ಅಧಿಕ ಮೈಲೇಜ್, ಆಕರ್ಷಕ ವಿನ್ಯಾಸದಲ್ಲಿ ಬಿಡುಗಡೆಯಾಗಲಿದೆ ಹೊಸ Maruti Celerio ಕಾರು
ಜನಪ್ರಿಯ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ತನ್ನ ಹೊಸ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ಮಾರುತಿ ಸುಜುಕಿ ಸೆಲೆರಿಯೊ(Maruti Suzuki Celerio) ಆಕರ್ಷಕ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಹೊಸ ಮಾರುತಿ ಸುಜುಕಿ ಸೆಲೆರಿಯೊ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳು 10 ರಂದು ಬಿಡುಗಡೆಯಾಗಲಿದೆ. ಮಾರುತಿ ಸುಜುಕಿ ಅಧಿಕೃತವಾಗಿ 2022 ಮಾರುತಿ ಸೆಲೆರಿಯೊ ಕಾರಿಗಾಗಿ ಪ್ರಿ-ಬುಕ್ಕಿಂಗ್ ಅನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಈ ಹೊಸ ಸೆಲೆರಿಯೊ ಕಾರನ್ನು ಖರೀದಿಸಲು ಬಯಸುವ ಗ್ರಾಹಕರು ಟೋಕನ್ ಮೊತ್ತ ಪಾವತಿಸಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ. ಇನ್ನು ಈ ಹೊಸ ಸೆಲೆರಿಯೊ ಭಾರತದ ಅತ್ಯಂತ ಇಂಧನ ದಕ್ಷ ಪೆಟ್ರೋಲ್ ಕಾರು ಎಂದು ಹೇಳಿಕೊಳ್ಳಲಾಗಿದೆ. ಇದು 26 ಕಿ.ಮೀ ಮೈಲೇಜ್ ಅನ್ನು ಒದಗಿಸುವ ನಿರೀಕ್ಷೆಯಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ ಯಾವುದೇ ಪೆಟ್ರೋಲ್ ಚಾಲಿತ ಮಾದರಿಗಿಂತ ಅತ್ಯಧಿಕವಾಗಿದೆ.

ಈ ಹೊಸ ಮಾರುತಿ ಸೆಲೆರಿಯೊ ಮಾದರಿಯು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ. ಈ ಹೊಸ ಮಾರುತಿ ಸೆಲೆರಿಯೊ ಕಾರು ಆರ್ಕ್ಟಿಕ್ ವೈಟ್, ಸಿಲ್ಕಿ ಸಿಲ್ವರ್, ಗ್ಲಿಸ್ಟೆನಿಂಗ್ ಗ್ರೇ, ಸಾಲಿಡ್ ಫೈರ್ ರೆಡ್, ಸ್ಪೀಡಿ ಬ್ಲೂ ಮತ್ತು ಕೆಫೀನ್ ಬ್ರೌನ್ ಎಂಬ ಸಿಂಗಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿರುತ್ತದೆ.

ಈ ಹೊಸ ಸೆಲೆರಿಯೊ ಕಾರು ಏಳು ರೂಪಾಂತರಗಳೊಂದಿಗೆ ನಾಲ್ಕು ಟ್ರಿಮ್‌ಗಳಲ್ಲಿ ನೀಡಲಾಗುವುದು.ಕಾರು ತಯಾರಕರು ಟೀಸರ್‌ಗಳ ರೂಪದಲ್ಲಿ ಹಂಚಿಕೊಂಡ ಚಿತ್ರಗಳು ಸೆಲೆರಿಯೊಗೆ ಆರು ಬಣ್ಣ ಆಯ್ಕೆಗಳ ಸುಳಿವು ನೀಡುತ್ತವೆ. ಇನ್ನು ಈ ಹೊಸ ಮಾರುತಿ ಸೆಲೆರಿಯೊ ಕಾರು ಬಿಡುಗಡೆಗೆ ಮುಂಚಿತವಾಗಿ ಡೀಲರ್‌ಶಿಪ್‌ಗಳಿಗೆ ಆಗಮಿಸಲು ಪ್ರಾರಂಭಿಸಿದೆ.

ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಈ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದ್ದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದ ಅಥವಾ ಹೊಸ ರೂಪದಲ್ಲಿ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ.

ಇತ್ತೀಚೆಗೆ ಈ ಹೊಸ ಮಾರುತಿ ಸೆಲೆರಿಯೊ ಕಾರು ಇತ್ತೀಚೆಗೆ ಟಿವಿಸಿ ಚಿತ್ರೀಕರಣದ ವೇಳೆ ಕಾಣಿಸಿಕೊಂಡಿದ್ದು, ಇದರ ಸ್ಪೈ ಚಿತ್ರಗಳು ಬಹಿರಂಗವಾಗಿತ್ತು. ಹೊಸ ಸೆಲೆರಿಯೊ ಕಾರಿನ ಮುಂಭಾಗ ಅಂಡಾಕಾರದ ಗ್ರಿಲ್ ಮತ್ತು ರಿಫ್ರೆಶ್ ಫ್ರಂಟ್ ಫಾಸಿಯಾವನ್ನು ಹೊಂದಿದೆ. ಈ ಕಾರಿನಲಿ ಪರಿಷ್ಕೃತ ಮುಂಭಾಗದ ಬಂಪರ್, ದುಂಡಾದ ಹೊಸದಾಗಿ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್‌ಗಳು ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದಿದ್ದು, ಸಿಗ್ನೇಚರ್ ಲೋಗೋದೊಂದಿಗೆ ಮಧ್ಯದಲ್ಲಿ ವಿಲೀನಗೊಳ್ಳುತ್ತವೆ.

