ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಸ್ವದೇಶಿ ಕಾರು ತಯಾರಕ ಕಂಪನಿಯಾದ ಮಹೀಂದ್ರಾ ತನ್ನ ಹೊಸ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಮೊದಲ ಅಧಿಕೃತ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಈ ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಯಾಗುವ ಸಾಧ್ಯತೆಗಳಿದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ವಿವಿಧ ವಿವರಗಳನ್ನು ಬಹಿರಂಗಪಡಿಸುವ ಟೀಸರ್ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. ಹೊಸ ಬೊಲೆರೊ ನಿಯೋ ಮಾದರಿಯು ಟಿಯುವಿಯು300 ಕಾಂಪ್ಯಾಕ್ಟ್ ಎಸ್‍ಯುವಿಯ ರಿ-ಬ್ಯಾಡ್ಕ್ ಆವೃತ್ತಿಯಾಗಿರುತ್ತದೆ. ಹೊಸ ಮಹೀಂದ್ರಾ ಬೊಲೆರೊ ನಿಯೋ ಭಾರತದಲ್ಲಿ ಈಗಾಗಲೇ ಹಲವು ಬಾರಿ ಸ್ಫಾಟ್ ಟೆಸ್ಟ್ ಅನ್ನು ನಡೆಸಲಾಗಿತ್ತು. ಈ ಕಾಂಪ್ಯಾಕ್ಟ್ ಎಸ್‍ಯುವಿ ಒಟ್ಟಾರೆ ಪ್ರೊಫೈಲ್ ಟಿಯುವಿಯು300 ಮಾದರಿಗೆ ಹೋಲುತ್ತದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಹೊಸ ಬೊಲೆರೊ ನಿಯೋ ಮುಂಭಾಗದ ಹೊಸ ಫಾಸಿಕವನ್ನು ಹೊಂದಿದ್ದು, ಹೊಸ ಸಿಕ್ಸ್-ಸ್ಲ್ಯಾಟ್ ಕ್ರೋಮ್ ಗ್ರಿಲ್, ಡಿಆರ್‌ಎಲ್‌ಗಳೊಂದಿಗೆ ಹೊಸ ವಿನ್ಯಾಸದ ಹೆಡ್‌ಲ್ಯಾಂಪ್‌ಗಳು (ಡೇಟೈಮ್ ರನ್ನಿಂಗ್ ಲ್ಯಾಂಪ್‌ಗಳು), ಮರುವಿನ್ಯಾಸಗೊಳಿಸಲಾದ ಫಾಗ್ ಲ್ಯಾಂಪ್ ಮತ್ತು ಹೊಸ ಬಂಪರ್ ಅನ್ನು ಹೊಂದಿದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಎಸ್‌ಯುವಿ ಹೊಸದಾಗಿ ಶೈಲಿಯ ಡ್ಯುಯಲ್ ಫೈವ್-ಸ್ಪೋಕ್ ಅಲಾಯ್ ವ್ಹೀಲ್‌ಗಳೊಂದಿಗೆ ಸಿಲ್ವರ್ ಅಂಶಗಳನ್ನು ಹೊಂದಿವೆ. ಎಸ್‌ಯುವಿ ಕ್ಲಾಮ್-ಶೆಲ್ ಬಾನೆಟ್, ವ್ಹೀಲ್ ಆರ್ಚಾರ್ ಮತ್ತು ಹೆಡ್‌ಲ್ಯಾಂಪ್‌ಗಳನ್ನು ಉಳಿಸಿಕೊಂಡಿದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಎಸ್‌ಯುವಿ ಹೊಸ ಹಿಂಭಾಗದ ಬಂಪರ್ ಮತ್ತು ಟೈಲ್-ಲ್ಯಾಂಪ್‌ಗಳನ್ನು ಜೊತೆಗೆ ಟೈಲ್‌ಗೇಟ್‌ನಲ್ಲಿ ಸ್ಪೇರ್ ವೀಲ್ ಕವರ್ ಅನ್ನು ಪಡೆಯುತ್ತದೆ. ಈ ಹೊಸ ಎಸ್‍ಯುವಿಯ ಟೀಸರ್ ವಿಡಿಯೋದಲ್ಲಿ ರೂಫ್ ರೈಲ್ ಮಿಸ್ಸ್ ಆಗಿದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಮಹೀಂದ್ರಾ ನಿಯೋ ಕ್ಯಾಬಿನ್ ಗಮನಾರ್ಹ ಬದಲಾವಣೆಗಳೊಂದಿಗೆ ಬರಲಿದೆ ಎಂದು ಟೀಸರ್ ಬಹಿರಂಗಪಡಿಸಿದೆ. ಇದು ನವೀಕರಿಸಿದ ಇನ್ಸ್ ಟ್ರೂಮೆಂಟ್ ನ್ಸೋಲ್, ಹೊಸ ಟೆಕ್ಸ್ಚರ್ಡ್ ಸೀಟುಗಳು, ಬೀಜ್ ಕಲರ್ ಅಪ್ಹೋಲ್ಸ್ಟರಿ ಮತ್ತು ಬ್ಲ್ಯಾಕ್ ಸ್ಟೀರಿಂಗ್ ವ್ಹೀಲ್ ಅನ್ನು ಹೊಂದಿರುತ್ತದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಎರಡನೇ ಸೀಟಿನಲ್ಲಿ ಆರ್ಮ್ ರೆಸ್ಟ್ ಮತ್ತು ಹೆಡ್ ರೆಸ್ಟ್ ಅನ್ನು ಹೊಂದಿದೆ. ಈ ಹೊಸ ಬೊಲೆರೊ ನಿಯೋ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಪಡೆಯುವ ಸಾಧ್ಯತೆಯಿದೆ.

