ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಬಹುನೀರಿಕ್ಷಿತ ಮಹೀಂದ್ರಾ ಎಕ್ಸ್‌ಯುವಿ700 ಹೊಸ ಎಸ್‌ಯುವಿ ಕಾರು ಮಾದರಿಯು ಶೀಘ್ರದಲ್ಲೇ ಬಿಡುಗಡೆಗೊಳ್ಳುವ ಸಿದ್ದತೆಯಲ್ಲಿದ್ದು, ಕಂಪನಿಯು ಹೊಸ ಕಾರಿನ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿನ ಎಕ್ಸ್‌ಯುವಿ500 ಕಾರಿನ ಹೊಸ ತಲೆಮಾರಿನ ಆವೃತ್ತಿಯನ್ನೇ ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ700 ಮಾದರಿಯಾಗಿ ಮಾರಾಟ ಮಾಡಲು ನಿರ್ಧರಿಸಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮಾಹಿತಿಯನ್ನು ಈಗಾಗಲೇ ಅಧಿಕೃತ ವೆಬ್‌ಸೈಟ್‌ನಲ್ಲೂ ಪ್ರದರ್ಶನಗೊಳಿಸಿದೆ. ಹೊಸ ಎಕ್ಸ್‌ಯುವಿ700 ಬಿಡುಗಡೆ ನಂತರ ಕೆಲವು ದಿನಗಳ ಕಾಲ ಸ್ಥಗಿತಗೊಳ್ಳಲಿರುವ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು ಎಕ್ಸ್‌ಯುವಿ700 ಬಿಡುಗಡೆಯ ನಂತರವಷ್ಟೇ ಕೆಲವು ಬದಲಾವಣೆಗಳೊಂದಿಗೆ ಮರು ಮಾರಾಟಗೊಳ್ಳಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಎಕ್ಸ್‌ಯುವಿ700 ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ವಿವಿಧ ಎಂಜಿನ್ ಆಯ್ಕೆಯಲ್ಲಿ ಒಟ್ಟು 11 ವೆರಿಯೆಂಟ್‌ಗಳನ್ನು ಪಡೆದುಕೊಳ್ಳಲಿದ್ದು, ಡೀಸೆಲ್ ಮತ್ತು ಪೆಟ್ರೋಲ್ ಮಾದರಿಗಳನ್ನು ಹೊಂದಿರುವ ಹೊಸ ಕಾರಿನಲ್ಲಿ ಡೀಸೆಲ್ ಪವರ್‌ಫುಲ್ ಎಂಜಿನ್ ಆಯ್ಕೆ ಹೊಂದಿರಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

