ಡೀಲರ್ಸ್ ಯಾರ್ಡ್ ತಲುಪಿದ 2021ರ ಕಿಯಾ ಸೊನೆಟ್ ಕಾರು
ಕಿಯಾ ಮೋಟಾರ್ಸ್ ಕಂಪನಿಯು ಉನ್ನತೀಕರಿಸಲಾದ ಸೊನೆಟ್ ಮತ್ತು ಸೆಲ್ಟೊಸ್ ಕಾರು ಮಾದರಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳು ಭಾರೀ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿವೆ.

ಕಿಯಾ ಮೋಟಾರ್ಸ್ ಕಂಪನಿಯು 2021 ಸೊನೆಟ್ ಮತ್ತು ಸೆಲ್ಟೊಸ್ ಕಾರು ಮಾದರಿಯಲ್ಲಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಹೊಸ ಕಾರುಗಳಲ್ಲಿ ಕಂಪನಿಯು ವಿವಿಧ ವೆರಿಯೆಂಟ್‌ಗಳನ್ನು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಉನ್ನತೀಕರಿಸಲಿದೆ. ಉನ್ನತೀಕರಿಸಲಾದ ಕಾರು ಮಾದರಿಗಳು ಈಗಾಗಲೇ ಡೀಲರ್ಸ್ ಯಾರ್ಡ್ ತಲುಪಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಗ್ರಾಹಕರ ಕೈಸೇರಲಿವೆ.

ಕಿಯಾ ಮೋಟಾರ್ಸ್ ಕಂಪನಿಯು ಸೊನೆಟ್ ಕಾರಿನ ಪೆಟ್ರೋಲ್ ಮ್ಯಾನುವಲ್ ಮಾದರಿಗಳನ್ನು ಸ್ಥಗಿತಗೊಳಿಸುವ ಸಿದ್ದತೆಯಲ್ಲಿದ್ದು, 2021ರ ಮಾದರಿಯಲ್ಲಿ ಹೊಸದಾಗಿ ಹೆಚ್‌ಟಿಎಕ್ಸ್ ಡಿಸಿಟಿ ಪೆಟ್ರೋಲ್ ಮತ್ತು ಹೆಚ್‌ಟಿಎಕ್ಸ್ ಡೀಸೆಲ್ ಮಾದರಿಯು ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸದಾಗಿ ಪರಿಚಯಿಸಲಾಗುತ್ತಿರುವ ಹೆಚ್‌ಟಿಎಕ್ಸ್ ಮಾದರಿಯಲ್ಲಿ ಕಿಯಾ ಮೋಟಾರ್ಸ್ ಕಂಪನಿಯು ಅಲಾಯ್ ವೀಲ್ಹ್, ಟ್ರಾಕ್ಷನ್ ಕಂಟ್ರೊಲ್ ಸೌಲಭ್ಯಗಳನ್ನು ಹೆಚ್ಚುವರಿಯಾಗಿ ಜೋಡಣೆ ಮಾಡುತ್ತಿದ್ದು, ಹೈ ಎಂಡ್ ಟರ್ಬೊ ಮಾದರಿಗಳಲ್ಲಿ ಕ್ವಿಕ್ ಗೇರ್ ಚೆಂಜ್ ಮಾಡಬಹುದಾದ ಪ್ಯಾಡಲ್ ಶಿಫ್ಟರ್ ಜೊತೆಗೆ ಹೊಸ ಲೊಗೊ ನೀಡಿರುವುದು ಹೊಸ ಕಾರಿನ ಚಿತ್ರಗಳಲ್ಲಿ ಸ್ಪಷ್ಟವಾಗಿದೆ.

ಸೊನೆಟ್ ಕಾರು ಮಾದರಿಯು ಸದ್ಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 1.2-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಉತ್ತಮ ಫೀಚರ್ಸ್ ಹೊಂದಿದೆ. ಭಾರತದಲ್ಲಿ ಕಿಯಾ ಮೋಟಾರ್ಸ್ ನಿರ್ಮಾಣದ ಮೂರನೇ ಕಾರು ಮಾದರಿಯಾಗಿ ಬಿಡುಗಡೆಯಾಗಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಸಾಮಾನ್ಯ ಮಾದರಿಯ ಪೆಟ್ರೋಲ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಂಡಿದೆ.

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಸೊನೆಟ್ ಕಾರು ಆರಂಭಿಕವಾಗಿ ರೂ. 6.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.20 ಲಕ್ಷ ಬೆಲೆ ಹೊಂದಿದ್ದು, ಹೊಸ ಕಾರನ್ನು ಜಿಟಿ-ಲೈನ್ ಮತ್ತು ಟೆಕ್-ಲೈನ್ ವೆರಿಯೆಂಟ್‌ಗಳಲ್ಲಿ ಖರೀದಿ ಮಾಡಬಹುದಾಗಿದೆ.

ಜಿಟಿ-ಲೈನ್ ಮಾದರಿಯಲ್ಲಿ ಹೆಚ್‌ಟಿಇ, ಹೆಚ್‌ಟಿಕೆ, ಹೆಚ್‌ಟಿಕೆ ಪ್ಲಸ್, ಹೆಚ್‌ಟಿಎಕ್ಸ್ ಮತ್ತು ಹೆಚ್‌ಟಿಎಕ್ಸ್ ಪ್ಲಸ್ ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದಲ್ಲಿ ಜಿಟಿ ಲೈನ್‌ನಲ್ಲಿ ಜಿಟಿಎಕ್ಸ್ ಪ್ಲಸ್ ವೆರಿಯೆಂಟ್ ಖರೀದಿಗೆ ಲಭ್ಯವಿದೆ.

ಹೊಸ ಸೊನೆಟ್ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಬ್ ಫೋರ್ ಮೀಟರ್ ಕಾರು ಮಾದರಿಯಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಹೊಸ ಕಾರು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ ಹೊಸ ಕಾರು ಭಾರೀ ಪ್ರಮಾಣದಲ್ಲಿ ಮಾರಾಟವಾಗಿದ್ದು, ಶೀಘ್ರದಲ್ಲೇ ಹೊಸ ಕಾರು ವಿನೂತನ ಲೊಗೊ ಸೌಲಭ್ಯದೊಂದಿಗೆ 2021ರ ಮಾದರಿಯೊಂದಿಗೆ ಮಾರಾಟಗೊಳ್ಳುವ ಸಿದ್ದತೆಯಲ್ಲಿದೆ.


Click it and Unblock the Notifications








