನ್ ಸರಣಿಯ ಪರ್ಫಾರ್ಮೆನ್ಸ್ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿವೆ. ಹ್ಯುಂಡೈ ಎನ್ ಲೈನ್ ಪರ್ಫಾರ್ಮೆನ್ಸ್ ಕಾರುಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆಗಳನ್ನು ಗಳಿಸಿದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಸದ್ಯ ಪರ್ಫಾಮೆನ್ಸ್ ಕಾರುಗಳ ಸಂಖ್ಯೆಯು ವಿರಳವಾಗಿದೆ. ಆದರೆ ಈ ಮೊದಲು ಭಾರತದಲ್ಲಿ ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು ಪರ್ಫಾಮೆನ್ಸ್ ಕಾರುಗಳನ್ನು ಬಿಡುಗಡೆಗೊಳಿಸಲಾಗಿತ್ತು. ಆದರೆ ಆ ಪರ್ಫಾಮೆನ್ಸ್ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ದೊಡ್ಡ ಯಶಸ್ವಿಯನ್ನು ಗಳಿಸಿಲ್ಲ. ಇದೀಗ ಹ್ಯುಂಡೈ ತನ್ನ ಹೊಸ ಐ20 ಎನ್ ಲೈನ್ ಪರ್ಫಾಮೆನ್ಸ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಎನ್ ಲೈನ್ ಪರ್ಫಾಮೆನ್ಸ್ ಕಾರುಗಳ ಬಿಡುಗಡೆಗೊಳಿಸಲಾಗುವುದು ಎಂದು ಹ್ಯುಂಡೈ ಕಂಪನಿಯು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಮೊದಲಿಗೆ ಹ್ಯುಂಡೈ ಕಂಪನಿಯ ಎನ್ ಸರಣಿಯ ಜನಪ್ರಿಯ ಐ20 ಎನ್ ಲೈನ್‌ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಇನ್ನು ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು ಇದೇ ತಿಂಗಳ 24 ರಂದು ಭಾರತದಲ್ಲಿ ಅನಾವಾಣವಾಗಲಿದೆ ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಪರ್ಫಾಮೆನ್ಸ್ ಕಾರಿನ ಬಗ್ಗೆ ಹೇಳುವುದಾದರೆ, ಇದು ಪರ್ಫಾಮೆನ್ಸ್ ಕಾರು ಆಗಿರುವುದರಿಂದ ಹೆಚ್ಚು ಸ್ಪೋರ್ಟಿ ಲುಕ್ ಅನ್ನು ಹೊಂದಿದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಈ ಪರ್ಫಾಮೆನ್ಸ್ ಕಾರು ಹೊಸ ಫ್ರಂಟ್ ಮತ್ತು ರೇರ್ ಬಂಪರ್, ಸೈಡ್ ಸ್ಕರ್ಟ್ ಗಳು ಮತ್ತು ವಿಭಿನ್ನ ವಿನ್ಯಾಸದ ಅಲಾಯ್ ವ್ಹಿಲ್ ಗಳನ್ನು ಹೊಂದಿದೆ. ಇನ್ನು ಕ್ರೋಪ್ ಟ್ರಿಪ್ಡ್ ಡ್ಯುಯಲ್ ಎಕ್ಸಾಸ್ಟ್ ಅನ್ನು ಹೊಂದಿದೆ. ಸ್ಟ್ಯಾಂಡರ್ಡ್ ಐ20 ಮಾದರಿಗೆ ಹೋಲಿಸಿದರೆ ಐ20 ಎನ್ ಲೈನ್ ಕಾರು ಹೆಚ್ಚು ಅಗ್ರೇಸಿವ್ ಲುಕ್ ಅನ್ನು ಹೊಂದಿದೆ. ಒಟ್ಟಾರೆಯಾಗಿ ಈ ಐ20 ಎನ್ ಲೈನ್ ಮಾದರಿಯು ಕಾರು ಪ್ರಿಯರನ್ನು ಸೆಳೆಯುಂತಹ ಆಕರ್ಷಕ ಲುಕ್ ಒಳಗೊಂಡಿದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಈ ಹೊಸ ಹ್ಯುಂಡೈ ಎನ್ ಲೈನ್ ಕಾರಿನ ಇಂಟಿರಿಯರ್ ಹೆಚ್ಚಾಗಿ ಸ್ಟ್ಯಾಂಡರ್ಡ್ ಮಾದರಿಗೆ ಹೋಲುತ್ತದೆ. ಈ ಕಾರಿನ ಒಳಭಾಗದಲ್ಲಿ ಹೊಸ ಸ್ಟೀರಿಂಗ್ ವ್ಹೀಲ್, ಮೆಟಲ್ ಪೆಡಲ್ ಗಳು, ಲೆದರ್ ಗೇರ್ ನಾಬ್ ಸೇರಿದಂತೆ ಕೆಲವು ಬದಲಾವಣೆಗಳನ್ನು ಹೊಂದಿವೆ.ಕಾರಿನ ಒಳಭಾಗದ ಹಲವು ಕಡೆಗಳಲ್ಲಿ ಎನ್ ಬ್ಯಾಡ್ಜ್ ಅನ್ನು ಹೊಂದಿರುತ್ತದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಹೊಸ ಹ್ಯುಂಡೈ ಎನ್ ಲೈನ್ ಕಾರಿನಲ್ಲಿ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿರಲಿದೆ. ಈ ಪರ್ಫಾರ್ಮೆನ್ಸ್ ಕಾರಿನಲ್ಲಿ ಆಫಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಹೊಂದಿರುವ ಟಚ್ ಸ್ಕ್ರೀನ್ ಇನ್ಫೋಟೈನ್ ಮೆಂಟ್ ಸಿಸ್ಟಂ ಅನ್ನು ಹೊಂದಿರುತ್ತದೆ. ಇದರೊಂದಿಗೆ ಫುಲ್ ಡಿಜಿಟಲ್ ಇನ್ಸ್ ಟ್ರೂಮಂಟ್ ಕ್ಲಸ್ಟರ್ ಅನ್ನು ಕೂಡ ಹೊಂದಿರಲಿದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರಿನಲ್ಲಿ 1.6 ಎಲ್ 4 ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 