ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಮಹೀಂದ್ರಾ(Mahindra) ಕಂಪನಿಯು ತನ್ನ ಹೊಸ ಎಕ್ಸ್‌ಯುವಿ700(XUV700) ಎಸ್‌ಯುವಿ ಮಾದರಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದು, ಹೊಸ ಕಾರು ಅಧಿಕೃತ ಬಿಡುಗಡೆಗೂ ಮುನ್ನ ಸ್ಪರ್ಧಾತ್ಮಕ ಬೆಲೆಗಳಲ್ಲಿ ಬಿಡುಗಡೆಯಾಗುವ ಬಗೆಗೆ ಹಲವು ಮಾಹಿತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ವಿವಿಧ ವೆರಿಯೆಂಟ್‌ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ. ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯನ್ನು ಆಧರಿಸಿ ಹೊಸ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿದ್ದು, ಹೊಸ ಕಾರಿನ ಬೆಲೆ ಮಾಹಿತಿಯು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗುತ್ತಿದ್ದಂತೆ ಕಾರು ಖರೀದಿಗಾಗಿ ಭಾರೀ ಪ್ರಮಾಣದ ಬೇಡಿಕೆ ಸಲ್ಲಿಕೆಯಾಗುತ್ತಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಹೊಸ ಎಸ್‌ಯುವಿ ಮಾದರಿಯ ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಎರಡು ಮಾದರಿಗಳಲ್ಲಿ ಎಂಜಿನ್, ಗೇರ್‌ಬಾಕ್ಸ್ ಆಯ್ಕೆ ಆಧರಿಸಿ ಸುಮಾರು 29 ವೆರಿಯೆಂಟ್‌ಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಎಂಎಕ್ಸ್ ಸೀರಿಸ್ ಮತ್ತು ಆಂಡ್ರಿನೊಎಕ್ಸ್ ಸೀರಿಸ್‌ ಒಳಗೊಂಡಿರುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ 5 ಸೀಟರ್‌ ಮತ್ತು 7 ಸೀಟರ್ ಸೌಲಭ್ಯವನ್ನು ಹೊಂದಿದ್ದು, ಏಳು ಆಸನ ಹೊಂದಿರುವ ಮಾದರಿಗಳು ತುಸು ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿವೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಹೊಸ ಕಾರಿನ ಆರಂಭಿಕ ಆವೃತ್ತಿಯ ಬೆಲೆಯನ್ನು ಈಗಾಗಲೇ ಬಹಿರಂಗ ಪಡಿಸಲಾಗಿದ್ದು, ಆರಂಭಿಕ ಆವೃತ್ತಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14.99 ಲಕ್ಷ ಬೆಲೆ ಹೊಂದಿರುವುದು ಖಚಿತವಾಗಿದೆ. ಆದರೆ ಹೆಚ್ಚಿನ ಮಟ್ಟದ ತಾಂತ್ರಿಕ ಅಂಶಗಳನ್ನು ಹೊಂದಿರುವ ಮಾದರಿಗಳು ಆರಂಭಿಕವಾಗಿ ರೂ.15 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 21.69 ಲಕ್ಷ ಬೆಲೆ ಹೊಂದಿರಬಹುದು ಎನ್ನಲಾಗಿದೆ.