ಇನ್ನು ಈ ಎಸ್‍ಯುವಿಯಲ್ಲಿ ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಮಲ್ಟಿ-ಫಂಕ್ಷನಲ್ ಸ್ಟೀಯರಿಂಗ್ ವ್ಹೀಲ್, ರಿವರ್ಸ್ ಕ್ಯಾಮೆರಾ ಮತ್ತು ಇತ್ಯಾದಿ ಫೀಚರ್ಸ್ ಗಳನ್ನು ಹೊಂದಿವೆ. ಇನ್ನು ಈ ಹೊಸ ಮಹೀಂದ್ರಾ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯಲ್ಲಿ ಟಿಯುವಿ300 ಮಾದರಿಯಲ್ಲಿದ್ದ ಅದೇ 1.5-ಲೀಟರ್, 3-ಸಿಲಿಂಡರ್ ಡೀಸೆಲ್ ಎಂಜಿನ್ ಅನ್ನು ಹೊಂದುವ ಸಾಧ್ಯತೆಯಿದೆ.

ಹೊಸ ಮಹೀಂದ್ರಾ ಬೊಲೆರೊ ನಿಯೋ ಕಾಂಪ್ಯಾಕ್ಟ್ ಎಸ್‌ಯುವಿಯ ಟೀಸರ್ ಬಿಡುಗಡೆ

ಈ ಎಂಜಿನ್ ಈ ಎಂಜಿನ್ ಅನ್ನು ಟ್ಯೂನ್ ಮಾಡಲಾಗುತ್ತದೆ. ಬಿಎಸ್4 ಆವೃತ್ತಿಯು 100 ಬಿಹೆಚ್‌ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಎಂಜಿನ್ ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಸ್ಟ್ಯಾಂಡರ್ಡ್ ಆಗಿ ಬರುತ್ತದೆ. ನಿಯೋ ಎಂಜಿನ್ ಸ್ಟಾರ್ಟ್-ಸ್ಟಾಪ್ ಸಿಸ್ಟಂ ಅನ್ನು ಪಡೆಯುವ ನಿರೀಕ್ಷಿಯಿದೆ.

Most Read Articles

Kannada
English summary
Mahindra Bolero Neo India Launch Teased. Read In Kannada.
Story first published: Monday, July 5, 2021, 19:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X