ವಿನೂತನ ಫೀಚರ್ಸ್ ಒಳಗೊಂಡಿರಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ ಡ್ಯಾಶ್‌ಬೋರ್ಡ್
ನ್ಯೂ ಜನರೇಷನ್ ಸ್ಕಾರ್ಪಿಯೋ ಎಸ್‌ಯುವಿ ಮಾದರಿಯ ಬಿಡುಗಡೆಗಾಗಿ ಮಹೀಂದ್ರಾ ಕಂಪನಿಯು ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹಲವು ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಯ ಸಿದ್ದತೆಯಲ್ಲಿದೆ.

ಸ್ಕಾರ್ಪಿಯೋ ಹೊಸ ತಲೆಮಾರಿನ ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಮಹೀಂದ್ರಾ ಹೊಸ ಬದಲಾವಣೆಯೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವ ಕಂಪನಿಯು ವರ್ಷಾಂತ್ಯಕ್ಕೆ ಇಲ್ಲವೇ ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಹೊಸ ಸ್ಕಾರ್ಪಿಯೋ ಕಾರು ಮಾದರಿಯ ಮಾರಾಜೋ ಎಂಪಿವಿ ಹೊಸ ಆವೃತ್ತಿಯಿಂದಲೂ ಕೆಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಎರವಲು ಪಡೆದುಕೊಂಡಿದ್ದು, ಹೊಸ ಫೀಚರ್ಸ್‌ಗಳಿಂದಾಗಿ ಸ್ಕಾರ್ಪಿಯೋ ಕಾರು ಮತ್ತಷ್ಟು ಬಲಿಷ್ಠ ವಿನ್ಯಾಸದೊಂದಿಗೆ ವಿಸ್ತರಿತ ವೀಲ್ಹ್ ಬೆಸ್ ಮೂಲಕ ಅರಾಮದಾಯಕ ಕ್ಯಾಬಿನ್ ಸ್ಪೆಸ್ ಹೊಂದಿದೆ.

ಹೊಸ ಕಾರಿನಲ್ಲಿ ಆಕರ್ಷಕವಾದ ಪ್ರೀಮಿಯಂ ಫೀಚರ್ಸ್ ಜೊತೆಗೆ ಹೆಚ್ಚಿನ ಮಟ್ಟದ ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದ್ದು, ಆರಾಮದಾಯಕವಾದ ಆಸನ ಸೌಲಭ್ಯದೊಂದಿಗೆ ಅಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್ ಪ್ಲೇ ಸರ್ಪೊಟ್ ಮಾಡುವ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್ ಕಂಟ್ರೋಲ್ ಸೇರಿದಂತೆ ಹಲವು ಹೊಸ ಸೌಲಭ್ಯಗಳಿವೆ.

ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ ಮಲ್ಟಿ ಏರ್‌ಬ್ಯಾಗ್, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ರಿಯರ್ ಪಾರ್ಕಿಂಗ್ ಕ್ಯಾಮೆರಾ, ಆಯ್ದ ವೆರಿಯೆಂಟ್‌ಗಳಲ್ಲಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಕ್ರೂಸ್ ಕಂಟ್ರೋಲ್, ಸನ್‌ರೂಫ್, ಪುಶ್ ಬಟನ್ ಆನ್/ಆಫ್, ಕೀ ಲೆಸ್ ಎಂಟ್ರಿ, ರೂಫ್ ರೈಲ್ಸ್, ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಫಾಗ್ ಲ್ಯಾಂಪ್, ಟರ್ನ್ ಇಂಡಿಕೇಟಕ್ ಲೈಟ್, ಸಿಲ್ವರ್ ಸ್ಕೀಡ್ ಪ್ಲೇಟ್ ಸೌಲಭ್ಯಗಳಿರಲಿವೆ.

ಹಾಗೆಯ ಹೊಸ ವಿನ್ಯಾಸದ 17 ಇಂಚಿನ ಅಲಾಯ್ ವೀಲ್ಹ್‌ಗಳು, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್ ಮತ್ತು ವಿಸ್ತರಿತ ವೀಲ್ಹ್‌ಬೆಸ್‌ನಿಂದಾಗಿ ಮೂರನೇ ಸಾಲಿನ ಪ್ರಯಾಣಿಕರಿಗೆ ಹೆಚ್ಚಿನ ಮಟ್ಟದ ಸ್ಥಳಾವಕಾಶ ನೀಡಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇದಲ್ಲದೆ ಹೊಸ ಕಾರಿನಲ್ಲಿ ರಿಯರ್ ಎಸಿ ವೆಂಟ್ಸ್, ಲೆದರ್ ಸೀಟುಗಳು, 6 ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳಬಹುದಾದ ಡ್ರೈವರ್ ಸೀಟ್ ಸೇರಿದಂತೆ ಹೊಸ ಕಾರಿನಲ್ಲಿ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಸದ್ಯ ಮಾರುಕಟ್ಟೆಯಲ್ಲಿರುವ ಸ್ಕಾರ್ಪಿಯೋ ಎಸ್‌ಯುವಿ ಕಾರು ಮಾದರಿಯು ಪ್ರಮುಖ ಐದು ವೆರಿಯೆಂಟ್‌ಗಳೊಂದಿಗೆ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12.31 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.02 ಲಕ್ಷ ಬೆಲೆ ಹೊಂದಿದೆ.
MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಹೊಸ ತಲೆಮಾರಿನ ಆವೃತ್ತಿಯು ಪ್ರಸ್ತುತ ಮಾದರಿಗಿಂತಲೂ ರೂ.1 ಲಕ್ಷದಿಂದ 1.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಹೊಸ ಕಾರಿನಲ್ಲಿ ಹೊಸ ವಿನ್ಯಾಸ, ವಿಸ್ತರಿತ ಕ್ಯಾಬಿನ್ ಸ್ಥಳಾವಕಾಶ, ವಿವಿಧ ಎಂಜಿನ್ ಆಯ್ಕೆಯು ಸ್ಕಾರ್ಪಿಯೋ ಕಾರು ಬೇಡಿಕೆ ಹೆಚ್ಚಿಸಲಿದೆ.


Click it and Unblock the Notifications








