Just In
- 28 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 32 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 34 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 44 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯ ಸನಿಹದಲ್ಲಿ ಬಹುನಿರೀಕ್ಷಿತ 2021ರ ಮಾರುತಿ ಸೆಲೆರಿಯೊ
ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಮಾರುತಿ ಸೆಲೆರಿಯೊ ಮಾದರಿಯು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.
ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಸೆಲೆರಿಯೊ ಹ್ಯಾಚ್ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇತ್ತೀಚೆಗೆ ಈ ಹೊಸ ಮಾರುತಿ ಸೆಲೆರಿಯೊ ಕಾರು ಇತ್ತೀಚೆಗೆ ಟಿವಿಸಿ ಚಿತ್ರೀಕರಣದ ವೇಳೆ ಕಾಣಿಸಿಕೊಂಡಿದ್ದು, ಇದರ ಸ್ಪೈ ಚಿತ್ರಗಳು ಬಹಿರಂಗವಾಗಿದೆ.
ನ್ಯೂ ಜನರೇಷನ್ ಸೆಲೆರಿಯೊ ಕಾರಿನ ಮುಂಭಾಗ ಅಂಡಾಕಾರದ ಗ್ರಿಲ್ ಮತ್ತು ರಿಫ್ರೆಶ್ ಫ್ರಂಟ್ ಫಾಸಿಯಾವನ್ನು ಹೊಂದಿರುವ ಪರಿಷ್ಕೃತ ಮುಂಭಾಗದ ಬಂಪರ್, ದುಂಡಾದ ಹೊಸದಾಗಿ ವಿನ್ಯಾಸಗೊಳಿಸಲಾದ ಹೆಡ್ಲ್ಯಾಂಪ್ಗಳು ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದಿದ್ದು, ಸಿಗ್ನೇಚರ್ ಲೋಗೋದೊಂದಿಗೆ ಮಧ್ಯದಲ್ಲಿ ವಿಲೀನಗೊಳ್ಳುತ್ತವೆ.
ಇನ್ನು ಫಾಗ್ ಲ್ಯಾಂಪ್ ಸುತ್ತುವರಿದಿದೆ ಮತ್ತು ಫ್ರಂಟ್ ಏಪ್ರನ್ ಕಾಂಟ್ರಾಸ್ಟ್ ಬ್ಲ್ಯಾಕ್ ಜೊತೆಗೆ ಅದರ ಸ್ಪೋರ್ಟಿಯರ್ ಫ್ರಂಟ್ ಲುಕ್ ಅನ್ನು ಹೆಚ್ಚು ಸೇರಿಸುತ್ತದೆ. ಕಡಿಮೆ ಟ್ರಿಮ್ಗಳು ಅಲಾಯ್ ವ್ಹೀಲ್ ಗಳನ್ನು ಪಡೆಯುತ್ತವೆ ಹೆಚ್ಚಿನ ರೂಪಾಂತರಗಳನ್ನು ಬ್ಲ್ಯಾಕ್ 14-ಇಂಚಿನ ಅಲಾಯ್ ವ್ಹೀಲ್ ಗಳನ್ನು ಪ್ರತ್ಯೇಕವಾಗಿ ನೀಡಲಾಗುವುದು
ನ್ಯೂ ಜನರೇಷನ್ ಸೆಲೆರಿಯೊ ಹ್ಯಾಚ್ಬ್ಯಾಕ್ ಅನ್ನು 2020 ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ನಂತರ ಹಲವು ಕಾರಣಗಳಿಂದ ಬಿಡುಗಡೆಯನ್ನು ಮುಂದೂಡಿದ್ದರು. ಬಳಿಕ ಕಂಪನಿಯು 2021ರ ಏಪ್ರಿಲ್-ಮೇ ತಿಂಗಳುಗಳ ಅವಧಿಯ ನಡುವೆ ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ಕರೋನಾ ಸೋಂಕಿನ ಆರ್ಭಟ ಹೆಚ್ಚಳದಿಂದಾಗಿ ಮತ್ತೊಮ್ಮೆ ಮುಂದೂಡಿಕೆ ಮಾಡಿದ್ದರು.
ಇನ್ನು ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ.
ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹಿಯರ್ಟೆಕ್ಟ್ ಪ್ಲಾಟ್ಫಾರ್ಮ್ ಅಡಿಯಲ್ಲಿ ಇದನ್ನು ತಯಾರಿಸಲಾಗಿದೆ. ಈ ಮಾರುತಿ ಸೆಲೆರಿಯೊ ಹೊಸದಾಗಿ ವಿನ್ಯಾಸಗೊಳಿಸಿದೆ.
ಈ ಹೊಸ ಸೆಲೆರಿಯೊ ಹ್ಯಾಚ್ಬ್ಯಾಕ್ ಒಳಭಾಗದಲ್ಲಿ 7.0-ಇಂಚಿನ ಸ್ಮಾರ್ಟ್ಪ್ಲೇ ಸ್ಟುಡಿಯೋ ಇನ್ಫೋಟೈನ್ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಕೂಡ ಒಳಗೊಂಡಿರುತ್ತದೆ.
ಇನ್ನು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಲಾಗುವುದಿಲ್ಲ. ಆದರೆ ಡ್ಯಾಶ್ಬೋರ್ಡ್, ಸ್ಟೀಯರಿಂಗ್ ವೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗುತ್ತದೆ. 2021ರ ಮಾರುತಿ ಸೆಲೆರಿಯೊ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು ಇತರ ಪ್ರೀಮಿಯಂ ಫೀಚರ್ ಗಳನ್ನು ಕೂಡ ಒಳಗೊಂಡಿರಲಿದೆ.
ಈ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರಿನಲ್ಲಿ ಸುರಕ್ಷತೆಗಾಗಿ, ಸ್ಟ್ಯಾಂಡರ್ಡ್ ಸೀಟ್ಬೆಲ್ಟ್ ಅಲರ್ಟ್, ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡೆಲವೆರಿಯೊಂದಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸರ್ಗಳು ಮತ್ತು ರಿವರ್ಸ್ ಕ್ಯಾಮೆರಾ ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್ ಅನ್ನು ಕೂಡ ನೀಡಬಹುದು.
ಈ ಹೊಸ ಕಾರಿನಲ್ಲಿ ಎಂಜಿನ್ ಅನ್ನು ಬದಲಾಯಿಸಬಹುದು, ಇದರಲ್ಲಿ ಹೊಸ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು, ಈ ಎಂಜಿನ್ 83 ಬಿಹೆಚ್ಪಿ ಪವರ್ ಮತ್ತು 113 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.
ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು. ಈ ಎಂಜಿನ್ 68 ಬಿಹೆಚ್ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಲ್ಲಾ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್ಬಾಕ್ಸ್ ಆಯ್ಕೆಯನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ,