Just In
- 2 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 2 hrs ago
2021ರ ಜೀಪ್ ಕಂಪಾಸ್ ಫೇಸ್ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 3 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 3 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
ಬುಧವಾರ ಜೋ ಬೈಡನ್, ಕಮಲಾ ಹ್ಯಾರಿಸ್ ಪ್ರಮಾಣವಚನ: ಸಮಯ, ವೀಕ್ಷಣೆ ವಿವರ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 19ರ ದರ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೆ ಸಜ್ಜಾಗುತ್ತಿದೆ 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರು
ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್(ಎಂಎಸ್ಐಎಲ್) ತನ್ನ ಹೊಸ ತಲೆಮಾರಿನ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದರ ಭಾಗವಾಗಿ ಹೊಸ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಭಾರತದಲ್ಲಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ನ್ಯೂ ಜನರೇಷನ್ ಮಾರುತಿ ಸುಜುಕಿ ಸೆಲೆರಿಯೊ ಭಾರತದಲ್ಲಿ ಮತ್ತೊಮ್ಮೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ. ಈ ಹೊಸ ಸೆಲೆರಿಯೊ ಕಾರು ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರಗಳು ಬಹಿರಂಗವಾಗಿವೆ.

ಸ್ಪೈ ಚಿತ್ರಗಳನ್ನು ನೋಡಿದರೆ ತಿಳಿಯುತ್ತದೆ, 2021ರ ಮಾರುತಿ ಸುಜುಕಿ ಸೆಲೆರಿಯೊ ಕಾರಿನ ವಿನ್ಯಾಸವನ್ನು ಬದಲಾಯಿಸಲಾಗಿದೆ. ಇದರ ಟೈಲ್‌ಲೈಟ್‌ಗಳು ಬೆಲೆನೊ ಮಾದರಿಯಿಂದ ಸ್ಫೂರ್ತಿ ಪಡೆದಿವೆ. ಇದು ಮರುವಿನ್ಯಾಸಗೊಳಿಸಲಾದ ಆಯತಾಕಾರದ ಆಕಾರದ ಟೈಲ್ ಲ್ಯಾಂಪ್‌ಗಳು, ಇಂಟಿಗ್ರೇಟೆಡ್ ಸ್ಪಾಯ್ಲರ್‌ನೊಂದಿಗೆ ಹೊಸ ಸಿಂಗಲ್-ಪೀಸ್ ಟೈಲ್‌ಗೇಟ್ ಮತ್ತು ಹೊಸ ಬಂಪರ್ ಅನ್ನು ಪಡೆಯುತ್ತದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಪ್ರಸ್ತುತ ಮಾದರಿಯಲ್ಲಿರುವಂತೆ ಪುಲ್ ಟೈಪ್ ಬೂಟ್ ಓಪನ್ ನೊಂದಿಗೆ ಟೈಲ್ ಗೇಟ್ ರಚನೆಯ ಮಧ್ಯದಲ್ಲಿ ಸುಜುಕಿ ಬ್ಯಾಡ್ಜ್ ಅನ್ನು ಜೋಡಿಸಲಾಗಿದೆ. ಈ ಹೊಸ ಸೆಲೆರಿಯೊ ಹಿಂದಿನ ಮಾದರಿಗಿಂತ ಹೆಚ್ಚಿನ ಗಾತ್ರವನ್ನು ಹೊಂದಿದೆ. ಇದರಿಂದ ಇಂಟಿರಿಯರ್ ನಲ್ಲಿ ಹೆಚ್ಚಿನ ಸ್ಪೇಸ್ ಅನ್ನು ಹೊಂದಿರುತ್ತದೆ.

