ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಬಹುನೀರಿಕ್ಷಿತ ಎಕ್ಸ್‌ಯುವಿ700 ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿರುವ ಮಹೀಂದ್ರಾ ಕಂಪನಿಯು ಮುಂಬರುವ ಅಕ್ಟೋಬರ್ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಹೊಸ ಕಾರಿನ ಕಾರ್ಯಕ್ಷಮತೆ ಕುರಿತಾಗಿ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯನ್ನೇ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಮಾದರಿಯಾಗಿ ಮಾರಾಟ ಮಾಡಲು ನಿರ್ಧರಿಸಲಾಗಿದ್ದು, ಹೊಸ ಕಾರಿನ ಮಾಹಿತಿಯನ್ನು ಈಗಾಗಲೇ ಅಧಿಕೃತ ವೆಬ್‌ಸೈಟ್‌ನಲ್ಲೂ ಪ್ರದರ್ಶನಗೊಳಿಸಲಾಗಿದೆ. ಹೊಸ ಎಕ್ಸ್‌ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು ಎಕ್ಸ್‌ಯುವಿ700 ಬಿಡುಗಡೆಯ ನಂತರವಷ್ಟೇ ಕೆಲವು ಬದಲಾವಣೆಗಳೊಂದಿಗೆ ಮರು ಮಾರಾಟಗೊಳ್ಳಲಿದೆ.

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಪ್ರತಿಸ್ಪರ್ಧಿ ಕಾರು ಮಾದರಿಗಳಿಗಾಗಿ ಎಕ್ಸ್‌ಯುವಿ500 ಮಾದರಿಯಲ್ಲಿ ಕೆಲವು ಮಹತ್ವದ ಬದಲಾವಣೆ ತರಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಸದ್ಯ ಬಿಡುಗಡೆಯಾಗಬೇಕಿರುವ ಎಕ್ಸ್‌ಯುವಿ500 ಮಾದರಿಯ ನ್ಯೂ ಜನರೇಷನ್ ಮಾದರಿಯನ್ನೇ ಹೊಸ ಬದಲಾವಣೆಗಳೊಂದಿಗೆ ಎಕ್ಸ್‌ಯುವಿ700 ಮಾದರಿಯಾಗಿ ಬಿಡುಗಡೆ ಮಾಡಲು ರೋಡ್ ಟೆಸ್ಟಿಂಗ್ ಪೂರ್ಣಗೊಳಿಸುತ್ತಿದೆ.

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಎಕ್ಸ್‌700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್‌ಯುವಿ500 ಮಾದರಿಯನ್ನು ಹೊಸ ಬದಲಾವಣೆಯೊಂದಿಗೆ 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು 7 ಸೀಟರ್ ಸೌಲಭ್ಯವನ್ನು ಹೊಂದಿದ್ದರು ಕೂಡಾ ಹಿಂಬದಿಯ ಆಸನಗಳು ವಯಸ್ಕ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿಲ್ಲ. ಹೀಗಾಗಿ ಎಕ್ಸ್‌ಯುವಿ700 ಮಾದರಿಯನ್ನು ವಿಸ್ತರಿತ ವೀಲ್ಹ್‌ಬೆಸ್ ಮೂಲಕ ಮೂರನೇ ಸಾಲಿನ ಆಸನವನ್ನು ಹೆಚ್ಚಿಸಿ ಅಭಿವೃದ್ದಿಗೊಳಿಸಲಾಗಿದೆ.

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಮಹೀಂದ್ರಾ ಕಂಪನಿಯು ಎಸ್‌ಯುವಿ ಕಾರುಗಳ ಮಾರಾಟದಲ್ಲಿ ತನ್ನದೆ ಆದ ಜನಪ್ರಿಯತೆ ಹೊಂದಿದ್ದು, ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ವಿನೂತನ ವಿನ್ಯಾಸದೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಯುವಿ500, ಎಕ್ಸ್‌ಯುವಿ300, ಬೊಲೆರೊ, ಸ್ಕಾರ್ಪಿಯೋ ಮಾದರಿಯೊಂದಿಗೆ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಹೊಂದಿರುವ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಎಕ್ಸ್‌ಯುವಿ ಸರಣಿಯಲ್ಲಿ ಐದು ಹೊಸ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಕೇಂದ್ರ ಸಾರಿಗೆ ಇಲಾಖೆಯಲ್ಲಿ ನೋಂದಣಿಯನ್ನು ಕೂಡಾ ಮಾಡಲಾಗಿದೆ.

Image Courtesy: Abhimanyu Komawar

More from DriveSpark

Article Published On: Tuesday, May 18, 2021, 14:06 [IST]
English summary
Mahindra XUV700 SUV Spied Testing. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+