Just In
- 2 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- News
ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ಜೆ.ಸಿ. ಮಾಧುಸ್ವಾಮಿ ರಾಜೀನಾಮೆ?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಮರಾಜೋ ಪೆಟ್ರೋಲ್ ವೆರಿಯೆಂಟ್
ನ್ಯೂ ಜನರೇಷನ್ ಮಹೀಂದ್ರಾ ಥಾರ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸಿದೆ. ಐಕಾನಿಕ್-ಆಫ್ ರೋಡರ್ ಮಹೀಂದ್ರಾ ಥಾರ್ ಎಸ್‍ಯುವಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಥಾರ್ ದೊಡ್ಡ ಯಶಸ್ಸನ್ನು ಕಂಡಿರುವುದರಿದರಿಂದ ಇದರ ಉತ್ಪಾದನೆಯನ್ನು ಮಹೀಂದ್ರಾ ಕಂಪನಿಯು ಹೆಚ್ಚಿಸಿದೆ.

ಇದರೊಂದಿಗೆ ಹೊಸ ತಲೆಮಾರಿನ ಎಕ್ಸ್‌ಯುವಿ 500, ಸ್ಕಾರ್ಪಿಯೋ, ಬಿಎಸ್-6 ಟಿಯುವಿ 300 ಮತ್ತು ಇತರ ಎಸ್‍ಯುವಿಗಳನ್ನು ಕೂಡ ಮಹೀಂದ್ರಾ ಕಂಪನಿಯು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ನಡುವೆ ಸದ್ದಿಲ್ಲದೇ ಹೊಸ ಮಹೀಂದ್ರಾ ಮರಾಜೋ ಎಂಪಿವಿ ಸ್ಪಾಟ್ ಟೆಸ್ಟ್ ನಲ್ಲಿ ಕಾಣಿಸಿಕೊಂಡಿದೆ. ಎಂಪಿವಿಯ ಸಾಲಿನಲ್ಲಿ ಕಂಪನಿಯು ಒಂದೆರಡು ಹೊಸ ಎಂಜಿನ್ ಎಂಜಿನ್ ಗಳ ಆಯ್ಕೆಗಳನ್ನು ಪರಿಚಯಿಸುವ ನಿರೀಕ್ಷೆಯಿದೆ. ಈ ಎಂಪಿವಿ ಹೊಸ ಟರ್ಬೊ-ಪೆಟ್ರೋಲ್ ಯುನಿಟ್ ಅಥವಾ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಒಳಗೊಂಡಿರುತ್ತದೆ.

ಹೊಸ ಮಹೀಂದ್ರಾ ಮರಾಜೋ ಎಂಪಿವಿ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳನ್ನು ಗಾಡಿವಾಡಿ ಬಹಿರಂಗಪಡಿಸಿದೆ. ಇದು ಹೊಸ ಮಹೀಂದ್ರಾ ಪೆಟ್ರೋಲ್ ವೆರಿಯೆಂಟ್ ಎಂದು ನಾವು ನಿರೀಕ್ಷಿಸುತ್ತೇವೆ. ಈ ಹೊಸ ಎಂಪಿವಿಯನ್ನು ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.
MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಮಹೀಂದ್ರಾ ಮುಂಬರುವ ಬಿಎಸ್ 6 ಪವರ್‌ಟ್ರೇನ್ ಅನ್ನು 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತು. ಹೊಸ 1.5-ಲೀಟರ್ ‘ಜಿ 15' ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಮರಾಜೋ ಎಂಪಿವಿಯಲ್ಲಿ ಅಳವಡಿಸಬಹುದು.

ಈ ಹೊಸ 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 162 ಬಿಹೆಚ್‌ಪಿ ಪವರ್ ಮತ್ತು 280 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ. ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ಗೆ ಜೋಡಿಸುವ ಸಾಧ್ಯತೆಯಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಮುಂದಿಬರುವ ಮಹೀಂದ್ರಾ ಎಸ್‍ಯುವಿಗಳಲ್ಲಿ ಮತ್ತು ಎಂಪಿವಿಗಳು ಸೇರಿದಂತೆ ಹಲವು ಮಾದರಿಗಳಿಗೆ ಈ ಎಂಜಿನ್ ಅನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ. ಈ ನಿರ್ದಿಷ್ಟ ಎಂಜಿನ್ ಅನ್ನು ಈಗಾಗಲೇ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಮಾರಾಟವಾಗುತ್ತಿರುವ ಸಾಂಗ್‌ಯಾಂಗ್ ಕೊರಂಡೊ ಎಸ್‌ಯುವಿಗೆ ನೀಡಲಾಗಿದೆ.

ಹೊಸ ಮಹೀಂದ್ರಾ ಮರಾಜೋ ಎಂಪಿವಿಯಲ್ಲಿ 6-ಸ್ಪೀಡ್ ಟಾರ್ಕ್ ಕರ್ನವಾಟರ್ ಯುನಿಟ್ ಅನ್ನು ಆಯ್ಕೆಯಾಗಿ ನೀಡಬಹುದು. ಹೊಸ ಥಾರ್ ಮಾದರಿಯಲ್ಲಿ ಇದನ್ನು ನೀಡಲಾಗಿದೆ. ಇನ್ನು ಭಾರತದಲ್ಲಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಬೇಡಿಕೆ ಹೆಚ್ಚಳದಿಂದಾಗಿ, ಮಹೀಂದ್ರಾ ಶೀಘ್ರದಲ್ಲೇ ಹೊಸ ಗೇರ್‌ಬಾಕ್ಸ್ ಅನ್ನು ಈ ಎಂಪಿವಿಯಲ್ಲಿ ಪರಿಚಯಿಸಬಹುದು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಮರಾಜೋ ಎಂಪಿವಿಯಲ್ಲಿ 1.5 ಲೀಟರಿನ ಡೀಸೆಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 3,500 ಆರ್‌ಪಿಎಂನಲ್ಲಿ 121 ಬಿಹೆಚ್‌ಪಿ ಪವರ್ ಹಾಗೂ 1750 ರಿಂದ 2500 ಆರ್‌ಪಿಎಂನಲ್ಲಿ 300 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿ ಅನ್ನು ಸ್ಪೀಡ್ ಮ್ಯಾನ್ಯುವಲ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಮಹೀಂದ್ರಾ ಮರಾಜೋ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಪಿವಿಗಳಲ್ಲಿ ಒಂದಾಗಿದೆ. ಈ ಜನಪ್ರಿಯ ಎಂಪಿವಿಯನ್ನು ಹೊಸ ಎಂಜಿನ್ ಮತ್ತು ಹೊಸ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮಹೀಂದ್ರಾ ಸಜ್ಜಾಗುತ್ತಿದೆ.