Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 3 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 4 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಮಹೀಂದ್ರಾ ಎಕ್ಸ್‌ಯುವಿ300 ಪರ್ಫಾಮೆನ್ಸ್ ವೆರಿಯೆಂಟ್
ಜನಪ್ರಿಯ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ಕಳೆದ ರ್ಷದ ಆಟೋ ಎಕ್ಸ್‌ಪೋದಲ್ಲಿ ಎಕ್ಸ್‌ಯುವಿ300 ಸ್ಪೋಟ್ಜ್ ವೆರಿಯೆಂಟ್ ಅನ್ನು ಪ್ರದರ್ಶಿಸಿತು. ಈ ಕಾಂಪ್ಯಾಕ್ಟ್ ಎಸ್‍ಯುವಿಯು ಆಟೋ ಎಕ್ಸ್‌ಪೋದಲ್ಲಿ ಹಲವು ಜನರ ಗಮನ ಸೆಳೆಯಿತು.

ಎಕ್ಸ್‌ಯುವಿ300 ಸ್ಪೋಟ್ಜ್ ಮಹೀಂದ್ರಾ ಮೂಲದ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ ಸ್ಪೋರ್ಟಿಯರ್ ಪರ್ಫಾಮೆನ್ಸ್-ಆಧಾರಿತ ಆವೃತ್ತಿಯಾಗಿದೆ. ಈ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯು ಇತ್ತೀಚೆಗೆ ಚೆನ್ನೈನಲ್ಲಿ ಟೇಲ್ಸ್ ಆಫ್ ಮೈಲ್ಸ್ ಟೆಸ್ಟ್ ನಡೆಸಿದೆ. ಈ ಹೊಸ ಕಾಂಪ್ಯಾಕ್ಟ್ ಎಸ್‌ಯುವಿಯು ಸಂಪೂರ್ಣವಾಗಿ ಮರೆಮಾಚಿ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಮಾದರಿಯು ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದಂತೆ ವಿನ್ಯಾಸದ ಪ್ರಕಾರ, ಎಕ್ಸ್‌ಯುವಿ300 ಸ್ಪೋಟ್ಜ್ ಸಾಮಾನ್ಯ ಮಾದರಿಗೆ ಹೋಲುತ್ತದೆ, ಇದು ತನ್ನನ್ನು ಪ್ರತ್ಯೇಕಿಸಲು ಕೆಲವು ಕಾಸ್ಮೆಟಿಕ್ ವ್ಯತ್ಯಾಸಗಳನ್ನು ಹೊಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಮಹೀಂದ್ರಾ ಎಕ್ಸ್‌ಯುವಿ300 ಸ್ಪೋಟ್ಜ್ ವೆರಿಯೆಂಟ್ ಸ್ಪೋರ್ಟಿಯರ್ ಮತ್ತು ಎಡ್ಜಿಯರ್ ಆಗಿ ಕಾಣುವಂತೆ ವ್ಯಾಪಕವಾದ ಬಾಡಿ ಗ್ರಾಫಿಕ್ಸ್‌ನೊಂದಿಗೆ ಬರುತ್ತದೆ. ಇದರ ಬದಿಗಳಲ್ಲಿ ಮತ್ತು ಬ್ರೇಕ್ ಕ್ಯಾಲಿಪರ್‌ಗಳಲ್ಲಿ ಕೆಂಪು ಅಸ್ಸೆಂಟ್ ಗಳನ್ನು ಹೊಂದಿರುತ್ತದೆ.

ಇನ್ನು ಈ ಸಬ್ ಕಾಂಪ್ಯಾಕ್ಟ್ ಎಸ್‍ಯುವಿ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಇನ್ನು ಇದರಲ್ಲಿ ರೂಫ್ ರೈಲ್, ಸೈಡ್ ಬಾಡಿ ಕ್ಲಾಡಿಂಗ್ ಮತ್ತು ಗ್ರಿಲ್, ಹೆಡ್‌ಲ್ಯಾಂಪ್‌ಗಳು ಮತ್ತು ಪಾಗ್ ಲ್ಯಾಂಪ್ ಸುತ್ತಲೂ ಬ್ಲ್ಯಾಕ್ ಫಿನಿಶ್‌ನಂತಹ ಬ್ಲ್ಯಾಕ್ ಔಟ್ ಅಂಶಗಳಿಂದ ಎದ್ದು ಕಾಣುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಇದರ ಒಆರ್ವಿಎಂ ಅರ್ಧ ಬ್ಲ್ಯಾಕ್ ಮತ್ತು ಅರ್ಧ ಬಾಡಿಯ ಬಣ್ಣದಿಂದ ಕೂಡಿದೆ. ಇನ್ನು ಈ ಮಹೀಂದ್ರಾ ಎಕ್ಸ್‌ಯುವಿ300 ಪರ್ಫಾಮೆನ್ಸ್ ಮಾದರಿಯಲ್ಲಿ 17 ಇಂಚಿನ ಡ್ಯುಯಲ್-ಟೋನ್ ಅಲಾಯ್ ವ್ಹೀಲ್‌ಗಳನ್ನು ನೀಡಿದೆ. ಇದು ಅತ್ಯಂತ ಆಕರ್ಷಕವಾಗಿ ಕಾಣುತ್ತದೆ ಮತ್ತು ಕಾರಿನ ಒಟ್ಟಾರೆ ಸ್ಪೋರ್ಟಿ ಥೀಮ್‌ಗೆ ಪೂರಕವಾಗಿದೆ

ಇನ್ನು ಮಹೀಂದ್ರಾ ಎಕ್ಸ್‌ಯುವಿ300 ಸ್ಪೋಟ್ಜ್ ವೆರಿಯೆಂಟ್ ಟೆಸ್ಟ್ ನಡೆಸುವ ವೇಳೆ ಬ್ಲ್ಯಾಕ್ ಅಲಾಯ್ ವ್ಹೀಲ್ ಅನ್ನು ಹೊಂದಿತ್ತು. ಇನ್ನು ಈ ಸಬ್ ಕಾಂಪ್ಯಾಕ್ಟ್ ಎಸ್‍ಯುವಿ ಒಳಭಾಗದಲ್ಲಿ ಇದು ಪರ್ಫಾಮೆನ್ಸ್ ಮಾದರಿಯಾಗಿರುವುದರಿಂದ ಕೆಂಪು ಬಣ್ಣದ ಅಸೆಂಟ್ ಗಳನ್ನು ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಸ್ಟ್ಯಾಂಡರ್ಡ್ ಮಹೀಂದ್ರಾ ಎಕ್ಸ್‌ಯುವಿ300 ಸಬ್ ಕಾಂಪ್ಯಾಕ್ಟ್ ಎಸ್‍ಯುವಿಗೆ ಹೋಲಿಸಿದರೆ ಈ ಪರ್ಫಾಮೆನ್ಸ್ ಮಾದರಿಯಲ್ಲಿ ಪ್ರಮುಖ ಬದಲಾವಣೆಯು ಎಂಜಿನ್ ಆಗಿದೆ. ಈ ಪರ್ಫಾಮೆನ್ಸ್ ವೆರಿಯೆಂಟ್ ನಲ್ಲಿ 1.2-ಲೀಟರ್ ಮೂರು ಸಿಲಿಂಡರ್, ಟರ್ಬೊ-ಪೆಟ್ರೋಲ್ ಜಿಡಿಐ ಎಂಸ್ಟಾಲಿಯನ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಈ ಎಂಜಿನ್ 130 ಬಿಹೆಚ್‌ಪಿ ಪವರ್ ಮತ್ತು 230 ಎನ್‌ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಲಭ್ಯವಿರುವ ಅತ್ಯಂತ ಪವರ್ ಫುಲ್ ಮತ್ತು ಟಾರ್ಕಿಯೆಸ್ಟ್ ಎಂಜಿನ್ ಇದಾಗಿರುತ್ತದೆ. ಇನ್ನು ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.
Image Courtesy: yt_talesofmiles