ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾದ ಲ್ಯಾಂಡ್ ರೋವರ್ ತಮ್ಮ 2021ರ ಡಿಸ್ಕವರಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ .2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿಯ ಹೆಸರನ್ನು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

ಜೆಎಲ್ಆರ್ ಡಿಸ್ಕವರಿಯ ನವೀಕರಿಸಿದ ಆವೃತ್ತಿಯನ್ನು ತನ್ನ ಭಾರತೀಯ ವೆಬ್‌ಸೈಟ್‌ನಲ್ಲಿ ಪ್ರಾರಂಭಿಸುವ ಮೊದಲೇ ಪಟ್ಟಿ ಮಾಡಿದೆ. ವೆಬ್‌ಸೈಟ್ ಅದರ ಎಲ್ಲಾ ರೂಪಾಂತರಗಳಲ್ಲಿ ವಿಶೇಷಣಗಳು ಮತ್ತು ಲಭ್ಯವಿರುವ ವೈಶಿಷ್ಟ್ಯಗಳಂತಹ ವಿವರಗಳನ್ನು ಸಹ ಪಟ್ಟಿ ಮಾಡುತ್ತದೆ. 2021ರ ಲ್ಯಾಂಡ್ ರೋವರ್ ಡಿಸ್ಕವರಿ ಉತ್ತಮ ಆಫ್-ರೋಡ್ ಸಾಮರ್ಥ್ಯ ಮತ್ತು ಅತ್ಯಾಧುನಿಕ ಫೀಚರ್ ಗಳನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಸೂಕ್ಷ್ಮವಾದ ಮತ್ತು ಗಮನಾರ್ಹವಾದ ಸ್ಟೈಲಿಂಗ್ ಟ್ವೀಕ್‌ಗಳೊಂದಿಗೆ ಬರುತ್ತದೆ. ಇವುಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌(ಡೇಟೈಮ್ ರನ್ನಿಂಗ್ ಲೈಟ್ಸ್) ನೊಂದಿಗೆ ಹೊಸ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್ ಲ್ಯಾಂಪ್ ಹೊಂದಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

ಈ ಎಸ್‍ಯುವಿಯಲ್ಲಿ ಮರು-ಶೈಲಿಯ ಮುಂಭಾಗದ ಗ್ರಿಲ್ ಅನ್ನು ಹೊಂದಿದೆ. ಲ್ಯಾಂಡ್ ರೋವರ್ ಮುಂಭಾಗದ ಬಂಪರ್‌ಗಳನ್ನು ನವೀಕರಿಸಿದೆ, ಅದು ಈಗ ಅಡ್ಡ-ಸ್ಲ್ಯಾಟ್‌ಗಳೊಂದಿಗೆ ದೊಡ್ಡ ಸೈಡ್ ಏರ್ ವೆಂಟ್ಸ್ ಗಳನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿಯಲ್ಲಿ ಗ್ಲೋಸ್-ಬ್ಲ್ಯಾಕ್ ಫಿನಿಶ್ಡ್ ಸ್ಕಿಡ್ ಪ್ಲೇಟ್‌ನೊಂದಿಗೆ ಬರುತ್ತದೆ. ಇದು ಹೊಸ ಡಿಸ್ಕವರಿ ಎಸ್‍ಯುವಿಗೆ ಹೆಚ್ಚಿನ ಸ್ಪೋರ್ಟಿ ಲುಕ್ ನೀಡುತ್ತದೆ. 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿಯ ಸೈಡ್ ಪ್ರೊಫೈಲ್ ನಲ್ಲಿ ಉದ್ದಕ್ಕೂ ತೀಕ್ಷ್ಣವಾದ ಕ್ರೀಸ್ ನೀಡಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

ಈ ಕ್ರೀಸ್ ವ್ಹೀಲ್ ಕಮಾನುಗಳಲ್ಲಿನ ಸೈಡ್ ಬ್ಯಾಡ್ಜಿಂಗ್‌ನಿಂದ ಟೈಲ್ ಲೈಟ್ಸ್ ನಲ್ಲಿ ಕೊನೆಗೊಳ್ಳುತ್ತದೆ. ಹೊಸ ಡಿಸ್ಕವರಿ ಈಗ ಸ್ಟ್ಯಾಂಡರ್ಡ್ 20-ಇಂಚಿನ ಅಲಾಯ್ ವ್ಹೀಲ್ ಗಳೊಂದಿಗೆ ಬರುತ್ತದೆ, ಇದರೊಂದಿಗೆ 21 ಇಂಚಿನ ವ್ಹೀಲ್ ಗಳನ್ನು ಆಯ್ಕೆಯಾಗಿ ನೀಡಲಾಗುತ್ತದೆ.ಇನ್ನು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲೈಟ್ ಗಳನ್ನು ಹೊಂದಿವೆ. ಹಿಂಭಾಗದಲ್ಲಿ ‘ಡಿಸ್ಕವರಿ' ಬ್ಯಾಡ್ಜಿಂಗ್ ಅನ್ನು ಸಹ ಹೊಂದಿದೆ. ಹಿಂಭಾಗದ ಬಂಪರ್ ಅನ್ನು ಸಹ ನವೀಕರಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿಯಲ್ಲಿ 2.0-ಲೀಟರ್ ಟರ್ಬೋಚಾರ್ಜ್ಡ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 296 ಹೆಚ್‌ಪಿ ಮತ್ತು 400 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

ಇನ್ನು ಇದರ 3.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ 296 ಬಿಹೆಚ್‌ಪಿ ಮತ್ತು 650 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದರೊಂದಿಗೆ 3.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ 2021ರ ಲ್ಯಾಂಡ್ ರೋವರ್ ಡಿಸ್ಕವರಿ ಎಸ್‍ಯುವಿ

ಈ ಹೊಸ ಡಿಸ್ಕವರಿ ಎಸ್‍ಯುವಿಯಲ್ಲಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11.4 ಇಂಚಿನ ಇನ್ಫೋಟೈನ್ಮೆಂಟ್ ಸಿಸ್ಟಂ, ಕ್ಲಿಯರ್‌ಸೈಟ್ ಗ್ರೌಂಡ್ ವ್ಯೂ ಹೊಂದಿರುವ 3ಡಿ ಸರೌಂಡ್ ಕ್ಯಾಮೆರಾ, 15-ವ್ಯಾಟ್ ವೈರ್‌ಲೆಸ್ ಚಾರ್ಜಿಂಗ್, ಪಿಎಂ 2.5 ಕ್ಯಾಬಿನ್ ಏರ್ ಫಿಲ್ಟರೇಶನ್, ಮತ್ತು ಎರಡನೇ ಸಾಲಿನ ಸೀಟುಗಳು 160 ಎಂಎಂ ವರೆಗೆ ಎಲೆಕ್ಟ್ರಾನಿಕ್ ಹೊಂದಾಣಿಕೆ ಮಾಡಬಹುದಾಗಿದೆ.

Most Read Articles

Kannada
English summary
2021 Land Rover Discovery Update Listed On Indian Website Ahead Of Launch. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X