Mahindra XUV700 Speculative Prices
MX Gasoline, 6MT 200 PS, 380Nm, 5 Seater ₹11.99 Lakh
MX Gasoline, 6MT 200 PS, 380Nm, 7 Seater ₹12.69 Lakh
AX 3 Gasoline, 6MT 200 PS, 380Nm, 5 Seater ₹13.99 Lakh
AX 5 Gasoline, 6MT 200 PS, 380Nm, 5 Seater ₹14.99 Lakh
AX 5 Gasoline, 6MT 200 PS, 380Nm, 7 Seater ₹15.69 Lakh
AX 5 Gasoline, 6AT 200 PS, 380Nm, 5 Seater ₹16.29 Lakh
AX 5 Gasoline, 6AT 200 PS, 380Nm, 7 Seater ₹16.99 Lakh
AX 5 Gasoline, 6AT, O* 200 PS, 380Nm, 5 Seater ₹16.99 Lakh
AX 5 Gasoline, 6AT, O* 200 PS, 380Nm, 7 Seater ₹17.69 Lakh
AX 5 Gasoline, 6AT, AWD 200 PS, 380Nm, 7 Seater ₹18.49 Lakh
AX 5 Gasoline, 6AT, O*, AWD 200 PS, 380Nm, 5 Seater ₹18.49 Lakh
AX 7 Gasoline, 6AT 200 PS, 380Nm, 7 Seater ₹18.49 Lakh
AX 7 Gasoline, 6AT, O* 200 PS, 380Nm, 7 Seater ₹19.19 Lakh
AX 7 Gasoline, 6AT, AWD 200 PS, 380Nm, 7 Seater ₹19.99 Lakh
AX 7 Gasoline, 6AT, O*, AWD 200 PS, 380Nm, 7 Seater ₹20.69 Lakh
MX Diesel, 6MT 155 PS, 260Nm, 5 Seater ₹12.49 Lakh
MX Diesel, 6MT 155 PS, 260Nm, 7 Seater ₹13.19 Lakh
AX 3 Diesel, 6MT 185 PS, 420Nm, 5 Seater ₹14.99 Lakh
AX 5 Diesel, 6MT 185 PS, 420Nm, 5 Seater ₹15.99 Lakh
AX 5 Diesel, 6MT 185 PS, 420Nm, 7 Seater ₹16.69 Lakh
AX 5 Diesel, 6AT 185 PS, 450Nm, 5 Seater ₹17.29 Lakh
AX 5 Diesel, 6AT, AWD 185 PS, 450Nm, 5 Seater ₹18.79 Lakh
AX 5 Diesel, 6AT 185 PS, 450Nm, 7 Seater ₹17.79 Lakh
AX 5 Diesel, 6AT, O* 185 PS, 450Nm, 5 Seater ₹17.79 Lakh
AX 5 Diesel, 6AT, O* 185 PS, 450Nm, 7 Seater ₹18.69 Lakh
AX 5 Diesel, 6AT, O*, AWD 185 PS, 450Nm, 5 Seater ₹19.49 Lakh
AX 7 Diesel, 6AT 185 PS, 450Nm, 7 Seater ₹19.49 Lakh
AX 7 Diesel, 6AT, O* 185 PS, 450Nm, 7 Seater ₹20.19 Lakh
AX 7 Diesel, 6AT, O*, AWD 185 PS, 450Nm, 7 Seater ₹21.69 Lakh
ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಟಾಪ್ ಎಂಡ್‌ನಲ್ಲಿರುವ ಪ್ರಮುಖ ವೆರಿಯೆಂಟ್ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಅಂಶಗಳನ್ನು ಹೊಂದಿದ್ದು, ಗ್ರಾಹಕರು ತಮ್ಮ ಬೇಡಿಕೆಗೆ ಅನುಗುಣವಾಗಿ ವಿವಿಧ ದರ ಶ್ರೇಣಿಯಲ್ಲಿ ಹೊಸ ಕಾರನ್ನು ಆಯ್ಕೆ ಮಾಡಬಹುದಾಗಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಎಕ್ಸ್‌ಯುವಿ700 ಕಾರು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಗಳಲ್ಲೂ ಮಾರಾಟಗೊಳ್ಳಲಿದ್ದು, ಆರಂಭಿಕ ಮಾದರಿಗಳಲ್ಲಿ MX ವೆರಿಯೆಂಟ್ ನಂತರ AX3, AX5 