ಈ ಹೊಸ ಮಾರುತಿ ಸೆಲೆರಿಯೊ ಫಾಗ್ ಲ್ಯಾಂಪ್ ಸುತ್ತುವರಿದಿದೆ ಮತ್ತು ಫ್ರಂಟ್ ಏಪ್ರನ್ ಕಾಂಟ್ರಾಸ್ಟ್ ಬ್ಲ್ಯಾಕ್ ಜೊತೆಗೆ ಅದರ ಸ್ಪೋರ್ಟಿಯರ್ ಫ್ರಂಟ್ ಲುಕ್ ಅನ್ನು ಹೆಚ್ಚು ಸೇರಿಸುತ್ತದೆ. ಇನ್ನು ಸೆಲೆರಿಯೊ ಕಾರಿನ ಲೋ ಟ್ರಿಮ್‌ಗಳು ಅಲಾಯ್ ವ್ಹೀಲ್ ಗಳನ್ನು ಪಡೆಯುತ್ತವೆ. ಹೆಚ್ಚಿನ ರೂಪಾಂತರಗಳನ್ನು ಬ್ಲ್ಯಾಕ್ 14-ಇಂಚಿನ ಅಲಾಯ್ ವ್ಹೀಲ್ ಗಳನ್ನು ಪ್ರತ್ಯೇಕವಾಗಿ ನೀಡಬಹುದು.

ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು 2020 ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ನಂತರ ಹಲವು ಕಾರಣಗಳಿಂದ ಬಿಡುಗಡೆಯನ್ನು ಮುಂದೂಡಿದ್ದರು. ಬಳಿಕ ಕಂಪನಿಯು 2021ರ ಏಪ್ರಿಲ್-ಮೇ ತಿಂಗಳುಗಳ ಅವಧಿಯ ನಡುವೆ ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ಕರೋನಾ ಸೋಂಕಿನ ಆರ್ಭಟ ಹೆಚ್ಚಳದಿಂದಾಗಿ ಮತ್ತೊಮ್ಮೆ ಮುಂದೂಡಿಕೆ ಮಾಡಿದ್ದರು.

ಇದೀಗ ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರನ್ನು ಇದೇ ತಿಂಗಳು ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಮಾರುತಿ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಇದನ್ನು ತಯಾರಿಸಲಾಗಿದೆ. ಈ ಮಾರುತಿ ಸೆಲೆರಿಯೊ ಹೊಸದಾಗಿ ವಿನ್ಯಾಸಗೊಳಿಸಿದೆ.
ಈ ಹೊಸ ಮಾರುತಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಒಳಭಾಗದಲ್ಲಿ 7.0-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಕೂಡ ಒಳಗೊಂಡಿರುತ್ತದೆ.

ಇನ್ನು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಲಾಗುವುದಿಲ್ಲ. ಆದರೆ ಡ್ಯಾಶ್‌ಬೋರ್ಡ್, ಸ್ಟೀಯರಿಂಗ್ ವೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗುತ್ತದೆ. ಹೊಸ ಮಾರುತಿ ಸೆಲೆರಿಯೊ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು ಇತರ ಪ್ರೀಮಿಯಂ ಫೀಚರ್ ಗಳನ್ನು ಕೂಡ ಒಳಗೊಂಡಿರುತ್ತದೆ. ಆದರೆ ಫೀಚರ್ಸ್ ಗಳ ಬಗ್ಗೆ ಹೆಚ್ಚಿನ ಮಾಹಿತಿಗಳು ಬಹಿರಂಗಗೊಂಡಿಲ್ಲ.

ಇನ್ನು ಈ ಹೊಸ ಸೆಲೆರಿಯೊ ಕಾರಿನಲ್ಲಿ ಸುರಕ್ಷತೆಗಾಗಿ, ಸ್ಟ್ಯಾಂಡರ್ಡ್ ಸೀಟ್‌ಬೆಲ್ಟ್ ಅಲರ್ಟ್, ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡೆಲವೆರಿಯೊಂದಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿವರ್ಸ್ ಕ್ಯಾಮೆರಾ ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಅನ್ನು ಕೂಡ ನೀಡಬಹುದು. ಇನ್ನು ಈ ಸೆಲೆರಿಯೊ ಕಾರಿನಲ್ಲಿ ಮಾರುತಿ 1.0-ಲೀಟರ್ K10C ಡ್ಯುಯಲ್ ಜೆಟ್ VVT ಪೆಟ್ರೋಲ್ ಎಂಜಿನ್ ಅನ್ನು ಬಳಸುವ ಸಾಧ್ಯತೆಯಿದೆ.

ಹೊಸ ಮಾರುತಿ ಸುಜುಕಿ ಸೆಲೆರಿಯೊ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಹೊಸ ತಲೆಮಾರಿನ ಮಾರುತಿ ಸುಜುಕಿ ಸೆಲೆರಿಯೊ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟಾಟಾ ಟಿಯಾಗೋ, ಹ್ಯುಂಡೈ ಸ್ಯಾಂಟ್ರೊ ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡುತ್ತದೆ. ಇಂಧನ ಬೆಲೆ ಏರಿಕೆ ಸಮಯದಲ್ಲಿ ಅತಿ ಹೆಚ್ಚು ಮೈಲೇಜ್ ಹೊಂದಿರುವ ಕಾರು ಬಿಡುಗಡೆಯಾಗುವುದರಿಂದ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಸೃಷ್ಟಿಸಲು ಸಜ್ಜಾಗುತ್ತಿದೆ.


Click it and Unblock the Notifications