ಹೊಸ ಎಕ್ಸ್‌ಯುವಿ700 ಎಸ್‌ಯುವಿ ಖರೀದಿಗಾಗಿ ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಮಹೀಂದ್ರಾ ಎಕ್ಸ್‌ಯುವಿ700(Mahindra XUV700) ಎಸ್‌ಯುವಿಯು ಭಾರತದಲ್ಲಿ ಬಿಡುಗಡೆಯ ನಂತರ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ಇದುವರೆಗೆ ಸುಮಾರು 75 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಎಕ್ಸ್‌ಯುವಿ700 ಕಾರು ಮಾದರಿಯನ್ನು ಬಿಡುಗಡೆಗೊಳಿಸಿದ ಮೊದಲ ಎರಡು ದಿನಗಳಲ್ಲಿ ಬರೋಬ್ಬರಿ 50 ಸಾವಿರ ಯನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದ್ದ ಹೊಸ ಕಾರು ಇದುವರೆಗೆ 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಕಾಯುವಿಕೆ ಅವಧಿಯು ವಿವಿಧ ವೆರಿಯೆಂಟ್‌‌ಗಳಿಗೆ ಅನುಗುಣವಾಗಿ ಗರಿಷ್ಠ ಒಂದು ವರ್ಷದ ತನಕ ಕಾಯಬೇಕಾಗುತ್ತದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಕಂಪನಿಯು ಹಂತ-ಹಂತವಾಗಿ ವಿತರಣೆ ಪ್ರಮಾಣವನ್ನು ನಿಗದಿಪಡಿಸುತ್ತಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಕಾರು ಖರೀದಿಗೆ ಬುಕ್ಕಿಂಗ್ ಸಲ್ಲಿಸಿರುವ ಮೊದಲ 25 ಸಾವಿರ ಗ್ರಾಹಕರಿಗೆ 2022ರ ಮಧ್ಯಂತರದ ವೇಳೆಗೆ ವಿತರಣೆಯಾಗಲಿದ್ದು, 25 ಸಾವಿರ ಯುನಿಟ್ ನಂತರ ಬುಕ್ಕಿಂಗ್ ಸಲ್ಲಿಸಿರುವ ಗ್ರಾಹಕರಿಗೆ ಹೊಸ ಕಾರು 2022ರ ಜೂನ್‌ನಿಂದ ಡಿಸೆಂಬರ್ ತನಕ ಮತ್ತು 50 ಸಾವಿರ ಯುನಿಟ್ ಬುಕ್ಕಿಂಗ್ ಸಲ್ಲಿಕೆ ಮಾಡಿರುವ ಗ್ರಾಹಕರಿಗೆ 2023ರ ನಂತರ ಹೊಸ ಕಾರು ಖರೀದಿಗೆ ಲಭ್ಯವಿರಲಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಮಹೀಂದ್ರಾ ಕಂಪನಿಯು ಸೆಮಿ ಕಂಡಕ್ಟರ್ ಕೊರತೆ ನಡುವೆ ಎಕ್ಸ್‌ಯುವಿ700 ಮಾದರಿಯ ವಿತರಣೆಯನ್ನು ಹೆಚ್ಚಿಸುತ್ತಿದ್ದು, ಇದುವರೆಗೆ ಕಂಪನಿಯು ಸುಮಾರು 4 ಸಾವಿರಕ್ಕೂ ಹೆಚ್ಚು ಯುನಿಟ್ ವಿತರಣೆ ಮಾಡಿದೆ. ಆದರೆ ಸೆಮಿಕಂಡಕ್ಟರ್ ಪೂರೈಕೆಯಲ್ಲಿ ಕೊರತೆಯ ಪರಿಣಾಮ ಉತ್ಪಾದನೆಯು ಏರಿಳಿತವಾಗುತ್ತಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೀಗಾಗಿ ಎಕ್ಸ್‌ಯುವಿ700 ಹೊಸ ಕಾರು ಖರೀದಿಸುವ ಕೆಲವು ಗ್ರಾಹಕರಿಗೆ 2023ರ ಮಾರ್ಚ್ ತನಕವು ಕಾಯಬೇಕಾದ ಅನಿವಾರ್ಯತೆಗಳಿದ್ದು, ಬುಕ್ಕಿಂಗ್ ದೃಡಪಡಿಸಿರುವ ಗ್ರಾಹಕರಿಗೆ ಕಂಪನಿಯ ಸಂದೇಶವು ಇದೀಗ ಅಸಮಾಧಾನಕ್ಕೆ ಕಾರಣವಾಗಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ನಿಗದಿತ ಅವಧಿಯಲ್ಲಿ ಹೊಸ ಕಾರು ಖರೀದಿಯ ನೀರಿಕ್ಷೆಯಲ್ಲಿದ್ದ ಗ್ರಾಹಕರಿಗೆ ಕಂಪನಿಯ ಸಂದೇಶವು ಅಸಮಾಧಾನಕ್ಕೆ ಕಾರಣವಾಗಿದ್ದು, ಸೆಮಿಕಂಡಕ್ಟರ್ ಕೊರತೆಯಿಂದಾಗಿ ಹೊಸ ವಾಹನಗಳ ಉತ್ಪಾದನೆ ಕುಂಠಿತವಾಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಕಾರು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಗ್ರಾಹಕರ ಬೇಡಿಕೆಯೆಂತೆ 5 ಸೀಟರ್ ಮತ್ತು 7 ಸೀಟರ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11.99 ಲಕ್ಷಕ್ಕೆ ಮತ್ತು ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಟಾಪ್ ಎಂಡ್ ಮಾದರಿಯನ್ನು ರೂ. 22.89 ಲಕ್ಷ ಬೆಲೆ ಹೊಂದಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಕಾರಿನಲ್ಲಿ 7 ಸೀಟರ್ ಮಾದರಿಯು 2+3+2 ಮಾದರಿಯ ಆಸನ ಸೌಲಭ್ಯ ಹೊಂದಿದ್ದರೆ 5 ಸೀಟರ್ ಮಾದರಿಯು 2+3 ಆಸನ ಸೌಲಭ್ಯ ಹೊಂದಿದ್ದು, ಹೊಸ ಕಾರಿನಲ್ಲಿ ಕಂಪನಿಯು 2.0-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆ ನೀಡಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

2.0-ಲೀಟರ್ ಪೆಟ್ರೋಲ್ ಮಾದರಿಯು 198-ಬಿಎಚ್‌ಪಿ, 300-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 2.2-ಲೀಟರ್ ಡೀಸೆಲ್ ಮಾದರಿಯು 183-ಬಿಎಚ್‌ಪಿ ಮತ್ತು 420-ಎನ್ಎಂ ಟಾರ್ಕ್(6-ಸ್ಪೀಡ್ ಎಂಟಿ),450-ಎನ್ಎಂ ಟಾರ್ಕ್(6-ಸ್ಪೀಡ್ ಎಟಿ) ಉತ್ಪಾದನಾ ವೈಶಿಷ್ಟ್ಯತೆ ಹೊಂದಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಎಂಎಕ್ಸ್, ಎಎಕ್ಸ್3, ಎಎಕ್ಸ್5, ಎಎಕ್ಸ್7 ಮತ್ತು ಎಎಕ್ಸ್7 ಲಗ್ಷುರಿ ಎನ್ನುವ ವಿವಿಧ ವೆರಿಯೆಂಟ್‌ಗಳೊಂದಿಗೆ ಆಕರ್ಷಕ ಫೀಚರ್ಸ್, ಬಲಿಷ್ಠ ಎಂಜಿನ್ ಆಯ್ಕೆ ಹೊಂದಿದ್ದು, ಕಂಪನಿಯೇ ಜೋಡಣೆ ಮಾಡುವ 7 ಸೀಟರ್ ಮಾದರಿಗಳನ್ನು ಹೊರತುಪಡಿಸಿ 5 ಸೀಟರ್ ಹೊಂದಿರುವ ಮಾದರಿಗಳಲ್ಲಿ 7 ಸೀಟರ್ ಬಯಸುವ ಗ್ರಾಹಕರು ಹೆಚ್ಚುವರಿ ರೂ. 70 ಸಾವಿರ ಪಾವತಿ ಮಾಡಬೇಕಾಗುತ್ತದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹೊಸ ಕಾರಿನಲ್ಲಿ ಫ್ರಂಟ್ ಫಾಸಿಯಾದೊಂದಿಗೆ ಸಂಯೋಜನೆಗೊಂಡಿರುವ ಎಲ್ಇಡಿ ಹೆಡ್‌ಲ್ಯಾಂಪ್ಸ್, ಸಿ ಆಕಾರದಲ್ಲಿರುವ ಎಲ್ಇಡಿ ಡಿಆರ್‌ಎಲ್ಎಸ್, ಸಿಲ್ವರ್ ಕೋಟಿಂಗ್ ಹೊಂದಿರುವ ಫ್ಲಕ್ಸ್ ಸ್ಕೀಡ್ ಪ್ಲೇಟ್, 18-ಇಂಚಿನ ಡ್ಯುಯಲ್ ಟೋನ್ ಮಲ್ಟಿ ಸ್ಪೋಕ್ ಅಲಾಯ್ ವ್ಹೀಲ್ ಪಡೆದುಕೊಂಡಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಎಕ್ಸ್‌ಯುವಿ700 ಮಾದರಿಯ ಸೈಡ್ ಪ್ರೋಫೈಲ್ ಮತ್ತು ಹಿಂಬದಿಯ ವಿನ್ಯಾಸವು ಕೂಡಾ ಸಾಕಷ್ಟು ಹೊಸತನದಿಂದ ಕೂಡಿದ್ದು, ಹಿಂಬದಿಯ ಫೆಂಡರ್‌ನೊಂದಿಗೆ ಹರಡಿಕೊಂಡಿರುವ ವಿಭಜಿತ ಟೈಲ್‌ಲ್ಯಾಂಪ್, ವಿನೂತನ ವಿನ್ಯಾಸದ ಬಂಪರ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ರೂಫ್ ರೈಲ್ಸ್, ಶಾರ್ಕ್ ಫಿನ್ ಆಂಟೆನಾ, ರೂಫ್ ಸ್ಪಾಯ್ಲರ್ ಪಡೆದುಕೊಂಡಿದೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಹಾಗೆಯೇ ಹೊಸ ಕಾರಿನಲ್ಲಿ 10.25 ಇಂಚಿನ ಡಿಜಿಟಲ್ ಮತ್ತು ಇನ್ಪೋಟೈನ್‌ಮೆಂಟ್ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಆಂಡ್ರಾಯಿಡ್ ಆಟೋ ಮತ್ತು ಆಟೋ ಕಾರ್‌ಪ್ಲೇ, ಅಮೆಜಾನ್ ಅಲೆಕ್ಸಾ, 60 ತಾಂತ್ರಿಕ ಸೌಲಭ್ಯಗಳನ್ನು ನಿಯಂತ್ರಿಸಬಹುದಾದ ಕಾರ್ ಕನೆಕ್ಟ್ ಟೆಕ್ನಾಲಜಿ, ವಾಯ್ಸ್ ಅಸಿಸ್ಟೆನ್ಸ್, ಆ್ಯಂಬಿಯೆಂಟ್ ಲೈಟಿಂಗ್ಸ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 2 ಮತ್ತು 3ನೇ ಸಾಲಿನಲ್ಲೂ ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್ ಮತ್ತು ಏರ್ ಪ್ಯೂರಿಫ್ಲೈರ್ ಸೌಲಭ್ಯಗಳಿವೆ.

ಕನಿಷ್ಠ ಇಷ್ಟು ದಿನಗಳ ಕಾಲ ಕಾಯಲೇಬೇಕು!

ಅಡ್ವಾನ್ಸ್ ಡ್ರೈವರ್ ಅಸಿಸ್ಟೆಡ್ ಸಿಸ್ಟಂ ಸೌಲಭ್ಯವು ಹೊಸ ಕಾರಿನ ಪ್ರಮುಖ ಸುರಕ್ಷಾ ಸೌಲಭ್ಯವಾಗಿದ್ದು, ಇದರ ಜೊತೆಗೆ 7-ಏರ್‌ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಎಲೆಕ್ಟ್ರಾನಿಕ್ ಲಾಕಿಂಗ್, ಟ್ರಾಕ್ಷನ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಆಟೋ ಹೆಡ್‌ಲ್ಯಾಂಪ್ ಬೂಸ್ಟರ್, ವ್ಯಯಕ್ತಿಕರಣಗೊಳಿಸಿದ ಸೇಫ್ಟಿ ಅಲರ್ಟ್, ಡ್ರೈವರ್ ಡ್ರಾಸಿನೆಸ್ ಅಲರ್ಟ್, ಲೆನ್ ಕಿಪ್ ಅಸಿಸ್ಟ್ ಸೌಲಭ್ಯ ಹೊಂದಿದೆ.

Article Published On: Saturday, December 11, 2021, 13:29 [IST]
English summary
New mahindra xuv700 suv waiting period details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+