ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನ್ಯೂ ಜನರೇಷನ್ ಟ್ಯೂಸಾನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್(Hyundai Tucson) ಆವೃತ್ತಿಯ ವಿನ್ಯಾಸದಲ್ಲಿ ಹಲವಾರು ಅಪ್ದೇಟ್ ಗಳನ್ನು ಮಾಡಲಾಗಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಭಾರತದಲ್ಲಿ ಕಾಣಿಸಿಕೊಂಡ ಸ್ಪೈ ಚಿತ್ರ ಬಹಿರಂಗವಾಗಿದೆ. ಭಾರತದಲ್ಲಿ ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಬಹಿರಂಗವಾಗಿರುವುದು ಎಂದು ನಿರೀಕ್ಷಿಸುತ್ತೇವೆ. ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ.ಈ ಟ್ಯೂಸಾನ್ ಎಸ್‍ಯುವಿಯ ಮುಂಭಾಗ ಆಕರ್ಷಕ ಲುಕ್ ಅನ್ನು ಹೊಂದಿದ, ಈ ಹೊಸ ಎಸ್‍ಯುವಿಯು ಸ್ಪೋರ್ಟಿ ಲುಕ್ ನಲ್ಲಿ ಕಾಣುವಂತೆ ಅಗ್ರೇಸಿವ್ ವಿನ್ಯಾಸವನ್ನು ಹೊಂದಿದೆ. ಈ ಹೂಸ ಟ್ಯೂಸಾನ ಹೆಡ್‌ಲ್ಯಾಂಪ್ ಯುನಿಟ್ ಆಕರ್ಷಕವಾಗಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಕ್ರೋಮ್ ಸ್ಟ್ರಿಪ್ ಹೊಂದಿದೆ. ಈ ಎಸ್‍ಯುವಿಯ ಕೊನೆಯಲ್ಲಿ ವಿಶಿಷ್ಟವಾದ ಸಿ-ಪಿಲ್ಲರ್ ಆಕಾರವನ್ನು ರೂಪಿಸಿದೆ. ಈ ಹೊಸ ಎಸ್‍ಯುವಿಯ ಹಿಂದಿನ ಪ್ರೊಫೈಲ್‌ನಲ್ಲಿ ಉದ್ದವಾದ ಬೆಲ್ಟ್‌ಲೈನ್ಗಳಿವೆ. ಈ ಎಸ್‍ಯುವಿಯಲ್ಲಿ 19 ಇಂಚಿನ ವ್ಹೀಲ್ಸ್ ಅನ್ನು ಅಳವಡಿಸಿದೆ. ಈ ವ್ಹೀಲ್ ಗಳು ವಿಭಿನ್ನವಾದ ವಿನ್ಯಾಸದಿಂದ ಕೂಡಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿ ಶಾರ್ಕ್ ಫಿನ್ ಆಂಟೆನಾ, ಬಾಡಿ ಕಲರ್‌ನಲ್ಲಿ ರೂಫ್-ರೈಲ್ ಮತ್ತು ಫ್ಲೋಟಿಂಗ್ ರೂಫ್‌ಲೈನ್ ಹೊಂದಿದೆ. ಹಿಂಭಾಗದಲ್ಲಿ ಅಗಲವಾಗಿ ಉದ್ದಕೂ ರೆಡ್ ಎಲ್ಇಡಿ ಲೈಟ್ ಅನ್ನು ಅಳವಡಿಸಿದೆ. ಇದು ಟೈಲ್-ಲ್ಯಾಂಪ್‌ಗಳನ್ನು ಕನೆಕ್ಟ್ ಆಗಿದೆ. ಇನ್ನು ಟ್ಯೂಸನ್ ಎಸ್‍ಯುವಿಯಲಿರುವ ಟೈಲ್-ಲೈಟ್ ಕ್ರೆಟಾದ ಟೈಲ್-ಲ್ಯಾಂಪ್‌ನ ವಿಕಾಸಗೊಂಡ ಆವೃತ್ತಿಯಂತೆ ಕಾಣುತ್ತದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಈ ಹೊಸ ಟ್ಯೂಸಾನ್ ಎಸ್‍ಯುವಿ ಕೆಳಗಿನ ಬಂಪರ್ ಸಿಲ್ವರ್ ಸ್ಕಿಡ್ ಪ್ಲೇಟ್, ಸ್ಟಾಪ್ ಲ್ಯಾಂಪ್‌ಗಳು ಮತ್ತು ಏರ್ ವೆಂಟ್ಸ್ ಗಳನ್ನು ಹೊಂದಿರುತ್ತದೆ. ಇದು ಇಂಟಿಗ್ರೇಟೆಡ್ ಬ್ರೇಕ್ ಲೈಟ್ ಗಳೊಂದಿಗೆ ರೂಫ್ ಸ್ಪಾಯ್ಲರ್ ಅನ್ನು ಹೊಂದಿದೆ. ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕನ್ಸೋಲ್ ಮತ್ತು ದೊಡ್ಡದಾದ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರೊಂದಿಗೆ ಎಸಿ ಮತ್ತು ಇತರ ಕಂಟ್ರೋಲ್ ಗಳಿಗಾಗಿ ಟಚ್-ಪ್ಯಾನೆಲ್‌ಗಳು, ಅನನ್ಯವಾಗಿ ವಿನ್ಯಾಸಗೊಳಿಸಲಾದ ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್, ಗೇರ್‌ಬಾಕ್ಸ್, ಪಾರ್ಕಿಂಗ್ ಬ್ರೇಕ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿದೆ. ವೈರ್‌ಲೆಸ್ ಚಾರ್ಜಿಂಗ್ ಮತ್ತು ನೂತನ ಕನೆಕ್ಟಿವಿಟಿ ಫೀಚರ್ ಗಳನ್ನು ಹೊಂದಿರಲಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯಲ್ಲಿ ಎರಡನೇ ಸಾಲಿನ ಸೀಟುಗಳ ಫ್ಲಾಟ್ ಫೋಲ್ಡಿಂಗ್ ಸಕ್ರಿಯಗೊಳಿಸಿದಾಗ 1,095 ಲೀಟರ್ ಸ್ಪೇಸ್ ಲಭ್ಯವಿರುತ್ತದೆ.2021ರ ಟ್ಯೂಸಾನ್ ಎಸ್‍ಯುವಿಯಲ್ಲಿ 2.5-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 187 ಬಿಹೆಚ್‍ಪಿ ಪವರ್ ಮತ್ತು 417 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಎಂಜಿನ್ ನೊಂದಿಗೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರೊಂದಿಗೆ ಈ ಎಸ್‍ಯುವಿಯಲ್ಲಿ 1.6-ಲೀಟರ್ ಟರ್ಬೊ ಹೈಬ್ರಿಡ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ 227 ಬಿಹೆಚ್‍ಪಿ ಪವರ್ ಮತ್ತು 350 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 1.6-ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರೊಂದಿಗೆ ಹ್ಯುಂಡೈ ಕಂಪನಿಯು ಕ್ರೆಟಾವನ್ನು ಮಿಡ್-ಲೈಫ್ ಅಪ್‌ಡೇಟ್ ಗಳೊಂದಿಗೆ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯು ಕೆಲವು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಹ್ಯುಂಡೈ ಕಂಪನಿಯು ಇದೀಗ ಕ್ರೆಟಾ ಫೇಸ್‌ಲಿಫ್ಟ್‌ಗಾಗಿ ಹೊಸ ಟೀಸರ್ ಅನ್ನು ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಟೀಸರ್ ನಲ್ಲಿ ಹ್ಯುಂಡೈ ಬ್ಲೂಲಿಂಕ್ ಅಪ್ಲಿಕೇಶನ್ ಮೂಲಕ ರಿಮೋಟ್ ಸ್ಟಾರ್ಟ್/ಸ್ಟಾಪ್ ಜೊತೆಗೆ ಎಲ್ಲಾ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿರುವ ಅದರ ಒಳಾಂಗಣವನ್ನು ಬಹಿರಂಗಪಡಿಸುತ್ತದೆ. ಲೇನ್ ಡ್ರೈವ್ ಅಸಿಸ್ಟ್ ಕಾರ್ಯಕ್ಕಾಗಿ ಸ್ಟೀರಿಂಗ್ ಚಕ್ರದಲ್ಲಿ ಸಂಯೋಜಿತವಾಗಿರುವ ಕಂಟ್ರೋಲ್ ಬಟನ್ ಹೊಂದಿದೆ, ಹೊಸ ತಲೆಮಾರಿನ ಟ್ಯೂಸಾನ್ ಸೇರಿದಂತೆ ಹುಂಡೈನ ಪ್ರೀಮಿಯಂ ವಾಹನಗಳಲ್ಲಿ ಇದನ್ನು ಸಾಮಾನ್ಯವಾಗಿ ನೀಡಲಾಗುತ್ತದೆ.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ಇದರಲ್ಲಿ ಎಸ್‌ಯುವಿಯು ಪ್ರೀಮಿಯಂ ಬೋಸ್ ಸೌಂಡ್ ಸಿಸ್ಟಂ, ಪನೋರಮಿಕ್ ಸನ್‌ರೂಫ್‌ನೊಂದಿಗೆ ಬರುತ್ತಲೇ ಇದೆ. ವರದಿಗಳ ಪ್ರಕಾರ ಹೊಸ ಕ್ರೆಟಾವು ಅದರ ಹೊಸದಾಗಿ ಬಿಡುಗಡೆಯಾದ ಪ್ರತಿಸ್ಪರ್ಧಿ ಎಂಜಿ ಆಸ್ಟರ್‌ನಂತೆಯೇ ಲೆವೆಲ್ 2 ADAS ನೊಂದಿಗೆ ಬರಬಹುದು. ಈಗಿನಂತೆ, ಈ ವೈಶಿಷ್ಟ್ಯಗಳನ್ನು ಇಂಡಿಯಾ-ಸ್ಪೆಕ್ ಹೊಸ ಹ್ಯುಂಡೈ ಕ್ರೆಟಾ 2022ರ ಮಾದರಿಯಲ್ಲಿ ನೀಡಲಾಗುವುದು ಅಥವಾ ಇಲ್ಲವೇ ಎಂಬ ಸ್ಪಷ್ಟತೆ ಇಲ್ಲ.ಭಾರತದಲ್ಲಿ ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯು ಮುಂದಿನ ವರ್ಷದಲ್ಲಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ. ಈ ಟೀಸರ್ ನಲ್ಲಿ ಹ್ಯುಂಡೈ ಫೇಸ್‌ಲಿಫ್ಟ್‌ನಲ್ಲಿ ಮಾಡಿರುವ ಬದಲಾವಣೆಗಳನ್ನು ತೋರಿಸುತ್ತದೆ. ಇದರಲ್ಲಿ ಮುಂಭಾಗವನ್ನು ನವೀಕರಸಿರುವುದನ್ನು ನೋಡಬಹುದು.

ಭಾರತದಲ್ಲಿ ಕಾಣಿಸಿಕೊಂಡ ನ್ಯೂ ಜನರೇಷನ್ Hyundai Tucson ಎಸ್‍ಯುವಿ

ನ್ಯೂ ಜನರೇಷನ್ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ವಿದೇಶಗಳಲ್ಲಿನ ಮಾರುಕಟ್ಟೆಗಳಲ್ಲಿ ಕಳೆದ ವರ್ಷ ಪರಿಚಯಿಸಿದ್ದರು. ಇದೀಗ ಈ ಹೊಸ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲು ಸಜ್ಜಾಗುತ್ತಿದೆ. ಈ ಹೊಸ ಹ್ಯುಂಡೈ ಟ್ಯೂಸಾನ್ ಎಸ್‍ಯುವಿಯು ಮುಂದಿನ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದೆ.

Source: Instagram

Article Published On: Sunday, October 31, 2021, 13:00 [IST]
English summary
New hyundai tucson suv spied testing design engine details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+