ಹೊಸ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಹಿಂಭಾಗ ಹೆಚ್ಚಿನ ಸ್ಪೋರ್ಟಿ ಲುಕ್ ಅನ್ನು ಹೊಂದಿದೆ. ಹೊಸ ಹೆಡ್‌ಲ್ಯಾಂಪ್‌ಗಳು, ಗ್ರಿಲ್ ಮತ್ತು ಮರುವಿನ್ಯಾಸಗೊಳಿಸಲಾದ ಬಂಪರ್ ಹೊಂದಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಮಾರುಕಟ್ಟೆಯಲ್ಲಿರುವ ಸೆಲೆರಿಯೊ 1.0 ಲೀಟರ್ 3 ಸಿಲಿಂಡರ್ ಪೆಟ್ರೋಲ್ ಬಿಎಸ್ 6 ಎಂಜಿನ್ ಆಯ್ಕೆಯನ್ನು ಹೊಂದಿದೆ. ಹೊಸ ತಲೆಮಾರಿನ ಸೆಲೆರಿಯೊದಲ್ಲಿ ಅದೇ ಎಂಜಿನ್ ಆಯ್ಜೆಯನ್ನು ಹೊಂದಿರಲಿದೆ. ಈ ಎಂಜಿನ್ 67 ಬಿಹೆಚ್‍ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ

ಇನ್ನು ಹೊಸ ಮಾರುತಿ ಸುಜುಕಿ ಸೆಲೆರಿಯೊ ಕಾರಿನ ಇಂಟಿರಿಯರ್ ಅನ್ನು ಸಂಪೂರ್ಣವಾಗಿ ನವೀಕರಿಸಲಾಗಿದೆ. ನ್ಯೂ ಜನರೇಷನ್ ಸೆಲೆರಿಯೊ ಇಂಟಿರಿಯರ್ ಕೆಲವು ಹೊಸ ಅಪ್ಡೇಟ್ ಗಳನ್ನು ಪಡೆಯುವ ಸಾಧ್ಯತೆಗಳಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದ ಟೊಯೊಟಾ

ಸ್ಪೈ ಚಿತ್ರದಲ್ಲಿ ಇಂಟಿರಿಯರ್ ನಲ್ಲಿ ಎರಡು ಕಪ್ ಹೋಲ್ಡರ್‌ಗಳು ಮತ್ತು ಮೌಂಟಡ್ ಫ್ರಂಟ್ ಪವರ್ ವಿಂಡೋ ಸ್ವಿಚ್‌ಗಳೊಂದಿಗೆ ಹೊಸ ಸೆಂಟರ್ ಕನ್ಸೋಲ್ ಅನ್ನು ಪಡೆಯುತ್ತದೆ. ಸೆಂಟ್ರಲ್ ಕನ್ಸೋಲ್‌ನಲ್ಲಿ 12ವ್ಯಾಟ್ ಪವರ್ ಸಾಕೆಟ್ ಸಹ ಕಂಡುಬರುತ್ತದೆ. ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಪ್ರಸ್ತುತ ಮಾದರಿಯಲ್ಲಿ ಕಂಡುಬರುವಂತೆಯೇ ಇದೆ.

ಇನ್ನು ಹೊಸ ಸೆಲೆರಿಯೊ ಕಾರಿನ ಇಂಟಿರಿಯರ್ ನಲ್ಲಿ ಮೌಂಟಡ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿರಲಿದೆ. ಇದರಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಒಳಗೊಂಡಿರುತ್ತದೆ. ಈ ಹೊಸ ಕಾರಿನಲ್ಲಿ ಫ್ಯಾಬ್ರಿಕ್ ಸೀಟುಗಳು, ಆಟೋಮ್ಯಾಟಿಕ್ ಎಸಿ, ಸ್ಟೀಯರಿಂಗ್ ಮೌಂಟೆಡ್ ಕಂಟ್ರೋಲ್‌ಗಳೊಂದಿಗೆ ಇತರ ಫೀಚರುಗಳನ್ನು ಹೊಂದಿರುತ್ತದೆ.

ಮಾರುತಿ ಸುಜುಕಿ ಸೆಲೆರಿಯೊ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.