275 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಇನ್ನು ಭಾರತದಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಐ20 ಎನ್ ಲೈನ್ ಕಾರು 1.2 ಎನ್ ಪೆಟ್ರೋಲ್ ಎಂಜಿನ್ ಮತ್ತು 1.0 ಎಲ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ. ಈ ಎಂಜಿನ್ 118 ಬಿಹೆಚ್‍ಪಿ ಪವರ್ ಮತು 200 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥವನ್ನು ಹೊಂದಿರುತ್ತದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಇನ್ನು ಈ ಪರ್ಫಾಮೆನ್ಸ್ ಕಾರಿನಲ್ಲಿ ಇಂಟರ್ಕೂಲರ್, ಹ್ಯುಂಡೈನ ಹೊಸ ಸಿವಿವಿಡಿ (ನಿರಂತರವಾಗಿ ವೇರಿಯಬಲ್ ವಾಲ್ವ್ ಅವಧಿ) ತಂತ್ರಜ್ಞಾನ ಮತ್ತು 350 ಬಾರ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂನೊಂದಿಗೆ ಮೋಟರ್ ಅನ್ನು ಹೆಚ್ಚಿಸಲಾಗಿದೆ. ಸಿವಿವಿಡಿ ತಂತ್ರಜ್ಞಾನವು ಎಂಜಿನ್‌ನ ಕಾರ್ಯಕ್ಷಮತೆ ಮತ್ತು ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ. ಈಗಗಾಲೇ ಯುರೋಪ್ ಮಾರುಕಟ್ಟೆಯಲ್ಲಿ ಐ20 ಎನ್ ಲೈನ್‌ ಅನ್ನು ಪರಿಚಯಿಸಲಾಗಿದೆ. ಅದೇ ಮಾದರಿಯಲ್ಲಿ ಸಣ್ಣ ನವೀಕರಣದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಇನ್ನು ಹ್ಯುಂಡೈ ಕಂಪನಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೆಟಾ ಮಾರಾಟದ ವೇಗವನ್ನು ಮತ್ತಷ್ಟು ಹೆಚ್ಚಿಸಲು ಕಂಪನಿಯು 2022ರ ಅಂತ್ಯದ ವೇಳೆಗೆ ಕ್ರೆಟಾಕ್ಕೆ ಮಿಡ್-ಲೈಫ್ ಅಪ್‌ಡೇಟ್ ನೀಡಲು ಯೋಜಿಸುತ್ತಿದೆ. ಹ್ಯುಂಡೈ ಕಂಪನಿಯು ಈ ತಿಂಗಳ ಕೊನೆಯಲ್ಲಿ ಬ್ರೆಜಿಲ್‌ನಲ್ಲಿ 2022ರ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಮಾಡಲು ಸಿದ್ಧವಾಗಿದೆ. 2022ರ ಕ್ರೆಟಾ ಎಸ್‌ಯುವಿಯನ್ನು ಈ ವರ್ಷದ ಆರಂಭದಲ್ಲಿ ರಷ್ಯಾದ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಾಯಿತು.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಕೊರಿಯಾದ ಕಾರು ತಯಾರಕರು ಆಗಸ್ಟ್ 25 ರಂದು ದಕ್ಷಿಣ ಅಮೆರಿಕಾದ ದೇಶದಲ್ಲಿ ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಹೊಸ ಕ್ರೆಟಾ ಎಸ್‌ಯುವಿ ಅಥವಾ ಕ್ರೀಟ್ ಬ್ರೆಜಿಲ್ ಮಾರುಕಟ್ಟೆಯಲ್ಲಿ ತಿಳಿದಿರುವಂತೆ, ಕೆಲವು ವಿನ್ಯಾಸದ ಟ್ವೀಕ್‌ಗಳನ್ನು ಹೊಂದಿದ್ದು, ಇದು ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಆವೃತ್ತಿಗಳಿಗಿಂತ ಹೆಚ್ಚಿನ ಪ್ರೀಮಿಯಂ ಅನ್ನು ಕಾಣುವಂತೆ ಮಾಡುತ್ತದೆ.

ಭಾರತದಲ್ಲಿ ಅನಾವರಣವಾಗಲಿದೆ ಜನಪ್ರಿಯ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು

ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರು ಈಗಾಗಲೇ ಭಾರತದಲ್ಲಿ ಹಲವು ಬಾರಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಹ್ಯುಂಡೈ ಐ20 ಎನ್ ಲೈನ್ ಪರ್ಫಾರ್ಮೆನ್ಸ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಹ್ಯುಂಡೈ ಕಂಪನಿಯು ಹೊಸ ಹ್ಯುಂಡೈ ಐ20 ಎನ್ ಲೈನ್ ಕಾರನ್ನು ಯುವ ಗ್ರಾಹಕರನ್ನು ಗುರಿಯಾಗಿಸಿಕೊಂಡು ಬಿಡುಗಡೆಗೊಳಿಸುತ್ತಿದ್ದಾರೆ.

Article Published On: Saturday, August 14, 2021, 12:45 [IST]
English summary
New hyundai i20 n line india unveil details revealed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+