2.2-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸದ್ಯ ಕಂಪನಿಯು 180 ಬಿಎಚ್‌ಪಿ, 190 ಬಿಎಚ್‌ಪಿ ಮತ್ತು 210 ಬಿಎಚ್‌ಪಿ ಟ್ಯೂನ್ ಮೂಲಕ ಪರೀಕ್ಷೆ ನಡೆಸಲಾಗುತ್ತಿದ್ದು, ಹೊಸ ಕಾರು ಉತ್ಪಾದನಾ ಮಾದರಿಯಲ್ಲಿ 180-ಬಿಎಚ್‌ಪಿ ಮಾದರಿಯನ್ನು ಪಡೆದುಕೊಳ್ಳುವ ನೀರಿಕ್ಷೆಗಳಿವೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಹೊಸ ಕಾರಿನಲ್ಲಿ ನೀಡಲಾಗುತ್ತಿರುವ ಪೆಟ್ರೋಲ್ ಎಂಜಿನ್ ಮಾಹಿತಿ ಲಭ್ಯವಿಲ್ಲವಾದರೂ ಥಾರ್ ಮಾದರಿಯಲ್ಲಿ ನೀಡಲಾಗಿರುವ 2.0-ಲೀಟರ್ ಪೆಟ್ರೋಲ್ ಹೊಂದುವ ಸಾಧ್ಯತೆಗಳಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ ವಿವಿಧ ಹಂತದ ಬಿಎಚ್‌ಪಿ ಉತ್ಪಾದನಾ ಮಾದರಿಗಳನ್ನು ಸಿದ್ದಪಡಿಸಲಾಗುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಇನ್ನು ಮಹೀಂದ್ರಾ ಕಂಪನಿಯು ಎಕ್ಸ್‌ಯುವಿ500 ಮಾದರಿಯನ್ನು ಎಕ್ಸ್‌ಯುವಿ700 ಮಾದರಿಗಿಂತಲೂ ಕೆಳ ಸ್ಥಾನದಲ್ಲಿ ಮಾರಾಟಗೊಳಿಸಲು ನಿರ್ಧರಿಸಲಾಗಿದ್ದು, ಎಕ್ಸ್‌ಯುವಿ700 ಮಾದರಿಯನ್ನು 7 ಸೀಟರ್ ಮಾದರಿಯೊಂದಿಗೆ ಮತ್ತು ಎಕ್ಸ್‌ಯುವಿ500 ಮಾದರಿಯನ್ನು ಹೊಸ ಬದಲಾವಣೆಯೊಂದಿಗೆ 5 ಸೀಟರ್ ಮಾದರಿಯಾಗಿ ಮಾರಾಟಗೊಳಿಸಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಪ್ರಸ್ತುತ ಮಾರುಕಟ್ಟೆಯಲ್ಲಿರುವ ಎಕ್ಸ್‌ಯುವಿ500 ಮಾದರಿಯು 7 ಸೀಟರ್ ಸೌಲಭ್ಯವನ್ನು ಹೊಂದಿದ್ದರು ಕೂಡಾ ಹಿಂಬದಿಯ ಆಸನಗಳು ವಯಸ್ಕ ಪ್ರಯಾಣಿಕರ ಪ್ರಯಾಣಕ್ಕೆ ಅನುಕೂಲಕರವಾಗಿಲ್ಲ. ಹೀಗಾಗಿ ಎಕ್ಸ್‌ಯುವಿ700 ಮಾದರಿಯನ್ನು ವಿಸ್ತರಿತ ವೀಲ್ಹ್‌ಬೆಸ್ ಮೂಲಕ ಮೂರನೇ ಸಾಲಿನ ಆಸನವನ್ನು ಹೆಚ್ಚಿಸಿ ಅಭಿವೃದ್ದಿಗೊಳಿಸಲಾಗಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಎಕ್ಸ್‌ಯುವಿ700 ಬಿಡುಗಡೆಯ ನಂತರ ಎಕ್ಸ್‌ಯುವಿ500 ಮಾದರಿಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಿರುವ ಮಹೀಂದ್ರಾ ಕಂಪನಿಯು ಸದ್ಯ ಲಭ್ಯವಿರುವಂತಹ 7 ಸೀಟರ್ ಸೌಲಭ್ಯವನ್ನು ತೆಗೆದುಹಾಕಿ ಆರಾಮದಾಯಕ ಕ್ಯಾಬಿನ್ ರೂಂ ಹೊಂದಿರುವ 5 ಸೀಟರ್ ಮಾದರಿಯನ್ನಾಗಿ ಮರುಬಿಡುಗಡೆ ಮಾಡಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ರೋಡ್ ಟೆಸ್ಟಿಂಗ್‌ ನಡೆಸಿದ ಮಹೀಂದ್ರಾ ಎಕ್ಸ್‌ಯುವಿ700

ಈ ಮೂಲಕ 5 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ500 ಮತ್ತು 7 ಸೀಟರ್ ಬಯಸುವ ಗ್ರಾಹಕರಿಗೆ ಎಕ್ಸ್‌ಯುವಿ700 ಮಾರಾಟ ಮಾಡಲಿದ್ದು, ಇತ್ತೀಚೆಗೆ ಟಾಟಾ ಸಫಾರಿ, ಎಂಜಿ ಹೆಕ್ಟರ್ ಪ್ಲಸ್ ಕಾರು ಮಾದರಿಗಳು ಮಾರುಕಟ್ಟೆ ಪ್ರವೇಶಿಸಿರುವ ಹಿನ್ನಲೆಯಲ್ಲಿ ಕಂಪನಿಯು ಎಕ್ಸ್‌ಯುವಿ ಸರಣಿಯಲ್ಲಿ ಈ ಬದಲಾವಣೆ ತಂದಿದೆ.

More from DriveSpark

Article Published On: Friday, June 11, 2021, 16:18 [IST]
English summary
Mahindra XUV700 SUV Spotted Testing Rear Profile Revealed.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+