ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಕೋವಿಡ್ ಪರಿಣಾಮ ಹೊಸ ವಾಹನಗಳ ಬಿಡುಗಡೆ ಯೋಜನೆಯನ್ನು ಮುಂಡೂಡಿಕೆ ಮಾಡುತ್ತಾ ಬಂದಿರುವ ಇಸುಝು ಕಂಪನಿಯು ಮುಂದಿನ ಕೆಲವೇ ದಿನಗಳಲ್ಲಿ ತನ್ನ ಜನಪ್ರಿಯ ಡಿ-ಮ್ಯಾಕ್ಸ್ ವಿ-ಕ್ರಾಸ್ ಪಿಕ್ಅಪ್ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಆಟೋ ಉದ್ಯದಲ್ಲಿನ ಏರಿಳಿತ ಪರಿಣಾಮ ಕಳೆದ ಜೂನ್ ತಿಂಗಳನಲ್ಲೇ ಬಿಡುಗಡೆಯಾಗಬೇಕಿದ್ದ ಬಿಎಸ್-6 ಡಿ-ಕ್ರಾಸ್ ವಿ-ಕ್ರಾಸ್ ಲೈಫ್‌ಸ್ಟೈಲ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ಇದೀಗ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದ್ದು, ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಇದೀಗ ಪೂರ್ಣಗೊಳಿಸಲಾಗುತ್ತಿದೆ. 2020ರ ಏಪ್ರಿಲ್ 1ರಿಂದ ಜಾರಿಗೆ ಬಂದ ಹೊಸ ಎಮಿಷನ್‌ಗೆ ಅನುಗುಣವಾಗಿ ಎಂಜಿನ್ ಹೊಂದಿರುವ ವಿ-ಕ್ರಾಸ್ ಪಿಕ್‌ಅಪ್ ಎಸ್‌ಯುವಿ ಮಾದರಿಯು ಏಪ್ರಿಲ್ ಅಥವಾ ಮೇ ಹೊತ್ತಿಗೆ ಖರೀದಿಗೆ ಲಭ್ಯವಿರಲಿದೆ ಎನ್ನಲಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಇಸುಝು ಕಂಪನಿಯು ತನ್ನ ಡಿ-ಮ್ಯಾಕ್ಸ್ ಸರಣಿಯ ವಾಣಿಜ್ಯ ಬಳಕೆಯ ಪಿಕ್ಅಪ್ ಮಾದರಿಗಳನ್ನು ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟ ಮಾಡುತ್ತಿದ್ದು, ಮಾರುಕಟ್ಟೆ ಏರಿಳಿತದ ಪರಿಣಾಮ ಲೈಫ್‌ಸ್ಟೈಲ್ ಡಿ-ಮ್ಯಾಕ್ಸ್ ವಿ-ಕ್ರಾಸ್ ಬಿಡುಗಡೆಯನ್ನು ತಡೆಹಿಡಿದಿತ್ತು.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಡಿ-ಮ್ಯಾಕ್ಸ್ ವಿ-ಕ್ರಾಸ್ ಮಾದರಿಗಳನ್ನು ಇದೀಗ ಬಿಡುಗಡೆಯಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಎಂಜಿನ್‌ನೊಂದಿಗೆ ವಿನ್ಯಾಸದಲ್ಲೂ ಬಾರಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿರುವುದು ರೋಡ್ ಟೆಸ್ಟಿಂಗ್ ವೇಳೆ ಬಹಿರಂಗವಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಹೊಸ ಪಿಕ್ಅಪ್ ಎಸ್‌ಯುವಿಯ ಒಳಭಾಗದಲ್ಲಿನ ಬದಲಾದ ತಾಂತ್ರಿಕ ಅಂಶಗಳ ಕುರಿತಾಗಿ ಅಷ್ಟಾಗಿ ಲಭ್ಯವಾಗಿಲ್ಲವಾದರೂ ಹೊರಭಾಗದಲ್ಲಿನ ವಿನ್ಯಾಸದಲ್ಲಿ ಕೆಲವು ಪ್ರಮುಖ ಬದಲಾವಣೆ ಪರಿಚಯಿಸಲಾಗಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಟೈಲ್‌ಗೆಟ್ ವಿಭಾಗವನ್ನು ಬದಲಾವಣೆ ಮಾಡಲಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಬಿಎಸ್-6 ವಿ-ಕ್ರಾಸ್ ಮಾದರಿಯು ಈ ಬಾರಿ ಬಿಎಸ್-4 ಮಾದರಿಯೆಂತೆ ಎರಡು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ 1.9-ಲೀಟರ್ ಡೀಸೆಲ್ ಮತ್ತು 2.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಇದರಲ್ಲಿ 1.9-ಲೀಟರ್ ಡೀಸೆಲ್ ಮಾದರಿಯೇ ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿದ್ದು, 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯೊಂದಿಗೆ 148-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

2.5-ಲೀಟರ್ ಡೀಸೆಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 135-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎರಡು ಮಾದರಿಗಳಲ್ಲೂ 4x4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸಿದ ಇಸುಝು ಹೊಸ ಡಿ-ಮ್ಯಾಕ್ಸ್ ವಿ-ಕ್ರಾಸ್

ಹೊಸ ಎಂಜಿನ್‌ನಿಂದಾಗಿ ಪಿಕ್‌ಅಪ್ ಎಸ್‌ಯುವಿ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಬಿಎಸ್ 4 ಮಾದರಿಗಿಂತಲೂ ಹೊಸ ಪಿಕ್ಅಪ್ ಹೆಚ್ಚುವರಿಯಾಗಿ ರೂ.1 ಲಕ್ಷದಿಂದ ರೂ. 1.50 ಲಕ್ಷದಷ್ಟು ಹೆಚ್ಚುವರಿ ಬೆಲೆಯೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

More from DriveSpark

Article Published On: Thursday, March 18, 2021, 22:18 [IST]
English summary
BS6 Isuzu D-Max V-Cross Spied Testing, Likely Launch in April. Read in Kannada.
Read more on ಇಸುಝು isuzu
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+