ಮತ್ತು AX7 ವೆರಿಯೆಂಟ್‌ಗಳು ಮಾರಾಟಗೊಳ್ಳಲಿವೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಆರಂಭಿಕ ಎಂಎಕ್ಸ್ ವೆರಿಯೆಂಟ್‌ನಲ್ಲಿ ಮಹೀಂದ್ರಾ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಗಳನ್ನು ನೀಡುತ್ತಿದ್ದು, ಇದು 5 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಮ್ಯಾನುವಲ್ ಆವೃತ್ತಿಯಲ್ಲಿ ಮಾತ್ರ ಮಾರಾಟವಾಗಲಿದೆಯೆಂತೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಎಎಕ್ಸ್3 ವೆರಿಯೆಂಟ್‌ಗಳು ಐದು ಆಸನ ಸೌಲಭ್ಯವನ್ನು ಮಾತ್ರ ಹೊಂದಿದ್ದು, ಇದರಲ್ಲೂ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ. ಆದರೆ ಈ ರೂಪಾಂತರದಲ್ಲಿ ಕೇವಲ ಮ್ಯಾನುವಲ್ ಗೇರ್‌ಬಾಕ್ಸ್ ಮಾತ್ರ ಲಭ್ಯವಿರಲಿದೆಯೆಂತೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಎಎಕ್ಸ್5 ವೆರಿಯೆಂಟ್‌ಗಳು ಸಹ ಐದು ಮತ್ತು ಏಳು ಆಸನಗಳ ಆಯ್ಕೆಗಳಲ್ಲಿ ಖರೀದಿ ಲಭ್ಯವಿರಲಿದ್ದು, ಎಎಕ್ಸ್5 ಮಾದರಿಗಳಲ್ಲೂ ಕಂಪನಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಮಾದರಿಗಳನ್ನು ಬಿಡುಗಡೆ ಮಾಡಲಿದೆ. ಜೊತೆಗೆ ಮಧ್ಯಮ ಕ್ರಮಾಂಕದಲ್ಲಿರುವ ಎಎಕ್ಸ್5 ಮಾದರಿಯ ಹೈ ಎಂಡ್ ಮಾದರಿಯಲ್ಲಿ ಕಂಪನಿಯು ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಜೋಡಣೆ ಮಾಡಬಹುದಾಗಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಇನ್ನುಳಿದಂತೆ ಎಎಕ್ಸ್7 ಟಾಪ್ ಎಂಡ್ ಮಾದರಿಯಲ್ಲಿ ಕಂಪನಿಯು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಏಳು ಆಸನ ಆವೃತ್ತಿಯನ್ನು ಮಾತ್ರ ಬಿಡುಗಡೆ ಮಾಡುತ್ತಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮಾದರಿಗಳನ್ನು ಹೊಂದಿರುವ ಟಾಪ್ ಎಂಡ್ ಮಾದರಿಯಲ್ಲಿ ಹೆಚ್ಚಿರುವರಿಯಾಗಿ ಹಲವಾರು ಸುಧಾರಿತ ಫೀಚರ್ಸ್‌ಗಳು ಜೋಡಣೆ ಮಾಡಲಿದೆಯೆಂತೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(ಎಂಟಿ),450-ಎನ್ಎಂ ಟಾರ್ಕ್(ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಲ್ಲೂ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳು ಲಭ್ಯವಿದ್ದು, ಹೈ ಎಂಡ್ ಮಾದರಿಗಳಲ್ಲಿ ಮಹೀಂದ್ರಾ ಕಂಪನಿಯು 4x4 ಆಲ್ ವ್ಹೀಲ್ ಡ್ರೈವ್ ಸಿಸ್ಟಂ ಜೋಡಣೆ ಮಾಡಿದೆ.

ಬೆಲೆ ವಿಚಾರವಾಗಿ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ Mahindra XUV700

ಹೊಸ ಎಕ್ಸ್‌ಯುವಿ700 ಮಾದರಿಯ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಂಡಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನಲ್ಲಿ ಹಲವಾರು ಹೊಸ ತಂತ್ರಜ್ಞಾನ ಸೌಲಭ್ಯಗಳನ್ನು ಜೋಡಿಸಿದ್ದು, ಹೊಸ ಕಾರಿಗೆ ಮತ್ತಷ್ಟು ಐಷಾರಾಮಿ ಲುಕ್ ನೀಡಲು ಬ್ರಾಂಡ್ ನ್ಯೂ ಲೋಗೋ ನೀಡುತ್ತಿರುವುದು ಮಹತ್ವದ ಬದಲಾವಣೆಯಾಗಿದೆ.

Most Read Articles

Kannada
English summary
New mahindra xuv700 speculative price list revealed ahead of official launch
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X