ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ದೇಶದ ಎರಡನೇ ಅತಿ ದೊಡ್ಡ ಕಾರು ತಯಾರಕ ಕಂಪನಿಯಾಗಿರುವ ಹ್ಯುಂಡೈ ತನ್ನ ಎನ್ ಪರ್ಫಾರ್ಮೆನ್ಸ್ ಸರಣಿಯ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ. ಮೊದಲಿಗೆ ಹ್ಯುಂಡೈ ಕಂಪನಿಯ ಎನ್ ಸರಣಿಯ ಜನಪ್ರಿಯ ಐ20 ಎನ್ ಲೈನ್‌ ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಹ್ಯುಂಡೈ ಎನ್ ಸೀರಿಸ್ ಪರ್ಫಾಮೆನ್ಸ್ ಕಾರುಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಜನಪ್ರಿಯತೆಗಳನ್ನು ಗಳಿಸಿದೆ. ಬಿಎಂಡಬ್ಲ್ಯು ಎಂ, ಸ್ಕೋಡಾದ ಆರ್‌ಎಸ್ ಮಾದರಿಗಳ ಹಾಗೇ ಹ್ಯುಂಡೈ ಕಂಪನಿಯ ಎನ್ ಸರಣಿಯ ಕಾರುಗಳು ಪರ್ಫಾಮೆನ್ಸ್ ಮಾದರಿಗಳಾಗಿವೆ. ಹ್ಯುಂಡೈ ಕಂಪನಿಯು ಎನ್ ಸರಣಿಯ ಪರ್ಫಾಮೆನ್ಸ್ ಕಾರುಗಳನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗುತ್ತಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಈ ವರ್ಷದಲ್ಲೇ ಹ್ಯುಂಡೈ ಎನ್ ಪರ್ಫಾಮೆನ್ಸ್ ಕಾರುಗಳು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿವೆ. ಹ್ಯುಂಡೈ ಪರ್ಫಾಮೆನ್ಸ್ ಸರಣಿಯು ಎನ್ ಮತ್ತು ಎನ್ ಲೈನ್ ಕಾರುಗಳನ್ನು ಒಳಗೊಂಡಿವೆ. ಈ ಪರ್ಫಾಮೆನ್ಸ್ ಕಾರುಗಳು ಸ್ಟ್ಯಾಂಡರ್ಡ್ ಮಾದರಿಗಳಿಗಿಂತ ಹೆಚ್ಚು ಪವರ್ ಫುಲ್ ಎಂಜಿನ್‌ಗಳನ್ನು ಒಳಗೊಂಡಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಇನ್ನು ಹ್ಯುಂಡೈ ಎನ್ ಲೈನ್ ಕಾರುಗಳು ದೇಶಿಯ ಮಾರುಕಟ್ಟೆಯ ಪರ್ಫಾಮೆನ್ಸ್ ಕಾರು ಪ್ರಿಯರು ಬಹುನಿರೀಕ್ಷೆಯನ್ನು ಹುಟ್ಟು ಹಾಕಿದೆ. ಯಾಕೆಂದರೆ ಭಾರತೀಯ ಪರ್ಫಾಮೆನ್ಸ್ ಕಾರುಗಳು ಸಂಖ್ಯೆಯು ವಿರಳವಾಗಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಹ್ಯುಂಡೈ ಕಂಪನಿಯು ಭಾರತದಲ್ಲಿ ಎನ್ ಸರಣಿಯ ಐ20 ಎನ್ ಲೈನ್‌ ಮಾದರಿಯನ್ನು ಮೊದಲು ಬಿಡುಗಡೆಗೊಳಿಸಲಿದೆ. ಈ ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಬಹಿರಂಗಗೊಂಡಿಲ್ಲ. ಆದರೆ ಇತ್ತೀಚೆಗೆ ಸ್ಪೋರ್ಟಿಯರ್ ಐ20 ಎನ್ ಲೈನ್ ಹ್ಯಾಚ್‌ಬ್ಯಾಕ್ ಮತ್ತೊಮ್ಮೆ ಭಾರತದಲ್ಲಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಈ ಕಾರು120 ಕಿಲೋಮೀಟರ್ ವೇಗದಲ್ಲಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವಾಗ ಕಾಣಿಸಿಕೊಂಡಿದೆ ಎಂಡು ವರದಿಗಲಾಗಿದೆ. ಇನ್ನು ಹೊಸ ಐ20 ಎನ್ ಲೈನ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಚಿತ್ರಗಳು ಬಹಿರಂಗವಾಗಿದೆ. ಈಗಗಾಲೇ ಯುರೋಪ್ ಮಾರುಕಟ್ಟೆಯಲ್ಲಿ ಐ20 ಎನ್ ಲೈನ್‌ ಅನ್ನು ಪರಿಚಯಿಸಲಾಗಿದೆ. ಅದೇ ಮಾದರಿಯಲ್ಲಿ ಸಣ್ಣ ನವೀಕರಣದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಜಾಗತಿಕ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಐ20 ಎನ್ ಲೈನ್‌ ಕಾರು 1.6 ಎಲ್, 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 204 ಬಿಹೆಚ್‌ಪಿ ಪವರ್ ಮತ್ತು 275 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಇನ್ನು ಈ ಪರ್ಫಾಮೆನ್ಸ್ ಕಾರಿನಲ್ಲಿ ಇಂಟರ್ಕೂಲರ್, ಹ್ಯುಂಡೈನ ಹೊಸ ಸಿವಿವಿಡಿ (ನಿರಂತರವಾಗಿ ವೇರಿಯಬಲ್ ವಾಲ್ವ್ ಅವಧಿ) ತಂತ್ರಜ್ಞಾನ ಮತ್ತು 350 ಬಾರ್ ಫ್ಯೂಯಲ್ ಇಂಜೆಕ್ಷನ್ ಸಿಸ್ಟಂನೊಂದಿಗೆ ಮೋಟರ್ ಅನ್ನು ಹೆಚ್ಚಿಸಲಾಗಿದೆ. ಸಿವಿವಿಡಿ ತಂತ್ರಜ್ಞಾನವು ಎಂಜಿನ್‌ನ ಕಾರ್ಯಕ್ಷಮತೆ ಮತ್ತು ಇಂಧನ ದಕ್ಷತೆಯನ್ನು ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಸಾಮಾನ್ಯ ಐ20 ಮಾದರಿಯಂತೆ 'ಎನ್ ಲೈನ್' ರೂಪಾಂತರವು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದು ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುತ್ತದೆ. ಇನ್ನು ಇದರಲ್ಲಿ 10.25-ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿರಲಿದೆ.

ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ ಹ್ಯುಂಡೈ ಐ20 ಎನ್ ಲೈನ್‌ ಕಾರು

ಇನ್ನು ಡ್ರೈವರ್ ಅಸಿಸ್ಟ್ ಫೀಚರ್ ಗಳೊಂದಿಗೆ ಬ್ಲೂಲಿಂಕ್ ಕನೆಕ್ಟಿವಿಟಿ ಕಾರ್ ಸೂಟ್ ಸಹ ನೀಡುತ್ತದೆ. ಇನ್ನು ಐ20 ಎನ್ ಲೈನ್‌ ಕಾರಿನಲ್ಲಿ ಟ್ವೀಕ್ಡ್ ಸ್ಟೀಯರಿಂಗ್ ಮತ್ತು ಎಕ್ಸಾಸ್ಟ್ ಸಿಸ್ಟಂ ಜೊತೆಗೆ ಗಟ್ಟಿಯಾದ ಸಸ್ಪೆಂಕ್ಷನ್ ಸೆಟಪ್ ಅನ್ನು ಕೂಡ ಪಡೆಯುತ್ತದೆ. ಇನ್ನು ಈ ಐ20 ಎನ್ ಲೈನ್‌ ಪರ್ಫಾಮೆನ್ಸ್ ಕಾರು ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

Article Published On: Tuesday, June 1, 2021, 20:25 [IST]
English summary
Hyundai i20 N-Line Spotted Testing Once Again. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+