ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ 2021ರ ಮಾರುತಿ ಸೆಲೆರಿಯೊ(Maruti Celerio) ಮಾದರಿಯು ಹೊಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು. ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಮುಂದಾಗಿದೆ. ಇತ್ತೀಚೆಗೆ ಈ ಹೊಸ ಮಾರುತಿ ಸೆಲೆರಿಯೊ ಕಾರು ಇತ್ತೀಚೆಗೆ ಟಿವಿಸಿ ಚಿತ್ರೀಕರಣದ ವೇಳೆ ಕಾಣಿಸಿಕೊಂಡಿದ್ದು, ಇದರ ಸ್ಪೈ ಚಿತ್ರಗಳು ಬಹಿರಂಗವಾಗಿದೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಈ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರಿನ ಮುಂಭಾಗ ಅಂಡಾಕಾರದ ಗ್ರಿಲ್ ಮತ್ತು ರಿಫ್ರೆಶ್ ಫ್ರಂಟ್ ಫಾಸಿಯಾವನ್ನು ಹೊಂದಿರುವ ಪರಿಷ್ಕೃತ ಮುಂಭಾಗದ ಬಂಪರ್, ದುಂಡಾದ ಹೊಸದಾಗಿ ವಿನ್ಯಾಸಗೊಳಿಸಲಾದ ಹೆಡ್‌ಲ್ಯಾಂಪ್‌ಗಳು ಕ್ರೋಮ್ ಸ್ಟ್ರಿಪ್ ಮೂಲಕ ಸಂಪರ್ಕ ಹೊಂದಿದ್ದು, ಸಿಗ್ನೇಚರ್ ಲೋಗೋದೊಂದಿಗೆ ಮಧ್ಯದಲ್ಲಿ ವಿಲೀನಗೊಳ್ಳುತ್ತವೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಇದರೊಂದಿಎಗ್ ಫಾಗ್ ಲ್ಯಾಂಪ್ ಸುತ್ತುವರಿದಿದೆ ಮತ್ತು ಫ್ರಂಟ್ ಏಪ್ರನ್ ಕಾಂಟ್ರಾಸ್ಟ್ ಬ್ಲ್ಯಾಕ್ ಜೊತೆಗೆ ಅದರ ಸ್ಪೋರ್ಟಿಯರ್ ಫ್ರಂಟ್ ಲುಕ್ ಅನ್ನು ಹೆಚ್ಚು ಸೇರಿಸುತ್ತದೆ. ಕಡಿಮೆ ಟ್ರಿಮ್‌ಗಳು ಅಲಾಯ್ ವ್ಹೀಲ್ ಗಳನ್ನು ಪಡೆಯುತ್ತವೆ ಹೆಚ್ಚಿನ ರೂಪಾಂತರಗಳನ್ನು ಬ್ಲ್ಯಾಕ್ 14-ಇಂಚಿನ ಅಲಾಯ್ ವ್ಹೀಲ್ ಗಳನ್ನು ಪ್ರತ್ಯೇಕವಾಗಿ ನೀಡಲಾಗುವುದು

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು 2020 ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ನಂತರ ಹಲವು ಕಾರಣಗಳಿಂದ ಬಿಡುಗಡೆಯನ್ನು ಮುಂದೂಡಿದ್ದರು. ಬಳಿಕ ಕಂಪನಿಯು 2021ರ ಏಪ್ರಿಲ್-ಮೇ ತಿಂಗಳುಗಳ ಅವಧಿಯ ನಡುವೆ ಬಿಡುಗಡೆಗೊಳಿಸಲು ಯೋಜಿಸಲಾಗಿತ್ತು. ಆದರೆ ಕರೋನಾ ಸೋಂಕಿನ ಆರ್ಭಟ ಹೆಚ್ಚಳದಿಂದಾಗಿ ಮತ್ತೊಮ್ಮೆ ಮುಂದೂಡಿಕೆ ಮಾಡಿದ್ದರು.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಇನ್ನು ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗುತ್ತಿದೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಇದನ್ನು ತಯಾರಿಸಲಾಗಿದೆ. ಈ ಮಾರುತಿ ಸೆಲೆರಿಯೊ ಹೊಸದಾಗಿ ವಿನ್ಯಾಸಗೊಳಿಸಿದೆ. ಈ ಹೊಸ ಹ್ಯಾಚ್‌ಬ್ಯಾಕ್ ಒಳಭಾಗದಲ್ಲಿ 7.0-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಕೂಡ ಒಳಗೊಂಡಿರುತ್ತದೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಈ ಹೊಸ ಸೆಲೆರಿಯೊ ಹ್ಯಾಚ್‌ಬ್ಯಾಕ್ ಒಳಭಾಗದಲ್ಲಿ 7.0-ಇಂಚಿನ ಸ್ಮಾರ್ಟ್‌ಪ್ಲೇ ಸ್ಟುಡಿಯೋ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ. ಈ ಸಿಸ್ಟಂ ಆಪಲ್ ಕಾರ್ ಪ್ಲೇ ಮತ್ತು ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿ ಫೀಚರ್ ಅನ್ನು ಕೂಡ ಒಳಗೊಂಡಿರುತ್ತದೆ. ಇನ್ನು ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಬದಲಾಯಿಸಲಾಗುವುದಿಲ್ಲ. ಆದರೆ ಡ್ಯಾಶ್‌ಬೋರ್ಡ್, ಸ್ಟೀಯರಿಂಗ್ ವೀಲ್ ಮತ್ತು ಸೆಂಟರ್ ಕನ್ಸೋಲ್ ಅನ್ನು ಪರಿಷ್ಕರಿಸಲಾಗುತ್ತದೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

2021ರ ಮಾರುತಿ ಸೆಲೆರಿಯೊ ಕಾರಿನಲ್ಲಿ ಆಟೋಮ್ಯಾಟಿಕ್ ಕ್ಲೈಮೇಂಟ್ ಕಂಟ್ರೋಲ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು ಇತರ ಪ್ರೀಮಿಯಂ ಫೀಚರ್ ಗಳನ್ನು ಕೂಡ ಒಳಗೊಂಡಿರಲಿದೆ.ಈ ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಕಾರಿನಲ್ಲಿ ಸುರಕ್ಷತೆಗಾಗಿ, ಸ್ಟ್ಯಾಂಡರ್ಡ್ ಸೀಟ್‌ಬೆಲ್ಟ್ ಅಲರ್ಟ್, ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡೆಲವೆರಿಯೊಂದಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರಿವರ್ಸ್ ಕ್ಯಾಮೆರಾ ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಅನ್ನು ಕೂಡ ನೀಡಬಹುದು.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಇನ್ನು ಮಾರುತಿ ಸುಜುಕಿ ಭಾರತದಲ್ಲಿ ತನ್ನ ಜನಪ್ರಿಯ ಮಾದರಿಗಳನ್ನು ನವೀಕರಿಸಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಮಾರುತಿ ಸುಜುಕಿ ಕಂಪನಿಯು ಸ್ವಿಫ್ಟ್ ಹ್ಯಾಚ್‌ಬ್ಯಾಕ್, ಡಿಜೈರ್ ಕಾಂಪ್ಯಾಕ್ಟ್ ಸೆಡಾನ್ ಮತ್ತು ವಿಟಾರಾ ಬ್ರೆಝಾ ಸಬ್ ಕಾಂಪ್ಯಾಕ್ಟ್ ಎಸ್‌ಯುವಿಯ ಸಿಎನ್‌ಜಿ ಮಾದರಿಗಳಾಗಿ ಬಿಡುಗಡೆಗೊಳಿಸಲಿದೆ. ಈ ಮೂರು ಸಿಎನ್‌ಜಿ ಮಾದರಿಗಳು ಈ ವರ್ಷದ ಹಬ್ದದ ಸೀಸನ್ ನಲ್ಲಿ ಬಿಡುಗಡೆಯಾಗುವಾ ಸಾಧ್ಯತೆಗಳಿದೆ.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಈ ಹೊಸ ಕಾರಿನಲ್ಲಿ ಎಂಜಿನ್ ಅನ್ನು ಬದಲಾಯಿಸಬಹುದು, ಇದರಲ್ಲಿ ಹೊಸ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು, ಈ ಎಂಜಿನ್ 83 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು.

ಹೊಸ ಬದಲಾವಣೆಗಳೊಂದಿಗೆ ಬಿಡುಗಡೆಗೆ ಸಜ್ಜಾದ 2021ರ Maruti Celerio ಕಾರು

ಈ ಎಂಜಿನ್ 68 ಬಿಹೆಚ್‌ಪಿ ಪವರ್ ಮತ್ತು 90 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಎಲ್ಲಾ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಎಎಂಟಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಬಹುದು ಎಂದು ನಿರೀಕ್ಷಿಸುತ್ತೇವೆ, ಈ ಹೊಸ ಮಾರುತಿ ಸೆಲೆರಿಯೊ ಹೊಸ ವಿನ್ಯಾಸ, ಫೀಚರ್ಸ್ ಮತ್ತು ಅತ್ಯಾಧುನಿಕ ತಂತ್ರಜ್ಙಾನಗಳನ್ನು ಒಳಗೊಂಡಿರಬಹುದು.

Article Published On: Friday, September 24, 2021, 19:43 [IST]
English summary
New maruti suzuki celerio hatchback expected launch by november 2021 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+